ನವದೆಹಲಿ: ಮಾಜಿ ಐಪಿಎಸ್ ಅಧಿಕಾರಿ, ಕರ್ನಾಟಕದ ಸಿಂಗಂ ಖ್ಯಾತಿಯ ಕೆ. ಅಣ್ಣಾಮಲೈಗೆ ವೈ ಶ್ರೇಣಿ ಭದ್ರತೆ ಕಲ್ಪಿಸಲಾಗಿದೆ.
ತಮಿಳುನಾಡು ಸರ್ಕಾರ ಪ್ರಸ್ತುತ ಅಣ್ಣಾಮಲೈಗೆ ಒದಗಿಸುತ್ತಿರುವ ಭದ್ರತೆಗಿಂತ ಹೆಚ್ಚಿನದ್ದಾಗಿದೆ. ಕೇಂದ್ರ ಗೃಹ ಸಚಿವಾಲಯವು ಅಣ್ಣಾಮಲೈಗೆ ಭದ್ರತೆಯ ಆತಂಕವಿದೆ ಎಂದು ಈ ಏರ್ಪಾಡು ಮಾಡಿದೆ.
Advertisement
ಭೀತಿ ಏನು?: ಕೆ ಅಣ್ಣಾಮಲೈಗೆ ಎದುರಾಗಿದ್ದ ಭದ್ರತಾ ಭೀತಿಯನ್ನು ಕೂಲಂಕಷವಾಗಿ ಅಧ್ಯಯನ ಮಾಡಿದ ಬಳಿಕ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ಗುಪ್ತಚರ ಇಲಾಖೆ ಪೊಲೀಸ್ ಹುದ್ದೆ ತೊರೆದು, ರಾಷ್ಟ್ರೀಯ ಪಕ್ಷದ ಜೊತೆ ರಾಜಕೀಯದಲ್ಲಿ ಗುರುತಿಸಿಕೊಂಡ ಅಣ್ಣಾಮಲೈ ಜೀವಕ್ಕೆ ಅಪಾಯವಿದೆ ಎಂಬುದು ಮನವರಿಕೆಯಾಗಿತ್ತು ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ರೈಲ್ವೆ ಇಲಾಖೆಯಿಂದ ಚಾರ್ ಧಾಮ್ ಯಾತ್ರೆಗೆ ಮೇ ತಿಂಗಳಲ್ಲಿ ವಿಶೇಷ ಆಫರ್
Advertisement
ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಸಶಸ್ತ್ರ ಅಧಿಕಾರಿಗಳು ಮತ್ತು ತಮಿಳುನಾಡು ಪೊಲೀಸ್ ಇಲಾಖೆಯ ಅಧಿಕಾರಿಗಳು, ದಿನದ 24 ಗಂಟೆಯೂ ಅಣ್ಣಾಮಲೈಗೆ ರಕ್ಷಣೆ ಒದಗಿಸಲಿದ್ದಾರೆ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ.