LatestMain PostNational

ತಮಿಳುನಾಡಲ್ಲಿ ಸರ್ಕಾರಿ ನೌಕರಿಗೆ ತಮಿಳು ಕಡ್ಡಾಯ

– ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತಮಿಳು ಭಾಷೆಯ ಪ್ರಶ್ನೆಪತ್ರಿಕೆ

ಚೆನ್ನೈ: ಸರ್ಕಾರಿ ನೌಕರಿಗೆ ಸೇರಬೇಕೆಂದರೆ ಇನ್ನುಮುಂದೆ ತಮಿಳು ಭಾಷಾ ವಿಷಯದ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.

ರಾಜ್ಯದ ಸರ್ಕಾರಿ ನೌಕರರಿಗೆ ತಮಿಳು ಜ್ಞಾನ ಇರಬೇಕು, ಜನರಿಗೆ ಮಾತೃಭಾಷೆಯಲ್ಲಿ ಸರ್ಕಾರಿ ಸೇವೆಗಳು ದೊರಕಬೇಕು ಮತ್ತು ತಮಿಳು ಭಾಷಿಕರಿಗೇ ಸ್ಥಳೀಯ ಉದ್ಯೋಗಗಳು ಸಿಗಬೇಕು ಎಂಬ ಉದ್ದೇಶದೊಂದಿಗೆ ತಮಿಳುನಾಡು ಸರ್ಕಾರ ಎಲ್ಲ ಸರ್ಕಾರಿ ನೌಕರರಿಗೆ ತಮಿಳು ಭಾಷೆಯನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಹಾಗೂ ರಾಜ್ಯ ಸರ್ಕಾರಿ ಸ್ವಾಮ್ಯದ ಉದ್ದಿಮೆಗಳಿಗೆ ನೇಮಕಾತಿ ಮಾಡಿಕೊಳ್ಳಲು ತಮಿಳುನಾಡು ಲೋಕಸೇವಾ ಆಯೋಗ (ಟಿಎನ್‍ಪಿಎಸ್‍ಸಿ) ನಡೆಸುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ 10 ನೇ ತರಗತಿಯ ತಮಿಲೂ ಪರೀಕ್ಷೆಗಳಲ್ಲಿ ಇನ್ನುಮುಂದೆ ಪ್ರಶ್ನೆಪತ್ರಿಕೆ ಇರುತ್ತದೆ. ಅದರಲ್ಲಿ ಕನಿಷ್ಟ 40 ಅಂಕಗಳನ್ನು ಪಡೆದು ಉತ್ತೀರ್ಣರಾದರೆ ಮಾತ್ರ ಅಭ್ಯರ್ಥಿಯು ಟಿಎನ್‍ಪಿಎಸ್‍ಸಿ ಪರೀಕ್ಷೆಯಲ್ಲಿ ಬರೆದ ಇನ್ನಿತರ ವಿಷಯಗಳ ಉತ್ತರ ಪತ್ರಿಕೆಗಳನ್ನು ಮೌಲ್ಯ ಮಾಪನ ಮಾಡಲಾಗುತ್ತದೆ . ಈ ನಿಯಮ ತಕ್ಷಣ ದಿಂದಲೇ ಜಾರಿಗೆ ಬರಲಿದೆ. ಡಿ.1ರಂದು ಹೊರಡಿಸಿರುವ ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.ಇದನ್ನೂ ಓದಿ: ಲಸಿಕೆ ಪ್ರಮಾಣ ಪತ್ರ ಎಡವಟ್ಟು – ವ್ಯಾಕ್ಸಿನ್ ಪಡೆಯಲು ಬಂದಾತನಿಗೆ ಶಾಕ್

ಇದೇ ನಿಯಮ ರಾಜ್ಯ ಶಿಕ್ಷಕರ ನೇಮಕಾತಿ ಪರೀಕ್ಷೆ, ವೈದ್ಯಕೀಯ ನೇಮಕಾತಿ ಪರೀಕ್ಷೆ, ಯೂನಿಫಾರ್ಮ್ಡ್ ರಿಕ್ರೂಟ್‍ಮೆಂಟ್ ಬೋರ್ಡ್, ತಮಿಳುನಾಡು ಅರಣ್ಯ ಸೇವೆ ಮುಂತಾದ ಎಲ್ಲಾ ರಾಜ್ಯದ ಸರ್ಕಾರಿ ಸ್ಪರ್ಧಾತ್ಮಕ ಪರೀಕ್ಷೆಗಳಿಗಳು ಅನ್ವಯಿಸಲಿದ್ದು, ಶಿಘ್ರದಲ್ಲೇ ಆಯಾ ಮಂಡಳಿಗಳು ಆದೇಶ ಹೊರಡಿಸಲಿವೆ ಎಂದು ಸರ್ಕಾರ ಹೇಳಿದೆ. ಇದನ್ನೂ ಓದಿ: ಜಿಂಬಾಬ್ವೆಯಿಂದ ಗುಜರಾತ್‌ಗೆ ವಾಪಸ್ಸಾಗಿದ್ದ ವ್ಯಕ್ತಿಯಲ್ಲಿ ಓಮಿಕ್ರಾನ್‌ ಪತ್ತೆ- ಭಾರತದಲ್ಲಿ 3ಕ್ಕೇರಿದ ಸಂಖ್ಯೆ

Leave a Reply

Your email address will not be published. Required fields are marked *

Back to top button