ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್‌ನಲ್ಲಿ (Chennai Super Kings) ಯಾವುದೇ ಸ್ಥಳೀಯ ಆಟಗಾರರಿಲ್ಲ, ಈ ಹಿನ್ನೆಲೆಯಲ್ಲಿ ಆ ತಂಡವನ್ನು ನಿಷೇಧಿಸುವಂತೆ ತಮಿಳುನಾಡು (Tamil Nadu) ಸರ್ಕಾರಕ್ಕೆ ಧರ್ಮಪುರಿ ಪಟ್ಟಾಲಿ ಮಕ್ಕಳ್ ಕಚ್ಚಿ (PMK) ಶಾಸಕ ಎಸ್.ಪಿ ವೆಂಕಟೇಶ್ವರನ್ (SP Venkateshwaran) ಮನವಿ ಮಾಡಿದರು.
ವಿಧಾನಸಭೆಯಲ್ಲಿ ಮಾತನಾಡಿದ ಅವರು, ಐಪಿಎಲ್ ಅನ್ನು ಹಲವು ಯುವಕರು ಸಾಕಷ್ಟು ಆಸಕ್ತಿಯಿಂದ ವೀಕ್ಷಿಸುತ್ತಿದ್ದಾರೆ. ಚೆನ್ನೈ ತಮಿಳುನಾಡಿನ ರಾಜಧಾನಿಯಾಗಿದೆ. ಐಪಿಎಲ್‍ನಲ್ಲಿ ಚೆನ್ನೈ ಅನ್ನು ತನ್ನ ತಂಡದ ಹೆಸರಿನ ಭಾಗವಾಗಿ ಇಟ್ಟುಕೊಂಡಿದ್ದರೂ, ಅದು ನಮ್ಮ ಪ್ರತಿಭಾವಂತ ಸ್ಥಳೀಯ ಆಟಗಾರರಿಗೆ ಅವಕಾಶಗಳನ್ನು ಒದಗಿಸುವುದಿಲ್ಲ. ಈ ಹಿನ್ನೆಲೆಯಲ್ಲಿ ಆ ತಂಡವನ್ನು ನಿಷೇಧಿಸಬೇಕು ಎಂದು ಹೇಳಿದರು.
Advertisement
Advertisement
ಡಾ. ರಾಮದಾಸ್ ಅವರು ತಮಿಳು ಭಾಷೆಯ ರಕ್ಷಣೆಯ ಮಹತ್ವದ ಬಗ್ಗೆ ಯುವಕರಲ್ಲಿ ಜಾಗೃತಿ ಮೂಡಿಸಲು ತಮಿಳಿನ ಹುಡುಕಾಟದಲ್ಲಿ ಅಭಿಯಾನವನ್ನು ಪ್ರಾರಂಭಿಸಿದ್ದಾರೆ. ಈ ವೇಳೆ ಬಹಳಷ್ಟು ಜನರು ನನ್ನನ್ನು ಸಂಪರ್ಕಿಸಿ ಸ್ಥಳೀಯರಿಗೆ ಅವಕಾಶ ನೀಡದಿರುವುದರ ಬಗ್ಗೆ ತಿಳಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಬಟಿಂಡಾ ಸೇನಾ ಠಾಣೆಯೊಳಗೆ ಗುಂಡಿನ ದಾಳಿ – ನಾಲ್ವರು ಸಾವು
Advertisement
Advertisement
ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ತಮಿಳುನಾಡನ್ನು ಪ್ರತಿನಿಧಿಸುತ್ತಾರೆ. ಆದರೆ ತಮಿಳುನಾಡಿನ ಆಟಗಾರರು ತಂಡದಲ್ಲಿ ಇಲ್ಲ ಎಂಬಂತೆ ಬಿಂಬಿಸುತ್ತಿದ್ದಾರೆ. ನಮ್ಮ ರಾಜ್ಯದ ಹೆಚ್ಚಿನ ಜನರು ತಂಡದ ಭಾಗವಾಗಬೇಕೆಂದು ಆಗ್ರಹಿಸಿದರು. ಇದನ್ನೂ ಓದಿ: ರಾಜಕಾರಣ ನನಗೆ ಹೊಸದಲ್ಲ, ಹೊಂದಾಣಿಕೆ ಮಾತೇ ಇಲ್ಲ: ಡಿಕೆಶಿ