ಚೆನ್ನೈ: ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಜನರಿಗೆ ಕೋವಿಡ್-19 ಲಸಿಕೆ ಪಡೆಯುವಂತೆ ಮತ್ತು ಕೊರೊನಾ ನಿಯಮಗಳನ್ನು ಪಾಲಿಸುವಂತೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಒತ್ತಾಯಿಸಿದ್ದಾರೆ.
ಲಸಿಕೆ ಪಡೆದವರಿಗಿಂತ ಲಸಿಕೆ ಪಡೆಯದೇ ಇರುವ ಜನರು ಹೆಚ್ಚಾಗಿ ಕೊರೊನಾ ಸೋಂಕಿನಿಂದ ಸಾವನ್ನಪ್ಪುತ್ತಿದ್ದಾರೆ. ಹೀಗಾಗಿ ಜನರು ಲಸಿಕೆ ಪಡೆಯಬೇಕು. ಅದರಲ್ಲಿಯೂ 60 ಚರ್ಷಕ್ಕಿಂತ ಮೇಲ್ಪಟ್ಟವರು ಶೀಘ್ರವೇ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಓಮಿಕ್ರಾನ್ ವೇಗವಾಗಿ ಹರಡುತ್ತಿದ್ದು, ವೈರಲ್ ಫೀವರ್ನಂತಿದೆ: ಯೋಗಿ ಆದಿತ್ಯನಾಥ್
ಡೆಲ್ಟಾ ವೈರಸ್‍ಗೆ ಹೋಲಿಸಿದರೆ ಓಮಿಕ್ರಾನ್ ವೈರಸ್ ಅತಿ ವೇಗವಾಗಿ ಹರಡುತ್ತಿದೆ. ಓಮಿಕ್ರಾನ್‍ನಿಂದ ಹೊಸ ಭೀತಿ ಎದುರಾಗುತ್ತಿದೆ. ಪ್ರತಿಯೊಬ್ಬರು ಕೊರೊನಾ ವೈರಸ್ ವಿರುದ್ಧ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಈಗಾಗಲೇ ತಜ್ಞರು ಲಸಿಕೆ ಪಡೆದವರಲ್ಲಿ ಓಮಿಕ್ರಾನ್ ಸೋಂಕಿನ ಗುಣಲಕ್ಷಣಗಳು ಕಡಿಮೆ ಇದೆ ಎಂದು ಹೇಳುತ್ತಿದ್ದಾರೆ. ಹಾಗಾಗಿ ನಿಮ್ಮ ಮನೆಯಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟವರಿದ್ದರೆ ಪ್ರತಿಯೊಬ್ಬರಿಗೂ ಲಸಿಕೆ ಹಾಕಿಸಿಕೊಳ್ಳುವಂತೆ ನಾನು ನಿಮ್ಮಲ್ಲಿ ಕೇಳಿಕೊಳ್ಳುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸಂಸದ ರೇವಂತ್ ರೆಡ್ಡಿಗೆ ಕೊರೊನಾ ಪಾಸಿಟಿವ್
ಜನವರಿ 3 ರಿಂದ 15 ರಿಂದ 18 ವರ್ಷದೊಳಗಿನ 33 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಕೊರೊನಾ ಲಸಿಕೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅಲ್ಲದೇ ಜನವರಿ 2 ರಂದು 50,000 ಶಿಬಿರಗಳ ಮೂಲಕ ಮೆಗಾ ಲಸಿಕಾ ಶಿಬಿರವನ್ನು ನಡೆಸಲಾಗುತ್ತಿದೆ. ಇದರಲ್ಲಿ 94 ಲಕ್ಷ ಜನರಿಗೆ ಎರಡನೇ ಡೋಸ್ ಲಸಿಕೆ ನೀಡುವ ಗುರಿಯನ್ನು ಸರ್ಕಾರಹೊಂದಿದೆ ಎಂದು ತಿಳಿಸಿದ್ದಾರೆ.