ನವದೆಹಲಿ: ಕಾವೇರಿ ನ್ಯಾಯಾಧಿಕರಣ (Kaveri Tribunal) ಆದೇಶಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಕುರುವೈ ಬೆಳೆ ಬೆಳೆದಿರುವ ತಮಿಳುನಾಡು (Tamil Nadu) ಅದಕ್ಕೆ ನೀರು ಒದಗಿಸಲು ಕರ್ನಾಟಕದ (Karnataka) ಮೇಲೆ ಒತ್ತಡ ಹೇರುತ್ತಿದೆ. ಮಳೆ ಕೊರತೆಯಿಂದ ಸಂಕಷ್ಟದಲ್ಲಿರುವ ಅವಧಿಯಲ್ಲೂ ತಮಿಳುನಾಡು ಸಾಮಾನ್ಯ ಜಲ ವರ್ಷದ ನೀರಿನ ಪಾಲು ಕೇಳುತ್ತಿದೆ ಎಂದು ಕರ್ನಾಟಕ ಸರ್ಕಾರ ಆರೋಪಿಸಿದೆ.
ಜೂನ್, ಜುಲೈ, ಆಗಸ್ಟ್ ಅವಧಿಯಲ್ಲಿನ ಕಾವೇರಿ ನೀರು ಹರಿಸಲು ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ತಮಿಳುನಾಡು ಅರ್ಜಿ ಸಲ್ಲಿಸಿದ್ದು, ಶುಕ್ರವಾರ ನ್ಯಾ. ಬಿ.ಆರ್ ಗವಾಯಿ ಪೀಠದಲ್ಲಿ ವಿಚಾರಣೆಗೆ ಬರಲಿದೆ. ಈ ಹಿನ್ನೆಲೆ ವಿಚಾರಣೆಗೂ ಮುನ್ನ ಕರ್ನಾಟಕ ಸರ್ಕಾರ ಅಫಿಡವಿಟ್ ಸಲ್ಲಿಸಿದೆ. ಇದನ್ನೂ ಓದಿ: ಕೆಲಸ ಕೊಡಿಸುವ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ – ಬಸ್ ಕಂಡಕ್ಟರ್ ಅರೆಸ್ಟ್
ಈ ಜಲ ವರ್ಷದ ಆರಂಭದಲ್ಲಿ ತಮಿಳುನಾಡಿನ ಜಲಾಶಯದಲ್ಲಿ 69 ಟಿಎಂಸಿ ನೀರಿತ್ತು. ಕರ್ನಾಟಕ ಅಗಸ್ಟ್ 22ರವರೆಗೂ 26 ಟಿಎಂಸಿ ನೀರು ಹರಿಸಿದೆ. ಇದರಿಂದ 96 ಟಿಎಂಸಿ ನೀರು ತಮಿಳುನಾಡು ಬಳಿ ಸಂಗ್ರಹವಾದಂತಾಗಿದೆ. ಸದ್ಯ ತಮಿಳುನಾಡು 21 ಟಿಎಂಸಿ ನೀರಿದೆ ಎಂದು ಹೇಳುತ್ತಿದೆ. ಕುರುವೈ ಬೆಳೆಗೆ 32 ಟಿಎಂಸಿ ನೀರು ಬೇಕು. ಈಗಾಗಲೇ 22 ಟಿಎಂಸಿ ನೀರು ಬಳಕೆ ಮಾಡಿಕೊಂಡಿದೆ. ಬಾಕಿ 9.83 ಟಿಎಂಸಿ ನೀರು ಸೆಪ್ಟೆಂಬರ್ ಅಂತ್ಯದವರೆಗೂ ಬೇಕಾಗುತ್ತದೆ. ಆದರೆ 1.85 ಲಕ್ಷ ಎಕರೆ ಮೀರಿ ಕುರುವೈ ಬೆಳೆ ಬೆಳೆದು ಅಗತ್ಯಕ್ಕಿಂತ ಹೆಚ್ಚು ನೀರಿನ ಬಳಕೆ ಮಾಡುತ್ತಿದೆ. ಇದು ಟ್ರಿಬ್ಯುನಲ್ ಆದೇಶದ ಉಲ್ಲಂಘನೆಯಾಗಿದ್ದು, ತಮಿಳುನಾಡು ಕಾವೇರಿ ನೀರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಅಫಿಡವಿಟ್‌ನಲ್ಲಿ ಆರೋಪಿಸಿದೆ. ಇದನ್ನೂ ಓದಿ: ಹಿಮಾಚಲದಲ್ಲಿ ಭೂಕುಸಿತಕ್ಕೆ ಭಾರೀ ಕಟ್ಟಡಗಳು ನೆಲಸಮ
ಪ್ರಸ್ತುತ ನೀರಿನ ಸಮಸ್ಯೆ ಉದ್ಭವಿಸಲು ತಮಿಳುನಾಡು ಕಾರಣ. ಅನಗತ್ಯವಾಗಿ ಮೇಕೆದಾಟು ಯೋಜನೆಗೆ ವಿರೋಧಿಸುತ್ತಿದೆ. ಮೇಕೆದಾಟು ಕುಡಿಯುವ ನೀರಿನ ಯೋಜನೆ. ಇದರಿಂದ ತಮಿಳುನಾಡಿಗೆ ಹೆಚ್ಚು ಸಹಾಯವಾಗಲಿದೆ. ಮಳೆ ಕೊರತೆಯ ವರ್ಷದಲ್ಲಿ ತಮಿಳುನಾಡಿಗೆ ನೀರು ಹರಿಸಬಹುದು. 13 ಟಿಎಂಸಿ ನೀರು ಬಳಕೆ ಮಾಡಬಹುದು. ಕಾವೇರಿ ಜಲಾನಯನದಲ್ಲಿರುವ ನೀರು ಸದ್ಯಕ್ಕೆ ಕರ್ನಾಟಕಕ್ಕೆ ಸಾಕಾಗುವುದಿಲ್ಲ. ಕಾವೇರಿ ಜಲಾನಯನ ಪ್ರದೇಶದಲ್ಲಿ 42% ಮಳೆ ಕೊರತೆಯಾಗಿದೆ. ಇದನ್ನೂ ಓದಿ: ದೆಹಲಿ ವಿಮಾನ ನಿಲ್ದಾಣದಲ್ಲಿ 17 ಕೋಟಿ ರೂ. ಮೌಲ್ಯದ ಕೊಕೇನ್ ವಶ – ಇಬ್ಬರು ಕೀನ್ಯಾ ಪ್ರಜೆಗಳ ಬಂಧನ
ಈಗ ತಮಿಳುನಾಡಿಗೆ ನೀರು ಹರಿಸಿದರೆ ರಾಜ್ಯದಲ್ಲಿರುವ ಪ್ರಸ್ತುತ ಬೆಳೆ ಮತ್ತು ಮುಂಬರುವ ದಿನಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಲಿದೆ. ಬೆಂಗಳೂರಿನಂತಹ ಮಹಾ ನಗರಕ್ಕೂ ನೀರಿನ ಕೊರತೆಯಾಗಲಿದೆ. ಈ ಎಲ್ಲಾ ಸವಾಲುಗಳ ನಡುವೆ CWMA ಆದೇಶದ ಬಳಿಕ ಕರ್ನಾಟಕ ತಮಿಳುನಾಡಿಗೆ ಕಾವೇರಿ ನೀರು ಹರಿಸಿದೆ. ಆದರೆ ಸಾಮಾನ್ಯ ವರ್ಷದ ನೀರು ಹರಿಸಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ. ಇದನ್ನೂ ಓದಿ: ಚಂದ್ರಯಾನ-3 ಸಕ್ಸಸ್ – ಇಸ್ರೋ ಅಧ್ಯಕ್ಷರಿಗೆ ಸೋನಿಯಾ ಗಾಂಧಿ ಪತ್ರ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]