ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹಾಗೂ ರಾಜ್ಯಪಾಲ ಆರ್. ಎನ್. ರವಿ ಅವರ ನಡುವೆ ನಡೆಯುತ್ತಿರುವ ಜಟಾಪಟಿ ಮಧ್ಯೆಯೇ ಡಿಎಂಕೆ ಪಕ್ಷದ ನಾಯಕ ಶಿವಾಜಿ ಕೃಷ್ಣಮೂರ್ತಿ ಅವರು ತಮಿಳುನಾಡು ರಾಜ್ಯಪಾಲರನ್ನು ಗುಂಡಿಕ್ಕಿ ಕೊಲ್ಲಲು ಉಗ್ರನನ್ನು ಕಳುಹಿಸುತ್ತೇವೆ ಎಂಬ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.
ತಮಿಳುನಾಡಿನ ರಾಜ್ಯಪಾಲರ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಡಿಎಂಕೆ (DMK) ಪಕ್ಷದ ನಾಯಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ರಾಜ್ಯಪಾಲರನ್ನು ನಿಂದಿಸಬೇಡಿ ಎಂದು ಸಿಎಂ ಕೇಳುತ್ತಿದ್ದಾರೆ. ಆದರೆ ರಾಜ್ಯಪಾಲರು ಸರಿಯಾಗಿ ಓದಿದ್ದರೆ ನಾನು ಅವರ ಕಾಲಿಗೆ ಹೂಗಳನ್ನು ಇಟ್ಟು ಕೈಮುಗಿದು ಧನ್ಯವಾದ ಹೇಳುತ್ತಿದ್ದೆ. ಆದರೆ ಅವರು ಅಂಬೇಡ್ಕರರ ಹೆಸರು ಹೇಳಲು ನಿರಾಕರಿಸಿದರೆ ಚಪ್ಪಲಿಯಿಂದ ಹೊಡೆಯುವ ಹಕ್ಕು ನನಗಿಲ್ಲವೇ? ನೀವು ಅವರ ಹೆಸರನ್ನು ನಿರಾಕರಿಸಿದರೆ, ನೀವು ಕಾಶ್ಮೀರಕ್ಕೆ ಹೋಗುತ್ತೀರಿ. ಆಗ ನಿಮ್ಮನ್ನು ಗುಂಡಿಕ್ಕಿ ಕೊಲ್ಲಲು ನಾವು ಓರ್ವ ಉಗ್ರನನ್ನು ಕಳುಹಿಸುತ್ತೇವೆ ಎಂದು ಸಭೆಯಲ್ಲಿ ತಿಳಿಸಿದರು.
Advertisement
Advertisement
ಸದ್ಯ ಈ ಹೇಳಿಕೆಯು ವಿವಾದವನ್ನು ಸೃಷ್ಟಿಸಿದ್ದು, ಬಿಜೆಪಿ (BJP) ಸೇರಿದಂತೆ ಅನೇಕ ಪಕ್ಷಗಳು ಇದಕ್ಕೆ ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಡಿಎಂಕೆಗೆ ಯಾವ ಉಗ್ರನ ಸಂಬಂಧವಿದೆ ಎಂಬುದನ್ನು ಪೊಲೀಸರು ತನಿಖೆ ಮಾಡಬೇಕು. ಏಕೆಂದರೆ ಅವರು ಭಾಷಣದಲ್ಲಿ ನಾವು ರಾಜ್ಯಪಾಲರನ್ನು ಕಾಶ್ಮೀರಕ್ಕೆ ಕಳುಹಿಸುತ್ತೇವೆ. ಕಾಶ್ಮೀರಕ್ಕೆ ಭಯೋತ್ಪಾದಕರನ್ನು ಕಳುಹಿಸುತ್ತೇವೆ ಎಂದು ಹೇಳಿದ್ದಾರೆ. ನಾವು ಎಂದರೆ ಯಾರು? ಶಿವಾಜಿ ಕೃಷ್ಣಮೂರ್ತಿ ಮಾತ್ರ ಇಂತಹ ಹೊಲಸು ಭಾಷೆಯಲ್ಲಿ ಮಾತನಾಡಿಲ್ಲ. ಸಿಎಂ ಎಂ.ಕೆ ಸ್ಟಾಲಿನ್ ಅವರ ಆಶೀರ್ವಾದದಿಂದ, ಡಿಎಂಕೆ ಮುಖ್ಯಸ್ಥರ ಪ್ರಚೋದನೆಯಿಂದ ಅವರು ಮಾತನಾಡುತ್ತಿದ್ದಾರೆ ಎಂದು ನಾನು ಭಾವಿಸುತ್ತೇನೆ ಎಂದು ಬಿಜೆಪಿ ನಾಯಕ ಕಿಡಿಕಾರಿದರು.
Advertisement
Advertisement
ಏನಿದು ವಿವಾದ?: ಜ. 10ರಂದು ತಮಿಳುನಾಡಿನ ರಾಜ್ಯಪಾಲ (Tamil Nadu Governor) ಆರ್‌ಎನ್ ರವಿ (RN Ravi) ಅವರು ವಿಧಾನಸಭಾ ಅಧಿವೇಶನದ ವೇಳೆ ಗದ್ದಲ ಕೋಲಾಹಲದ ನಡುವೆ ವಿಧಾನಸಭೆಯಿಂದ (Assembly) ಹೊರನಡೆದಿದ್ದರು. ಇದನ್ನೂ ಓದಿ: ಗುಜರಾತ್ ಪ್ರವಾಸ ಮುಗಿಸಿ ಆರಗ ವಾಪಸ್ ಆಗ್ತಿದ್ದಂತೆ ಸ್ಯಾಂಟ್ರೋ ರವಿ ಅರೆಸ್ಟ್- ರಾಜ್ಯ ರಾಜಕೀಯದಲ್ಲಿ ಸಂಚಲನ
ಈ ವೇಳೆ ಎಂ.ಕೆ. ಸ್ಟಾಲಿನ್ ಅವರು, ಜಾತ್ಯತೀತತೆ ಸೇರಿದಂತೆ ಪೆರಿಯಾರ್, ಬಿಆರ್ ಅಂಬೇಡ್ಕರ್, ಕೆ ಕಾಮರಾಜ್, ಸಿಎನ್ ಅಣ್ಣಾದೊರೈ ಮತ್ತು ಕರುಣಾನಿಧಿ ಅವರಂತಹ ನಾಯಕರ ಉಲ್ಲೇಖವನ್ನು ರಾಜ್ಯ ಸರ್ಕಾರ ಭಾಷಣದಲ್ಲಿ ಸಿದ್ಧಪಡಿಸಿತ್ತು. ಆದರೆ ಭಾಷಣದ ಆ ಭಾಗಗಳನ್ನು ಅವರು ಬಿಟ್ಟುಬಿಟ್ಟಿದ್ದಾರೆ. ಆಡಳಿತಾರೂಢ ಡಿಎಂಕೆ ಪ್ರಚಾರ ಮಾಡುವ ದ್ರಾವಿಡ ಮಾದರಿಯ ಉಲ್ಲೇಖವನ್ನೂ ಅವರು ಓದಿಲ್ಲ. ರಾಜ್ಯಪಾಲರ ಕ್ರಮ ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು.
ಈ ಗದ್ದಲವು ವಿವಾದಕ್ಕೆ ಕಾರಣವಾಗಿತ್ತು. ಅಷ್ಟೇ ಅಲ್ಲದೇ ಟ್ವಿಟ್ಟರ್‌ನಲ್ಲಿ #GetOutRavi ಎಂಬ ಟ್ರೆಂಡಿಂಗ್ ಕೂಡ ಪ್ರಾರಂಭವಾಗಿತ್ತು. ಇದನ್ನೂ ಓದಿ: ಪ್ರತಿಭಾವಂತ ಕ್ರಿಕೆಟರ್ ಸಿದ್ಧಾರ್ಥ್ ಶರ್ಮಾ ನಿಧನ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k