ಚೆನ್ನೈ: ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಬಗ್ಗೆ ಮಾಹಿತಿ ನೀಡುವಲ್ಲಿ ಹವಾಮಾನ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪತ್ರ ಬರೆದಿದ್ದಾರೆ.
ತಮಿಳುನಾಡಿನಲ್ಲಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಭಾರೀ ಅನಾಹುತ ಸಂಭವಿಸಿದೆ. ಈ ಬಗ್ಗೆ ರಾಜ್ಯ ಸರ್ಕಾರವನ್ನು ಎಚ್ಚರಿಸುವಲ್ಲಿ ಭಾರತೀಯ ಹವಮಾನ ಇಲಾಖೆ ವಿಫಲವಾಗಿದೆ ಪತ್ರದಲ್ಲಿ ದೂರಿದ್ದಾರೆ.
Advertisement
Advertisement
ವಿಪತ್ತು ಪರಿಸ್ಥಿತಿಗಳನ್ನು ನಿಭಾಯಿಸುವಲ್ಲಿ ಎಚ್ಚರಿಸಲು ಭಾರತೀಯ ಹವಮಾನ ಇಲಾಖೆ ಮುಖ್ಯ ಪಾತ್ರವನ್ನು ವಹಿಸುತ್ತದೆ. ಇದರಿಂದ ರಾಜ್ಯ ಹಾಗೂ ಜಿಲ್ಲಾಡಳಿತಕ್ಕೆ ಜನರ ಸುರಕ್ಷತೆಯ ಬಗ್ಗೆ ಮುಂಜಾಗ್ರತೆ ಕ್ರಮ ತೆಗೆದುಕೊಳ್ಳಲು ಸಹಾಯವಾಗುತ್ತದೆ. ಆದರೆ ರೆಡ್ ಅಲರ್ಟ್ ನ್ನು ಘೋಷಿಸುವ ಸಂಬಂಧ ತಿಳಿಸುವಲ್ಲಿ ಐಎಂಸಿ ವಿಫಲವಾಗಿದೆ ಎಂದು ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಬಿಹಾರ್ ಸಿಎಂ ಪುತ್ರ ತನ್ನ ತಂದೆಗಿಂತಲೂ 5 ಪಟ್ಟು ಹೆಚ್ಚು ಶ್ರೀಮಂತ
Advertisement
Advertisement
ಹವಮಾನ ಇಲಾಖೆ ಡಿ.30ರಂದು ಮಧ್ಯಾಹ್ನ ತಮಿಳುನಾಡಿನಲ್ಲಿ ಮಳೆಯಾಗುವುದರ ಬಗ್ಗೆ ತಿಳಿಸಿತ್ತು. ಆದರೆ ಕರಾವಳಿಯ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತದೆ. ಆದರೆ ವಿಲುಪುರಂ, ಕಡಲೂರು ಮತ್ತು ಡೆಲ್ಟಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯೊಂದಿಗೆ, ಬಿರುಗಾಳಿ ಹಾಗೂ ಚೆನ್ನೈನ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದಷ್ಟೇ ಮುನ್ಸೂಚನೆ ನೀಡಿತ್ತು ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ವಿದ್ಯುತ್ ನೀಡದಿದ್ದಕ್ಕೆ ಅಖಿಲೇಶ್ ಯಾದವ್ ಮೊದಲು ಕ್ಷಮೆಯಾಚಿಸಲಿ: ಯೋಗಿ ಆದಿತ್ಯನಾಥ್
ಸಂಜೆ 4:15ಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿತ್ತು. ಆದರೆ ಈ ವೇಳೆಗೆ ಚೆನ್ನೈ, ತಿರುವಳ್ಳೂರು, ಕಾಂಚೀಪುರಂ ಮತ್ತು ಚೆಂಗಲ್‌ಪೇಟ್ ಜಿಲ್ಲೆಗಳಾದ್ಯಂತ ಧಾರಾಕಾರ ಮಳೆಯಾಗಿದೆ. ಇದರಿಂದಾಗಿ ಅನೇಕ ಸ್ಥಳಗಳು ಜಲಾವೃತಗೊಂಡಿದ್ದು, ನಗರದಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿತ್ತು ಎಂದು ಪತ್ರದಲ್ಲಿ ತಿಳಿಸಿದ್ದಾರೆ.