ಚೆನ್ನೈ: ವಿಶ್ವಾಸಮತ ಯಾಚನೆ ಪರೀಕ್ಷೆಯಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್ ಪಾಸ್ ಆಗಿದ್ದಾರೆ. ಸರ್ಕಾರಕ್ಕೆ 144 ಮಂದಿ ಶಾಸಕರು ಬೆಂಬಲ ವ್ಯಕ್ತಪಡಿಸಿದ್ದಾರೆ.
ಟಿವಿಕೆ, ಕಾಂಗ್ರೆಸ್, ಸಿಪಿಎಂ, ಸಿಪಿಐ, ಮುಸ್ಲಿಮ್ ಲೀಗ್, ವಿಸಿಕೆ ಜೊತೆ ಎಐಎಡಿಎಂಕೆಯ ಬಂಡಾಯ ಎದ್ದಿರುವ 27 ಶಾಸಕರು ವಿಜಯ್ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ.
ಬಹುಮತ ಸಾಬೀತು ಪಡಿಸುವ ವೇಳೆ ಡಿಎಂಕೆ ಮತ್ತು ಪಿಎಂಕೆ ಶಾಸಕರು ಸಭಾತ್ಯಾಗ ಮಾಡಿದರು. ಒಬ್ಬ ಬಿಜೆಪಿ ಶಾಸಕರು ಮತದಾನದಿಂದ ದೂರ ಉಳಿದರು. ಅದರೆ ಸದನದಲ್ಲಿದ್ದ 22 ಎಐಎಡಿಎಂಕೆ ಶಾಸಕರು ವಿಶ್ವಾಸಮತದ ವಿರುದ್ಧ ಮತ ಹಾಕಿದರು.
234 ಶಾಸಕರನ್ನು ಹೊಂದಿರುವ ವಿಧಾನಸಭೆಯಲ್ಲಿ ಬಹುಮತಕ್ಕೆ 118 ಶಾಸಕರ ಅಗತ್ಯವಿದೆ. ವಿಜಯ್ ತಿರುಚಿ ಪಶ್ಚಿಮ ಮತ್ತು ಪೆರಂಬೂರು ಕ್ಷೇತ್ರದಿಂದ ಸ್ಪರ್ಧೆ ಮಾಡಿದ ಹಿನ್ನೆಲೆ ಅದನ್ನು ಒಂದು ಎಂದು ಪರಿಗಣಿಸಲಾಗುತ್ತದೆ. ಇದರ ಜೊತೆಗೆ ತಿರುಪತ್ತೂರು ಟಿವಿಕೆ ಶಾಸಕ ಶ್ರೀನಿವಾಸ್ ಸೇತುಪತಿ ಅವರಿಗೆ ಬಹುಮತ ಸಾಬೀತು ಪ್ರಕ್ರಿಯೆಯಲ್ಲಿ ಭಾಗಿಯಾಗದಂತೆ ಮದ್ರಾಸ್ ಹೈಕೋರ್ಟ್ ಸೂಚನೆ ನೀಡಿರುವ ಹಿನ್ನೆಲೆ ವಿಧಾನಸಭೆಯ ಬಲ 232ಕ್ಕೆ ಇಳಿದಿದ್ದು, ಬಹುಮತಕ್ಕೆ 116 ಶಾಸಕರ ಬೆಂಬಲ ಅಗತ್ಯವಿತ್ತು.
ಸರ್ಕಾರದ ಪರ ಮತ ಎಷ್ಟು?
ಟಿವಿಕೆ – 106
ಕಾಂಗ್ರೆಸ್ – 05
ಎಡಪಕ್ಷಗಳು – 04
ವಿಸಿಕೆ – 02
ಮುಸ್ಲಿಂ ಲೀಗ್ – 02
ಎಐಎಡಿಎಂಕೆ – 27

