ರಾಕಿಂಗ್ ಸ್ಟಾರ್ ಯಶ್ (Yash) ‘ಟಾಕ್ಸಿಕ್’ (Toxic Film) ಸಿನಿಮಾದ ಶೂಟಿಂಗ್‌ನಲ್ಲಿ ತೊಡಗಿಸಿಕೊಂಡಿದ್ದಾರೆ. ಮುಂಬೈ, ಗೋವಾದಲ್ಲಿ ಚಿತ್ರೀಕರಣ ನಡೆಸಿದ ಬಳಿಕ ಮತ್ತೆ ಬೆಂಗಳೂರಿನಲ್ಲಿ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಈ ಚಿತ್ರಕ್ಕಾಗಿ ನಯನತಾರಾ, ಕಿಯಾರಾ ಅಡ್ವಾಣಿ ಭಾಗಿಯಾಗಿದ್ದಾರೆ ಎನ್ನಲಾದ ಸುದ್ದಿಯೊಂದು ಈಗ ಚರ್ಚೆಗೆ ಗ್ರಾಸವಾಗಿದೆ.
Advertisement
ಮಲಯಾಳಂ ನಿರ್ದೇಶಕಿ ಗೀತು ಮೋಹನ್‌ದಾಸ್ ಅವರು ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ಸದ್ಯ ಬೆಂಗಳೂರಿನ ಹೆಚ್‌ಎಂಟಿ ಫ್ಯಾಕ್ಟರಿಯಲ್ಲಿ ನಡೆಯುತ್ತಿರುವ ಚಿತ್ರೀಕರಣಕ್ಕೆ ನಯನತಾರಾ, ಕಿಯಾರಾ, ತಾರಾ ಸುತಾರಿಯಾ, ಹುಮಾ ಖುರೇಶಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಈ ಕುರಿತು ಚಿತ್ರತಂಡ ಅಧಿಕೃತ ಮಾಹಿತಿ ನೀಡ್ತಾರಾ? ಕಾದುನೋಡಬೇಕಿದೆ. ಇದನ್ನೂ ಓದಿ:ಬಾಲಿವುಡ್ ನಟ ಸೂರಜ್ ಪಾಂಚೋಲಿಗೆ ಸುಟ್ಟ ಗಾಯ- ಆಸ್ಪತ್ರೆಗೆ ದಾಖಲು
Advertisement
Advertisement
ಇನ್ನೂ ಜ.8ರಂದು ಯಶ್ ಬರ್ತ್‌ಡೇ ‘ಟಾಕ್ಸಿಕ್’ ಗ್ಲಿಂಪ್ಸ್ ರಿವೀಲ್ ಆಗಿತ್ತು. ಯಶ್ ಸಖತ್ ಸ್ಟೈಲೀಶ್ ಕಾಣಿಸಿಕೊಳ್ಳುವ ಮೂಲಕ ಫ್ಯಾನ್ಸ್‌ಗೆ ಸಿನಿಮಾ ಕುರಿತು ನಿರೀಕ್ಷೆ ಹೆಚ್ಚಿಸಿದ್ದರು. ಡ್ರಗ್ಸ್ ಮಾಫಿಯಾ ಕುರಿತು ಮಾಡಿರೋ ಸ್ಟೋರಿ ಇದಾಗಿದೆ.
Advertisement
ಈ ಚಿತ್ರದ ಜೊತೆ ಯಶ್ ಬಾಲಿವುಡ್‌ನ ‘ರಾಮಾಯಣ’ (Ramayana) ಚಿತ್ರ ಕೂಡ ಮಾಡಲಿದ್ದಾರೆ. ಅದರಲ್ಲಿ ರಾವಣನಾಗಿ ಅಬ್ಬರಿಸಲಿದ್ದಾರೆ.