ಕಾಲಿವುಡ್‌ನಲ್ಲಿ ಹಲವು ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದ ಸೂರ್ಯ ಪ್ರಕಾಶ್ (Surya Prakash) ಇಂದು (ಮೇ 27) ಹೃದಯ ಸ್ತಂಭನದಿಂದ (Cardiac Arrest) ನಿಧನರಾಗಿದ್ದಾರೆ. ಅವರ ನಿಧನಕ್ಕೆ ತಮಿಳು ನಟ ಶರತ್ ಕುಮಾರ್ ದಂಪತಿ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ:ಸಮರ್ಜಿತ್ ಲಂಕೇಶ್ ಜೊತೆ ಆರ್‌ಸಿಬಿ ಆಟಗಾರ್ತಿ ಶ್ರೇಯಾಂಕಾ ಪಾಟೀಲ್ ಮಸ್ತ್ ಸ್ಟೆಪ್ಸ್
எனது நடிப்பில் வெளியான மாயி, திவான் ஆகிய வெற்றிப்படங்களை இயக்கிய எனது அருமை நண்பர் சூர்யபிரகாஷ் அவர்கள் இன்று அதிகாலை இறைவனடி சேர்ந்தார் என்ற செய்தி மிகுந்த அதிர்ச்சியும், வேதனையும் அளிக்கிறது.
நேற்றைய தினம் கூட அவருடன் பேசிக் கொண்டிருந்த நிலையில், நிலையற்ற வாழ்வில் அவரது… pic.twitter.com/vxgqBSPLQE
— R Sarath Kumar (மோடியின் குடும்பம்) (@realsarathkumar) May 27, 2024
ನಾನು ನಟಿಸಿದ ‘ಮಾಯಿ’ ಮತ್ತು ‘ದಿವಾನ್’ ಚಿತ್ರಗಳನ್ನು ನಿರ್ದೇಶಿಸಿದ ನನ್ನ ಆತ್ಮೀಯ ಸ್ನೇಹಿತ ಸೂರ್ಯ ಪ್ರಕಾಶ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ನಿನ್ನೆಯಷ್ಟೇ ಅವರೊಂದಿಗೆ ಮಾತನಾಡಿದ್ದೆ. ಅವರ ಹಠಾತ್ ನಿಧನ ತುಂಬಾ ನೋವುಂಟು ಮಾಡಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಕೇಳಿಕೊಳ್ಳುತ್ತೇನೆ ಎಂದು ನಟ ಶರತ್‌ಕುಮಾರ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
56ನೇ ವಯಸ್ಸಿಗೆ ಸೂರ್ಯ ಪ್ರಕಾಶ್ ಸಾವಿನ ಸುದ್ದಿ ಕೇಳಿ ಸುದ್ದಿ ಕೇಳಿ ಕುಟುಂಬಸ್ಥರು, ಅಭಿಮಾನಿಗಳಿಗೆ ಆಘಾತವಾಗಿದೆ. ಅಂತಿಮ ವಿಧಿವಿದಾನಗಳ ಬಗ್ಗೆ ಇನ್ನಷ್ಟೇ ಹೆಚ್ಚಿನ ವಿವರ ಸಿಗಬೇಕಿದೆ. ಅಂದಹಾಗೆ, ಮಾಯಿ, ಮಣಿಕ್ಕಂ, ದಿವಾನ್, ಭರತಸಿಂಹ ರೆಡ್ಡಿ ಸಿನಿಮಾಗಳನ್ನು ನಿರ್ದೇಶಿಸುವ ಮೂಲಕ ಸೂರ್ಯ ಪ್ರಕಾಶ್ ಹಿಟ್ ಚಿತ್ರಗಳನ್ನು ನೀಡಿದ್ದರು.