ಚೆನ್ನೈ: ತಮಿಳುನಾಡು (Tamil Nadu) ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ (MK Stalin) ಅವರ ಹಿರಿಯ ಪುತ್ರ ಉದಯನಿಧಿ (Udhayanidhi) ಇಂದು ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ತಮಿಳು ನಾಡಿನ ಡಿಎಂಕೆ ಸರ್ಕಾರ ಉದಯನಿಧಿ ಅವರನ್ನು ರಾಜ್ಯದ ನೂತನ ಕ್ರೀಡಾ ಸಚಿವರನ್ನಾಗಿ ನೇಮಿಸಲಾಗಿದೆ. ಉದಯನಿಧಿ ಸ್ಟಾಲಿನ್ ಅವರು ಚೆಪಾಕ್, ತಿರುವಲ್ಲಿಕೇಣಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ ಹಾಗೂ ಡಿಎಂಕೆ ಯುವ ವಿಭಾಗದ ಕಾರ್ಯದರ್ಶಿಯೂ ಆಗಿದ್ದಾರೆ. ಉದಯನಿಧಿ ಅವರಿಗೆ ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರು ರಾಜಭವನದಲ್ಲಿ ಪ್ರಮಾಣ ವಚನ ಬೋಧಿಸಿದರು. ಉದಯನಿಧಿ ಸ್ಟಾಲಿನ್ ಅವರನ್ನು 2019ರಲ್ಲಿ ಯುವ ವಿಭಾಗದ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು.
Advertisement
Advertisement
ಉದಯನಿಧಿ ಹಲವಾರು ತಮಿಳು ಚಿತ್ರಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಕಳೆದ ವರ್ಷ ತಮಿಳುನಾಡು ಚುನಾವಣೆಯಲ್ಲಿ ಸ್ಟಾರ್ ಪ್ರಚಾರಕರಾಗಿ ಹೊರಹೊಮ್ಮಿದ್ದರು. ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದರು. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆಯಲ್ಲಿ RBI ಮಾಜಿ ಗವರ್ನರ್ ಭಾಗಿ
Advertisement
Advertisement
2018ರಲ್ಲಿ ತಂದೆ ಎಂ. ಕರುಣಾನಿಧಿ ಅವರ ನಿಧನದ ನಂತರ ಸ್ಟಾಲಿನ್ ಡಿಎಂಕೆ ಅಧ್ಯಕ್ಷರಾದರು. 2021ರ ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ನೇತೃತ್ವದ ಒಕ್ಕೂಟವು ಗೆದ್ದ ನಂತರ ಅವರು ಮುಖ್ಯಮಂತ್ರಿಯಾದರು. ಇದನ್ನೂ ಓದಿ: ಕೋಮುವಾದಿ ಪಕ್ಷ ಮಣಿಸಲು ಕಾಂಗ್ರೆಸ್ ಸೇರಲು ನಿರ್ಧಾರ – ವೈಎಸ್‌ವಿ ದತ್ತ