ಚೆನ್ನೈ: ಕೊರೊನಾ ಲಾಕ್‍ಡೌನ್ ಸಮಯವನ್ನು ಕೆಲವು ನಟ-ನಟಿಯರು ತಮ್ಮ ಕುಟುಂಬದ ಜೊತೆಗೆ ಕಳೆಯುತ್ತಿದ್ದಾರೆ. ಕೆಲವರು ಸಾಮಾಜಿಕ ಜಾಲತಾಣದಲ್ಲಿ ಲಾಕ್‍ಡೌನ್‍ನಲ್ಲಿ ಏನು ಮಾಡುತ್ತಿದ್ದೇವೆ ಎಂದು ಶೇರ್ ಮಾಡುತ್ತಾ ಅಭಿಮಾನಿಗಳಿಗೆ ಅಪ್ಡೇಟ್ ಕೊಡುತ್ತಿದ್ದಾರೆ. ಆದರೆ ತಮಿಳು ನಟಿಯೊಬ್ಬರು ಟ್ರ್ಯಾಕ್ಟರ್ ಹತ್ತಿ ಹೊಲ ಉಳುಮೆ ಮಾಡೋದ್ರಲಿ ಬ್ಯುಸಿಯಾಗಿದ್ದಾರೆ.
ತಮಿಳು ನಟಿ ಕೀರ್ತಿ ಪಾಂಡಿಯನ್ ಟ್ರ್ಯಾಕ್ಟರ್ ಓಡಿಸುತ್ತಾ ಹೊಲ ಉಳುಮೆ ಮಾಡುತ್ತಾ ತಮ್ಮ ಲಾಕ್‍ಡೌನ್ ಅವಧಿಯನ್ನು ಎಂಜಾಯ್ ಮಾಡುತ್ತಿದ್ದಾರೆ. ಹೊಲದಲ್ಲಿ ಕೆಲಸ ಮಾಡುತ್ತಾ ಲಾಕ್‍ಡೌನ್ ಸಮಯ ಕಳೆಯುತ್ತಿರುವ ನಟಿ ಈ ಬಗ್ಗೆ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಮತ್ತೆ ಕೃಷಿಯನ್ನು ಪ್ರಾರಂಭಿಸಿದ್ದೇನೆ ಎಂದು ಕ್ಯಾಪ್ಷನ್ ಜೊತೆಗೆ ಕ್ವಾರಂಟೈನ್, ಫಾರ್‍ಮಿಂಗ್ ಎಂದು ಹ್ಯಾಶ್‍ಟ್ಯಾಗ್ ಹಾಕಿ ಟ್ವಿಟ್ಟರ್, ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಶೇರ್ ಮಾಡಿದ್ದಾರೆ.
Landscaping! ♥️
Let the farming begin ???????? #quarantine #farming
(Again, this is our quarantine gated home property, it is not a public area. We are being very much responsible ????) pic.twitter.com/j3e7xkgwPu
— Keerthi Pandian (@iKeerthiPandian) April 17, 2020
ಮಲಯಾಳಂನಿಂದ ತಮಿಳಿಗೆ ರಿಮೇಕ್ ಆಗುತ್ತಿರುವ ಹೆಲನ್ ಸಿನಿಮಾದಲ್ಲಿ ಕೀರ್ತಿ ಪಾಂಡಿಯನ್ ಸದ್ಯ ನಟಿಸುತ್ತಿದ್ದಾರೆ. ಕೀರ್ತಿ ತಂದೆ ಅರುಣ್ ಪಾಂಡಿಯನ್ ಕೂಡ ನಟರಾಗಿದ್ದು, ಸಾಕಷ್ಟು ತಮಿಳಿನ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ತಮಿಳು ಮಾತ್ರವಲ್ಲದೇ ಕನ್ನಡ, ತೆಲುಗು ಸಿನಿಮಾಗಳಲ್ಲಿ ಕೂಡ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ. ಹಲವು ಚಿತ್ರಗಳನ್ನು ನಿರ್ಮಾಣ ಕೂಡ ಮಾಡಿದ್ದಾರೆ.
ಕೀರ್ತಿ ಅವರು ಪಕ್ಕಾ ಹಳ್ಳಿ ಹುಡುಗಿಯಂತೆ ಟ್ರ್ಯಾಕ್ಟರ್ ಹತ್ತಿ ಹೊಲ ಉಳುಮೆ ಮಾಡುತ್ತಿರುವ ವಿಡಿಯೋ ನೋಡಿದ ಅಭಿಮಾನಿಗಳು ಫಿದಾ ಆಗಿದ್ದು, ಕೀರ್ತಿ ಅವರ ಹಳ್ಳಿ ಹುಡುಗಿ ಅವತಾರಕ್ಕೆ ಮನಸೋತಿದ್ದಾರೆ.
https://www.instagram.com/p/B_FS5CTnDDg/