ಪೊಲೀಸ್ ಕಸ್ಟಡಿಯಲ್ಲಿ ಆರೋಪಿ ಸಾವು

Public TV
0 Min Read
arrested new

ಚೆನ್ನೈ: ಗಾಂಜಾ ಹೊಂದಿದ್ದಕ್ಕಾಗಿ ಬಂಧನಕ್ಕೊಳಗಾಗಿದ್ದ ವ್ಯಕ್ತಿಯೊಬ್ಬ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ ಘಟನೆ ತಮಿಳುನಾಡಿನ ರಾಜಧಾನಿಯಲ್ಲಿ ನಡೆದಿದೆ.

ವಿಘ್ನೇಶ್ ಮತ್ತು ರಮೇಶ್ ಎಂದು ಗುರುತಿಸಲಾದ ಇಬ್ಬರು ಗಾಂಜಾ ಮಾರಾಟಗಾರರನ್ನು ಮಂಗಳವಾರ ಚೆನ್ನೈನ ಪುರಶವಕ್ಕಂ ಪ್ರದೇಶದಿಂದ ಬಂಧಿಸಲಾಗಿತ್ತು.

police 2

ಅವರು ಪ್ರಯಾಣಿಸುತ್ತಿದ್ದ ಆಟೋದಲ್ಲಿ ಗಾಂಜಾವನ್ನು ವಶಪಡಿಸಿಕೊಂಡ ಪೊಲೀಸರು ಅಯನವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆದರೆ ವಿಘ್ನೇಶ್‍ಗೆ ಇದ್ದಕ್ಕಿದ್ದಂತೆ ಫಿಟ್ಸ್ ಕಾಣಿಸಿಕೊಂಡಿದ್ದರಿಂದ ಅವರನ್ನು ಬೇರೆ ಠಾಣೆಗೆ ವರ್ಗಾಯಿಸಲಾಗಿತ್ತು.

FotoJet 6 9

ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲೇ ಮೃತಪಟ್ಟಿದ್ದಾನೆ. ಇದೀಗ ಅವನ ಮೃತದೇಹವನ್ನು ಕಿಲ್ಪಾಕ್ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗಾಗಿ ಇರಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *