ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ (Kollur Mookambika Temple) ತಮಿಳುನಾಡು ಸಿಎಂ ಜೋಸೆಫ್ ವಿಜಯ್ (Joseph Vijay) ಭೇಟಿ ನೀಡಿದ್ದಾರೆ.
ವಿಜಯ್ ಅವರಿಗೆ ಹೂಗುಚ್ಛ ನೀಡಿ ಆಡಳಿತ ಮಂಡಳಿಯ ಟ್ರಸ್ಟಿಗಳು ಸ್ವಾಗತ ಕೋರಿದರು. ಮಂತ್ರಘೋಷದೊಂದಿಗೆ ಕ್ಷೇತ್ರದೊಳಗೆ ಅರ್ಚಕ ವೃಂದ ಬರಮಾಡಿಕೊಂಡಿತು. ಇದನ್ನೂ ಓದಿ: ಮಂಗಳೂರು| ಸಿಎಂ ವಿಜಯ್‌ಗೆ ಸ್ವಾಮಿ ವಿವೇಕಾನಂದರ ಪುಸ್ತಕ ಉಡುಗೊರೆ
ಶಲ್ಯ ಧರಿಸಿ ಆಗಮಿಸುವ ಮೂಲಕ ಸಿಎಂ ವಿಜಯ್ ದೇವಸ್ಥಾನದ ಶಿಷ್ಟಾಚಾರ ಪಾಲನೆ ಮಾಡಿದರು. ಪ್ರಧಾನ ಅರ್ಚಕ ರಾಮಚಂದ್ರ ಅಡಿಗ ಅವರ ನೇತೃತ್ವದಲ್ಲಿ ಸಂಕಲ್ಪ ಪೂಜೆ ನೆರವೇರಿಸಲಾಯಿತು. ಸಿಎಂ ವಿಜಯ್ ಸಂಕಲ್ಪ ಪೂಜೆ ಮಾಡಿದರು.
ಶಕ್ತಿ ದೇವಿಗೆ ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ವಿಜಯ್ ಪ್ರಾರ್ಥನೆ ಸಲ್ಲಿಸಿದರು. ಸಂಕಲ್ಪ ಪೂಜೆ ಬಳಿಕ ದೀಪಾರಾಧನೆ ಮಾಡಲಾಯಿತು. ಈ ವೇಳೆ ಸಿಎಂಗೆ ಅರ್ಚಕರು ರಕ್ಷಾ ದಾರ ಕಟ್ಟಿದರು. ಪೂಜೆ ಬಳಿಕ ವಿಜಯ್ ದೇವಸ್ಥಾನದಿಂದ ಹೊರಟರು.
ನೆಚ್ಚಿನ ನಟ, ಸಿಎಂ ನೋಡಲು ಅಭಿಮಾನಿಗಳು ಮುಗಿಬಿದ್ದರು. ಅವರನ್ನು ನಿಯಂತ್ರಿಸಲು ಪೊಲೀಸರು, ಭದ್ರತಾ ಸಿಬ್ಬಂದಿ ಹರಸಾಹಸ ಪಟ್ಟರು. ಇದನ್ನೂ ಓದಿ: ಕೊಲ್ಲೂರಿಗೆ ಸಿಎಂ ವಿಜಯ್ ಬರ್ತಿದ್ದಾರೆ ಅನ್ನೋ ಕಾರಣಕ್ಕೆ ವಿಶೇಷ ಪೂಜೆಗಳೇನು ಇರಲ್ಲ: ಅರ್ಚಕ ನಿತ್ಯಾನಂದ ಅಡಿಗ
