ಉಳಗನಾಯಗನ್ ಕಮಲ್ ಹಾಸನ್ (Kamal Haasan) ನಟನೆಯ ಬಹುನಿರೀಕ್ಷಿತ ಇಂಡಿಯನ್-2 ಸಿನಿಮಾ. 1996ರಲ್ಲಿ ‘ಇಂಡಿಯನ್’ ಸಿನಿಮಾ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿತ್ತು. ಸೇನಾಪತಿ ಪಾತ್ರದಲ್ಲಿ ಕಮಲ್ ಹಾಸನ್ ಅವರು ಮಿಂಚಿದ್ದರು. ಅದರ ಮುಂದುವರಿದ ಭಾಗವಾಗಿ ‘ಇಂಡಿಯನ್ 2’ (Indian 2) ಸಿನಿಮಾ ಮೂಡಿ ಬರುತ್ತಿದೆ.

View this post on Instagram
ಅನಿರುದ್ಧ್ ರವಿಚಂದರ್ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ರವಿವರ್ಮನ್ ಹಾಗೂ ರತ್ನವೇಲು ಅವರು ಛಾಯಾಗ್ರಹಣ ಮಾಡಿದ್ದಾರೆ. ಎ. ಶ್ರೀಕರ್ ಪ್ರಸಾದ್ ಅವರು ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ಪ್ರತಿಷ್ಠಿತ ಲೈಕಾ ಪ್ರೊಡಕ್ಷನ್ಸ್ ಮತ್ತು ರೆಡ್ ಜೈಂಟ್ ಮೂವೀಸ್ ಸಂಸ್ಥೆಗಳ ಮೂಲಕ ಇಂಡಿಯನ್ 2 ಸಿನಿಮಾ ನಿರ್ಮಾಣವಾಗಿದೆ. ಇದನ್ನೂ ಓದಿ:ದೊಡ್ಮನೆ ಸೊಸೆಗೆ ಅವಹೇಳನ: ಸಾರ್ವಜನಿಕರಿಂದಲೂ ಆಕ್ರೋಶ
ಹಿರಿಯ ಸ್ವಾತಂತ್ರ‍್ಯ ಹೋರಾಟಗಾರನು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಹಾನಿಯನ್ನು ಈ ಸಿನಿಮಾ ಒಳಗೊಂಡಿದೆ. ಕಮಲ್ ಹಾಸನ್ ಮಾತ್ರವಲ್ಲದೇ ಅನೇಕ ಜನಪ್ರಿಯ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ಕಾಜಲ್ ಅಗರ್ವಾಲ್, ಸಿದ್ಧಾರ್ಥ್, ರಕುಲ್ ಪ್ರೀತ್ ಸಿಂಗ್ (Rakul Preet Singh), ಕಾಳಿದಾಸ್ ಜಯರಾಮ್, ಪ್ರಿಯಾ ಭವಾನಿ ಶಂಕರ್, ವಿವೇಕ್, ಸಮುದ್ರಖನಿ, ನೆಡುಮುಡಿ ವೇಣು, ಬಾಬಿ ಸಿಂಹ, ದೆಹಲಿ ಗಣೇಶ್, ಗುರು ಸೋಮಸುಂದರಂ, ಜಯಪ್ರಕಾಶ್, ವೆನ್ನೆಲ ಕಿಶೋರ್, ಮನೋಬಾಲಾ, ದೀಪಾ ಶಂಕರ್ ಮುಂತಾದವರು ನಟಿಸಿದ್ದಾರೆ.

