ಚನ್ನೈ: ತಮಿಳುನಾಡಿನಲ್ಲಿ ಒಂದಾದ ಬಳಿಕ ಒಂದರಂತೆ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಕೇವಲ 2 ವಾರಗಳಲ್ಲಿ ಇಲ್ಲಿಯವರೆಗೆ ಒಟ್ಟು 5 ಮಂದಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಘಟನೆಗಳು ರಾಜ್ಯಾದ್ಯಂತ ಆತಂಕಕ್ಕೆ ಕಾರಣವಾಗುತ್ತಿವೆ.
ಬುಧವಾರ ಶಿವಗಂಗಾ ಜಿಲ್ಲೆಯ 12ನೇ ತರಗತಿಯ ವಿದ್ಯಾರ್ಥಿ ತನ್ನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಓದಿನಲ್ಲಿ ಗಣಿತ ಹಾಗೂ ಜೀವಶಾಸ್ತ್ರ ವಿಷಯಗಳು ಅತ್ಯಂತ ಕಷ್ಟಕರವಾಗುತ್ತಿದೆ ಎಂದು ಡೆತ್ ನೋಟ್ ಬರೆದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
Advertisement
ಇದು ಕೇವಲ 2 ವಾರಗಳಲ್ಲಿ ನಡೆದ 5ನೇ ಹಾಗೂ 24 ಗಂಟೆಗಳಲ್ಲಿ ನಡೆದ 2ನೇ ಪ್ರಕರಣವಾಗಿದೆ. ಇದಕ್ಕೂ ಮುನ್ನ ನಾಲ್ವರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರಲ್ಲಿ ಮೂವರು 12ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು.
Advertisement
ಇಂದು ಬೆಳಗ್ಗೆ ಶಿವಕಾಶಿಯಲ್ಲಿ 11ನೇ ತರಗತಿಯ ಬಾಲಕಿ ಶವವಾಗಿ ಪತ್ತೆಯಾಗಿದ್ದು, ಯಾವುದೇ ಸೂಸೈಡ್ ನೋಟ್ ಪತ್ತೆಯಾಗಿಲ್ಲ. ಆದರೆ ಆಕೆ ಕೆಲವು ದಿನಗಳಿಂದ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಬ್ರೇಕಿಂಗ್ ನ್ಯೂಸ್ ಬೇಕಾ? TMCಯ 38 ಶಾಸಕರು ಬಿಜೆಪಿಯೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ: ಮಿಥುನ್ ಚಕ್ರವರ್ತಿ
Advertisement
ಈ ಘಟನೆಯ ಕೆಲವೇ ಗಂಟೆಗಳಿಗೂ ಮೊದಲು ಕಡಲೂರು ಜಿಲ್ಲೆಯಲ್ಲಿ 12ನೇ ತರಗತಿಯ ಇನ್ನೊಬ್ಬ ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿದ್ದಾಳೆ. ಸ್ಥಳದಲ್ಲೇ 4 ಪುಟಗಳ ಸೂಸೈಡ್ ನೋಟ್ ಪತ್ತೆಯಾಗಿದ್ದು, ಆಕೆಗೆ ಐಎಎಸ್ ಪರೀಕ್ಷೆಯಲ್ಲಿ ನಿರೀಕ್ಷಿಸಿದ ಫಲಿತಾಂಶ ದೊರಕಿಲ್ಲ ಎಂದು ಉಲ್ಲೇಖಿಸಿದ್ದಾಳೆ.
ಸೋಮವಾರ, ತಿರುವಳ್ಳೂರು ಜಿಲ್ಲೆಯ ಸೇಕ್ರೆಡ್ ಹಾರ್ಟ್ ಗರ್ಲ್ಸ್ ಹೈಯರ್ ಸೆಕೆಂಡರಿ ಶಾಲೆಯ 12ನೇ ತರಗತಿ ವಿದ್ಯಾರ್ಥಿನಿ ತನ್ನ ಹಾಸ್ಟೆಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಳು. ಆ ಪ್ರಕರಣದಲ್ಲೂ ಯಾವುದೇ ಆತ್ಮಹತ್ಯೆಯ ಪತ್ರ ಪತ್ತೆಯಾಗಿಲ್ಲ. ಇದನ್ನೂ ಓದಿ: ಜನನಿಬಿಡ ಪ್ರದೇಶಗಳಲ್ಲಿ ಸಿಸಿ ಕ್ಯಾಮೆರಾ ಕಡ್ಡಾಯ: ಪೊಲೀಸ್ ಇಲಾಖೆ ನೋಟಿಸ್
ಜುಲೈ 13 ರಂದು ಕಲ್ಲಾಕುರಿಚಿ ಜಿಲ್ಲೆಯಲ್ಲಿ ನಡೆದ ಮೊದಲ ಆತ್ಮಹತ್ಯೆ ಭಾರೀ ಪ್ರತಿಭಟನೆ ಹುಟ್ಟುಹಾಕಿತ್ತು. ಖಾಸಗಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿದ್ದು, ಆಕೆಗೆ ಇಬ್ಬರು ಶಿಕ್ಷಕರು ಓದಿನ ವಿಚಾರವಾಗಿ ಅವಮಾನ ಮಾಡಿದ್ದಾಗಿ ಸೂಸೈಡ್ ನೋಟ್‌ನಲ್ಲಿ ಬರೆಯಲಾಗಿತ್ತು. ಶಾಲೆಯ ಆವರಣದಲ್ಲಿ ಭಾರೀ ಹಿಂಸಾತ್ಮಕ ಪ್ರತಿಭಟನೆಗಳು ನಡೆದ ಬಳಿಕ ಘಟನೆಗೆ ಸಂಬಂಧಿಸಿದಂತೆ ಶಾಲೆಯ ಪ್ರಾಂಶುಪಾಲರು, ಇಬ್ಬರು ಶಿಕ್ಷಕರು ಸೇರಿದಂತೆ ಒಟ್ಟು ಐವರನ್ನು ಬಂಧಿಸಲಾಗಿತ್ತು.