ಇಂದು (ಡಿ.27) ಬಸ್ ಧರ್ಮಪುರಿ ಸಮೀಪದ ಇಟ್ಟಿಯಂಪಟ್ಟೆ ಗ್ರಾಮದಿಂದ ಹೋಗುತ್ತಿದ್ದ ಓಂ ಶಕ್ತಿ ದೇವಸ್ಥಾನಕ್ಕೆ ತೆರಳುತ್ತಿತ್ತು. ಈ ವೇಳೆ ಕೃಷ್ಣಗಿರಿ ಜಿಲ್ಲೆಯ ಉತಂಗರೈ ಚೆನ್ನಮಲೈ ಶಾಲೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಹಳ್ಳಕ್ಕೆ ಬಿದ್ದಿದೆ. ಬಿದ್ದ ಪರಿಣಾಮ ದೇವಸ್ಥಾನಕ್ಕೆ ತೆರಳುತ್ತಿದ್ದ 42 ಭಕ್ತಾದಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.ಇದನ್ನೂ ಓದಿ: 28ನೇ ವಯಸ್ಸಿನಲ್ಲಿದ್ದಾಗ ಒಂದೇ ದಿನ 300 ಪುರುಷರೊಂದಿಗೆ ಸೆಕ್ಸ್ ಮಾಡಿದ್ದೆ – ಲಿಲ್ಲಿಗೆ ಜಾಸ್ಮಿನ್ ಕೌಂಟರ್
ತಕ್ಷಣವೇ ಸ್ಥಳೀಯರು ಗಾಯಳುಗಳನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಿದ್ದು, ಉತಂಗರೈ (Uthangarai) ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತುಂತುರು ಮಳೆಯಿಂದಾಗಿ ಖಾಸಗಿ ಬಸ್ ಅಪಘಾತಕ್ಕೀಡಾಗಿದ್ದು, ಅಪಘಾತದ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಸದ್ಯ ಉತಂಗರೈ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ವ್ಹೀಲಿಂಗ್ ಮಾಡ್ತಾ ಕ್ಯಾಂಟರ್‌ಗೆ ಡಿಕ್ಕಿ – ಇಬ್ಬರು ಯುವಕರ ದಾರುಣ ಸಾವು; ಬೈಕ್ ಅಪ್ಪಚ್ಚಿ!