ನವದೆಹಲಿ: ಕಾವೇರಿ ಅಚ್ಚುಕಟ್ಟು ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು ತಮಿಳುನಾಡಿಗೆ (TamilNadu) ಸಮರ್ಪಕ ನೀರು ಹರಿದು ಹೋಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಯಾವುದೇ ಆದೇಶ ನೀಡದೇ ಸಭೆಯನ್ನು ಮುಂದೂಡಿದೆ.
ಬುಧವಾರ ದೆಹಲಿಯಲ್ಲಿ ಸಭೆ ನಡೆಸಿದ ಪ್ರಾಧಿಕಾರ, ಎರಡು ರಾಜ್ಯಗಳಿಂದ ಮಾಹಿತಿ ಕಲೆ ಹಾಕಿತು. ಸುಪ್ರೀಂ ಕೋರ್ಟ್ (Supreme Court) ಆದೇಶದಂತೆ ಜುಲೈ ಮತ್ತು ಆಗಸ್ಟ್‌ನಲ್ಲಿ ನೀರು ಹರಿಸಬೇಕು, ಜುಲೈ ತಿಂಗಳ ನೀರಿನ ಪಾಲು ಸಂತೃಪ್ತಿಯಾಗಿದೆ ಎಂದು ಹೇಳಿ ಆಗಸ್ಟ್ ತಿಂಗಳ 45 ಟಿಎಂಸಿ ನೀರು ಹರಿಸಲು ತಮಿಳುನಾಡು ಒತ್ತಾಯಿಸಿದೆ. ಇದನ್ನೂ ಓದಿ: ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿ – ಕಾವೇರಿ ಕೊಳ್ಳದ ಜನರಿಗೆ ಪ್ರವಾಹದ ಆತಂಕ
Advertisement
Advertisement
ಜೂನ್ 1 ರಿಂದ ಜುಲೈ 22 ವರೆಗೂ ಕರ್ನಾಟಕದ 4 ಜಲಾಶಯಗಳ ಒಳಹರಿವು 118.245 ಟಿಎಂಸಿಯಷ್ಟಿದೆ. ಆದರೆ, ಇದೇ ಅವಧಿಯಲ್ಲಿ 30 ವರ್ಷಗಳ ಸರಾಸರಿ (1989-90 ರಿಂದ 2018-19) ಒಳಹರಿವು 98.679 ಟಿಎಂಸಿ ಇದೆ. ಕಾವೇರಿ ನೀರು ನಿಯಂತ್ರಣ ಸಮಿತಿ ತನ್ನ 99ನೇ ಸಭೆಯಲ್ಲಿ ಬಿಳಿಗುಂಡ್ಲುವಿನಲ್ಲಿ ಕರ್ನಾಟಕವು ಜುಲೈ 31ರ ವರೆಗೆ ಪ್ರತಿದಿನ 1 ಟಿಎಂಸಿಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ನಿರ್ಧರಿಸಿತು. ಅಂತೆಯೇ ನೀರು ಹರಿಸಿದೆ. ಬಿಳಿಗುಂಡ್ಲುವಿನಲ್ಲಿ ಖಾತ್ರಿಪಡಿಸಬೇಕಾದ ಹರಿವನ್ನು ನಿರ್ಧರಿಸುವಾಗ ತಮಿಳುನಾಡಿನ ಮೂರು ಜಲಾಶಯಗಳಲ್ಲಿನ ಕ್ಯಾರಿಓವರ್ ಶೇಖರಣೆ ಮತ್ತು ಇಡೀ ಕಾವೇರಿ ಜಲಾನಯನ ಪ್ರದೇಶದಲ್ಲಿನ ಜಲವಿಜ್ಞಾನದ ಸ್ಥಿತಿಯನ್ನು ಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ ಎಂದು ಕರ್ನಾಟಕ ಹೇಳಿತು.
Advertisement
Advertisement
ಸದ್ಯ ನೀರಿನ ಹರಿವು ಸುಗಮವಾಗಿರುವ ಹಿನ್ನೆಲೆಯಲ್ಲಿ ಯಾವುದೇ ಆದೇಶ ನೀಡುವುದಿಲ್ಲ, ಸುಪ್ರೀಂ ಕೋರ್ಟ್ ಆದೇಶದ ಅನ್ವಯ ನೀರು ಬಿಡಿ. ಜುಲೈ 30 ರಂದು ಕಾವೇರಿ ನೀರು ನಿರ್ವಹಣಾ ಸಮಿತಿ ಸಭೆ ನಡೆಸಿ, ತಮಿಳುನಾಡಿಗೆ ನೀಡಬೇಕಾದ ನೀರಿನ ಪ್ರಮಾಣದ ಬಗ್ಗೆ ಮತ್ತೊಮ್ಮೆ ಸಮಾಲೋಚನೆ ನಡೆಸಲಾಗುವುದು ಎಂದು ಸಿಡಬ್ಲ್ಯೂಆರ್‌ಸಿ ಹೇಳಿದೆ. ಇದನ್ನೂ ಓದಿ: ಯಾವ ರಾಜ್ಯವನ್ನೂ ಕಡೆಗಣಿಸಿಲ್ಲ, ಪ್ರತಿಪಕ್ಷಗಳ ಪ್ರತಿಭಟನೆ ದುರುದ್ದೇಶಪೂರ್ವಕ: ನಿರ್ಮಲಾ ಸೀತಾರಾಮನ್
ಜುಲೈ 14ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ತಮಿಳುನಾಡಿಗೆ ಪ್ರತಿನಿತ್ಯ 1 ಟಿಎಂಸಿ ನೀರಿಗೆ ಬದಲಾಗಿ, ಜುಲೈ 31ರ ವರೆಗೆ 8 ಸಾವಿರ ಕ್ಯುಸೆಕ್ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿತ್ತು. ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ – ನಿತ್ಯ 8 ಸಾವಿರ ಕ್ಯುಸೆಕ್ ನೀರು ಹರಿಸಲು ಸರ್ಕಾರ ನಿರ್ಧಾರ: ಸಿಎಂ