ಮೈಸೂರು: ನಾನು ಯಾವಾಗಲೂ ಶಕ್ತಿಧಾಮದ ಸ್ವಯಂ ಸೇವಕನಾಗಿರುತ್ತೇನೆ. ಅದಕ್ಕೆ ರಾಜ್ ಕುಟುಂಬದವರು ಅನುಮತಿ ನೀಡಿ ತಮಿಳು ನಟ(Actor) ವಿಶಾಲ್(Vishal) ಮನವಿ ಮಾಡಿದರು.
ಶಕ್ತಿಧಾಮ(Shaktidhama) ಭೇಟಿ ಬಳಿಕ ಮಾತನಾಡಿದ ಅವರು, ಶಕ್ತಿಧಾಮ ನನಗೆ ದೇವಸ್ಥಾನದ ಅನುಭವ ನೀಡಿತ್ತು. ದೇವಸ್ಥಾನಕ್ಕೆ ಹೋದರೆ ಒಂದು ದೇವರ ದರ್ಶನ ಪಡೆಯಬಹುದು. ಇಲ್ಲಿ ಒಂದೊಂದು ಮಕ್ಕಳಲ್ಲೂ ಒಂದೊಂದು ದೇವರನ್ನು ನೋಡಿದೆ. ಮಕ್ಕಳು ತುಂಬಾ ಲವ ಲವಿಕೆಯಿಂದ ಇದ್ದಾರೆ ಎಂದು ಸಂತೋಷ ವ್ಯಕ್ತಪಡಿಸಿದರು.
Advertisement
Advertisement
ಪುನೀತ್ ರಾಜ್ ಕುಮಾರ್ ಹಾಗೂ ಗೀತಮ್ಮ ಅವರದ್ದು ಅತ್ಯುತ್ತಮವಾದ ಕೆಲಸವಾಗಿದೆ. ಈ ಬಗ್ಗೆ ಶಿವಕುಮಾರ್ ಜೊತೆ ಮಾತನಾಡಿದ್ದೇನೆ. ರಾಜ್ ಕುಟುಂಬದ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಮಕ್ಕಳ ಜೊತೆ ನಾನು ಮಾತನಾಡಿದೆ. ಮಕ್ಕಳು ಡ್ಯಾನ್ಸ್ ಮಾಡಿದರು, ಆಟವಾಡಿದ್ರು ತುಂಬಾ ಉತ್ಸಾಹದಿಂದ ಇದ್ದಾರೆ. ಇಲ್ಲಿರುವ ಮಕ್ಕಳಿಗೆ ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
Advertisement
ಈ ಹಿಂದೆ ಪುನೀತ್ ರಾಜ್‌ಕುಮಾರ್ ಅವರ ಅಕಾಲಿಕ ನಿಧನದ ಸಂದರ್ಭದಲ್ಲಿ ಮಾತನಾಡಿದ್ದ ವಿಶಾಲ್, ಪುನೀತ್ ರಾಜ್‌ಕುಮಾರ್(Puneet Rajkumar) ಓದಿಸುತ್ತಿದ್ದ ಮಕ್ಕಳ ವಿದ್ಯಾಭ್ಯಾಸದ ಹೊಣೆ ಹೊರುವೆ. 1800 ಮಕ್ಕಳ ಜವಾಬ್ದಾರಿ ನನ್ನದು ಎಂದು ಘೋಷಣೆ ಮಾಡಿದ್ದರು. ಇದನ್ನೂ ಓದಿ: ಕಾರು ಆಕ್ಸಿಡೆಂಟ್ ಮೂಲಕ ಅನಿರುದ್ಧಗೆ ಗುಡ್ ಬೈ ಹೇಳಿದ ಜೊತೆ ಜೊತೆಯಲಿ ಟೀಮ್