ತಮಿಳಿನ ಸೂಪರ್ ಹಿಟ್ ಜೋಡಿ ವಿಜಯ್- ಜ್ಯೋತಿಕಾ (Jyothika) ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಬರೋಬ್ಬರಿ 20 ವರ್ಷಗಳ ನಂತರ ವಿಜಯ್- ಜ್ಯೋತಿಕಾ ತೆರೆಯ ಮೇಲೆ ಕಮಾಲ್ ಮಾಡಲು ರೆಡಿಯಾಗಿದ್ದಾರೆ. ಇದನ್ನೂ ಓದಿ:ಆಗಸ್ಟ್ 16ರಂದು ಸ್ಪಂದನಾ ಉತ್ತರ ಕ್ರಿಯೆಗೆ ಸರ್ವರಿಗೂ ಆಹ್ವಾನಿಸಿದ ವಿಜಯ ರಾಘವೇಂದ್ರ ಕುಟುಂಬ
ವಿಜಯ್ ರಾಜಕೀಯ ಅಖಾಡಕ್ಕೆ ಇಳಿಯುತ್ತಾರೆ ಎಂಬ ಸುದ್ದಿಯ ನಡುವೆ ಹೊಸ ಸಿನಿಮಾದ ಅಪ್‌ಡೇಟ್ ವಿಷ್ಯವಾಗಿ ಮತ್ತೆ ನ್ಯೂಸ್‌ನಲ್ಲಿದ್ದಾರೆ. ದಳಪತಿ ವಿಜಯ್ (Thalapathy Vijay) ಅವರು ಈಗ ‘ಲಿಯೋ’ (Leo) ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಆ ಚಿತ್ರಕ್ಕೆ ಲೋಕೇಶ್ ಕನಗರಾಜ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ನಡುವೆ ಅವರ ಹೊಸ ಸಿನಿಮಾದ ಬಗ್ಗೆಯೂ ಗಾಸಿಪ್ ಹಬ್ಬಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗಲಿರುವ ವಿಜಯ್ ಅವರ ಹೊಸ ಚಿತ್ರಕ್ಕೆ ವೆಂಕಟ್ ಪ್ರಭು ನಿರ್ದೇಶನ ಮಾಡಲಿದ್ದು, ಆ ಚಿತ್ರದಲ್ಲಿ ಜ್ಯೋತಿಕಾ (Jyotika) ಕೂಡ ನಟಿಸುತ್ತಾರೆ ಎಂದು ಎನ್ನಲಾಗಿದೆ.
ಬಹುಭಾಷೆಯ ಸಿನಿಮಾಗಳಲ್ಲಿ ಜ್ಯೋತಿಕಾ ಮಿಂಚಿದ್ದಾರೆ. ತಮಿಳಿನ ಖುಷಿ, ತಿರುಮಲೈ ಸಿನಿಮಾಗಳಲ್ಲಿ ಜ್ಯೋತಿಕಾ ಮತ್ತು ದಳಪತಿ ವಿಜಯ್ ಅವರು ಜೊತೆಯಾಗಿ ನಟಿಸಿದ್ದರು. ಈಗ ಅವರು 2 ದಶಕದ ಬಳಿಕ ತೆರೆಹಂಚಿಕೊಳ್ಳಲಿದ್ದಾರೆ ಎಂಬ ವಿಷಯ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಈ ಸುದ್ದಿ ಬಗ್ಗೆ ಚಿತ್ರತಂಡದ ಕಡೆಯಿಂದ ಅಧಿಕೃತ ಘೋಷಣೆ ಆಗಬೇಕಿದೆ. ಈ ಸಿನಿಮಾದಲ್ಲಿ ಜ್ಯೋತಿಕಾ ಅವರು ನಾಯಕಿ ಪಾತ್ರ ಮಾಡುತ್ತಾರೋ ಅಥವಾ ಬೇರೆ ಯಾವುದಾದರೂ ಮುಖ್ಯ ಪಾತ್ರಕ್ಕೆ ಬಣ್ಣ ಹಚ್ಚುತ್ತಾರೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಒಟ್ನಲ್ಲಿ ತಮಿಳಿನ ಹಿಟ್ ಜೋಡಿ ವಿಜಯ್- ಜ್ಯೋತಿಕಾ ಒಟ್ಟಿಗೆ ತೆರೆ ಹಂಚಿಕೊಳ್ತಾರೆ ಎಂದಾಕ್ಷಣ ಫ್ಯಾನ್ಸ್‌ಗೆ ನಿರೀಕ್ಷೆ ಡಬಲ್ ಆಗಿದೆ. ತೆರೆಯ ಮೇಲೆ ಕಾತರದಿಂದ ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ.