– CWRC ಆದೇಶವನ್ನು ಕರ್ನಾಟಕ ಪಾಲಿಸಬೇಕು – ಪ್ರವೀಣ್ ಚಕ್ರವರ್ತಿ
ನವದೆಹಲಿ: ಕಾವೇರಿ ಜಲ ವಿವಾದವನ್ನು (Cauvery Water Dispute) ರಾಜ್ಯಸಭೆಯಲ್ಲಿ ಚರ್ಚೆಗೆ ತೆಗೆದುಕೊಳ್ಳುವಂತೆ ತಮಿಳುನಾಡು ಮತ್ತೊಮ್ಮೆ ಒತ್ತಾಯಿಸಿದೆ.
ಈ ಸಂಬಂಧ ತಮಿಳುನಾಡಿನ ಕಾಂಗ್ರೆಸ್ ರಾಜ್ಯಸಭಾ ಸಂಸದ ಪ್ರವೀಣ್ ಚಕ್ರವರ್ತಿ ಅವರು ರಾಜ್ಯಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಿದ್ದಾರೆ. ರೈತರ ಹಿತಾಸಕ್ತಿ ಹಾಗೂ ರಾಜ್ಯಗಳ ನಡುವಿನ ಸೂಕ್ಷ್ಮ ಸಂಬಂಧಕ್ಕೆ ಸಂಬಂಧಿಸಿದ ಈ ವಿಚಾರವನ್ನ ರಾಜ್ಯಸಭೆಯಲ್ಲಿ ಸಮಗ್ರವಾಗಿ ಚರ್ಚಿಸಬೇಕೆಂದು ಆಗ್ರಹಿಸಿದ್ದಾರೆ.

ಸಂಸದರು, ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಜಲಶಕ್ತಿ ಸಚಿವಾಲಯವು ದಾರಿ ತಪ್ಪಿಸುವ ಉತ್ತರ ನೀಡಿದೆ ಎಂದೂ ಕೂಡ ಅವರು ಆರೋಪಿಸಿದ್ದಾರೆ. ಇದನ್ನೂ ಓದಿ: ಸಚಿವ ಸಂಪುಟ ವಿಸ್ತರಣೆ ಕಸರತ್ತು – ಇಂದು ಅಂತಿಮ ಚರ್ಚೆ, ನಾಳೆ ಪ್ರಮಾಣ ವಚನ ಕಾರ್ಯಕ್ರಮ?
ಅದೇ ವೇಳೆ, ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕರ್ನಾಟಕವು ತಮಿಳುನಾಡಿಗೆ 4 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಶಿಫಾರಸು ಮಾಡಿದೆ. ಸಮಿತಿಯ ಶಿಫಾರಸಿನಂತೆ ಕರ್ನಾಟಕ ಸರ್ಕಾರ ನೀರು ಹಂಚಿಕೆ ಆದೇಶ ಪಾಲಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಜಾರ್ಖಂಡ್ | 1 ಕೋಟಿ ಬಹುಮಾನ ಹೊಂದಿದ್ದ ಮೋಸ್ಟ್ ವಾಂಟೆಡ್ ಮಾವೋವಾದಿ ಅರೆಸ್ಟ್
