ಚೆನ್ನೈ: ತಮಿಳುನಾಡಿನ (Tamil Nadu) ಮರಪಾಲಂ ಬಳಿ ಬಸ್ ಕಮರಿಗೆ ಬಿದ್ದ ಪರಿಣಾಮ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.
Advertisement
ಕೂನೂರು ಬಳಿಯ ಮರಪಾಲಂ (Marapalam) ಎಂಬಲ್ಲಿ 100 ಅಡಿ ಆಳದ ಕಂದಕಕ್ಕೆ ಬಿದ್ದ ಬಸ್‌ನಲ್ಲಿ 55 ಜನರು ಪ್ರಯಾಣಿಸುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಭಾರತದ ವಿರುದ್ಧ ಯುದ್ಧ ರೂಪಿಸಲು 2 ರಾಷ್ಟ್ರಗಳ ಭಯೋತ್ಪಾದಕರೊಂದಿಗೆ ಸಂಚು; ಮಣಿಪುರದಲ್ಲಿ ಶಂಕಿತ ಅರೆಸ್ಟ್
Advertisement
Advertisement
ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ದುರಂತಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.
Advertisement
ಕೊಯಮತ್ತೂರು ವಲಯದ ಪೊಲೀಸ್ ಉಪ ಮಹಾನಿರೀಕ್ಷಕ ಶರವಣ ಸುಂದರ್ ಮಾತನಾಡಿ, ಅಪಘಾತದಲ್ಲಿ ಎಂಟು ಜನರು ಮೃತಪಟ್ಟಿದ್ದಾರೆ. ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಹಿಳಾ ಮೀಸಲಾತಿ ಹೆಸರಲ್ಲಿ ಲಿಪ್‌ಸ್ಟಿಕ್, ಹೇರ್ ಸ್ಟೈಲ್ ಮಾಡಿಕೊಂಡವರು ಮುಂದೆ ಬರ್ತಾರೆ: RJD ನಾಯಕನ ವಿವಾದಿತ ಹೇಳಿಕೆ
ಮೃತರಲ್ಲಿ ಮೂವರು ಮಹಿಳೆಯರು ಮತ್ತು ಐವರು ಪುರುಷರಾಗಿದ್ದಾರೆ. ಸಂತ್ರಸ್ತರು ತೆಂಕಶಿ ಜಿಲ್ಲೆಯ ಕಡಯಂ ಮೂಲದವರಾಗಿದ್ದು, ಮನೆಗೆ ಹಿಂದಿರುಗುತ್ತಿದ್ದ ವೇಳೆ ಘಟನೆ ನಡೆದಿದೆ. ಗಾಯಾಳುಗಳನ್ನು ವೈದ್ಯಕೀಯ ಚಿಕಿತ್ಸೆಗಾಗಿ ಸಮೀಪದ ಕೊಯಮತ್ತೂರ್ ಆಸ್ಪತ್ರೆಗೆ ರವಾನಿಸಲಾಗಿದೆ.
Web Stories