ಚೆನ್ನೈ: ತಮಿಳುನಾಡು (Tamil Nadu) ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ (M.K.Stalin) ಇಂದು (ಸೋಮವಾರ) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಿದ್ದಾರೆ.
ಈ ಹಿಂದೆ ಕರ್ನಾಟಕ ಸರ್ಕಾರ ತನ್ನ ರಾಜ್ಯದ ಕೆಲವು ಭಾಗಗಳಲ್ಲಿ ತೀವ್ರ ಬರಗಾಲವನ್ನು ಉಲ್ಲೇಖಿಸಿ ತಮಿಳುನಾಡಿಗೆ ನೀರು ಹರಿಸುವುದನ್ನು ನಿರಾಕರಿಸಿತ್ತು. ಕರ್ನಾಟಕದ ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಿಗೆ ಸಂಚಿತ ಒಳಹರಿವು ಕಡಿಮೆಯಾಗುತ್ತಿದೆ ಎಂದು ಕರ್ನಾಟಕ ಡಿಸಿಎಂ ಡಿ.ಕೆ. ಶಿವಕುಮಾರ್ (D.K.Shivakumar) ಅ.5 ರಂದು ಹೇಳಿದ್ದಾರೆ. ಜಲಾಶಯಗಳಲ್ಲಿ ನೀರು ಅಗತ್ಯಕ್ಕಿಂತ ಅರ್ಧದಷ್ಟು ಇದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ ಮುಂದುವರಿದ ನೀರು ಬಿಡುಗಡೆ; ಈಗ ನೀರು ಎಷ್ಟಿದೆ?
ನಮಗೆ 106 ಸಾವಿರ ಮಿಲಿಯನ್ ಕ್ಯೂಬಿಕ್ ಅಡಿ (ಟಿಎಂಸಿ) ನೀರು (ಜಲಾಶಯಗಳಲ್ಲಿ) ಬೇಕು. ಆದರೆ ನಮ್ಮ ಜಲಾಶಯಗಳಲ್ಲಿ ಪ್ರಸ್ತುತ 56 ಟಿಎಂಸಿ ನೀರಿದೆ. ಸಣ್ಣ ಮಳೆಯ ನಂತರ ನಮಗೆ ಸುಮಾರು 25 ಕ್ಯೂಸೆಕ್ಸ್ (ಸೆಕೆಂಡಿಗೆ ಘನ ಅಡಿ) ನೀರು ಬಂದಿದೆ. ಒಳಹರಿವು ಕಡಿಮೆಯಾಗುತ್ತಿದೆ ಎಂದು ಡಿಕೆಶಿ ತಿಳಿಸಿದ್ದಾರೆ.
ಜಲಾಶಯಗಳಲ್ಲಿ ನೀರಿನ ಕೊರತೆಯಿಂದಾಗಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂದಿನ ಬೆಳೆಗಳನ್ನು ಬೆಳೆಯಲು ಅವಕಾಶ ನೀಡದಿರಲು ಕೃಷಿ ಇಲಾಖೆಗೆ ಸೂಚಿಸಲಾಗಿದೆ. ನಾವು ಬೆಳೆದ ಬೆಳೆಗಳನ್ನು ಉಳಿಸಬೇಕು, ಬರ ಘೋಷಿಸಲಾಗಿದೆ. ಮುಂದಿನ ಕೃಷಿಗೆ ಅವಕಾಶ ನೀಡದಂತೆ ಪರಿಗಣಿಸುವಂತೆ ಕೃಷಿ ಇಲಾಖೆಗೆ ಮನವಿ ಮಾಡಿದ್ದೇವೆ. ಹೆಚ್ಚು ಮಳೆಯ ನಿರೀಕ್ಷೆಯಲ್ಲಿದ್ದೇವೆ. ಈ ವರ್ಷ ಸಂಕಷ್ಟದ ವರ್ಷವಾಗಿದೆ ಎಂದು ಶಿವಕುಮಾರ್ ಹೇಳಿದ್ದಾರೆ. ಇದನ್ನೂ ಓದಿ: 5 ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಇಂದು ಪ್ರಕಟ
ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಎರಡೂ ರಾಜ್ಯಗಳ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳು ಸುದೀರ್ಘ ಹಗ್ಗಜಗ್ಗಾಟ ನಡೆಸಿವೆ. ಈ ನದಿಯು ಎರಡು ರಾಜ್ಯಗಳ ಜನರಿಗೆ ಜೀವನಾಧಾರದ ಪ್ರಮುಖ ಮೂಲವಾಗಿದೆ.
ಸೆ.28 ರಿಂದ ಅ.15 ರ ವರೆಗೆ ಬಿಳಿಗುಂಡ್ಲುವಿಗೆ 3,000 ಕ್ಯೂಸೆಕ್ ಕಾವೇರಿ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಆದೇಶಿಸಿತ್ತು. ಕರ್ನಾಟಕವು ಈ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಎರಡರಲ್ಲೂ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಿತ್ತು. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಿಂದೆ ಕಾವೇರಿ ನೀರು ನಿಯಂತ್ರಣ ಸಮಿತಿಯ (CWRC) ಶಿಫಾರಸಿನ ಬಗ್ಗೆ ನಿರಾಶೆ ವ್ಯಕ್ತಪಡಿಸಿದ್ದರು.
Web Stories