Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕದ ಗಡಿಯಿಂದ 19 ಕಿ.ಮೀ ದೂರದಲ್ಲಿ ನಿರ್ಮಾಣವಾಗಲಿದೆ ಹೊಸೂರು ವಿಮಾನ ನಿಲ್ದಾಣ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಕರ್ನಾಟಕದ ಗಡಿಯಿಂದ 19 ಕಿ.ಮೀ ದೂರದಲ್ಲಿ ನಿರ್ಮಾಣವಾಗಲಿದೆ ಹೊಸೂರು ವಿಮಾನ ನಿಲ್ದಾಣ!

Karnataka

ಕರ್ನಾಟಕದ ಗಡಿಯಿಂದ 19 ಕಿ.ಮೀ ದೂರದಲ್ಲಿ ನಿರ್ಮಾಣವಾಗಲಿದೆ ಹೊಸೂರು ವಿಮಾನ ನಿಲ್ದಾಣ!

Public TV
Last updated: August 26, 2025 9:07 am
Public TV
Share
2 Min Read
airport ai photo
SHARE

– ಜಾಗವನ್ನು ಅಂತಿಮಗೊಳಿಸಿದ ತಮಿಳುನಾಡು ಸರ್ಕಾರ

ಚೆನ್ನೈ: ತಮಿಳುನಾಡು ಸರ್ಕಾರವು (Government of Tamil Nadu) ಪ್ರಸ್ತಾವಿತ ಹೊಸೂರು ವಿಮಾನ ನಿಲ್ದಾಣದ (Hosuru Airport) ಸ್ಥಳವನ್ನು ಅಂತಿಮಗೊಳಿಸಿದೆ. ಬೆರಿಗೈ ಮತ್ತು ಬಾಗಲೂರು ನಡುವಿನ ಶೂಲಗಿರಿ ತಾಲೂಕಿನಲ್ಲಿರುವ ಈ ಜಾಗ ಕರ್ನಾಟಕದ (Karnataka) ಗಡಿಯಿಂದ ಕೇವಲ 19 ಕಿ.ಮೀ ದೂರದಲ್ಲಿದೆ.

ಈ ಜಾಗ ತನೇಜಾ ಏರೋಸ್ಪೇಸ್‌ನಿಂದ ಪೂರ್ವಕ್ಕೆ ಸುಮಾರು 15.5 ಕಿಲೋಮೀಟರ್‌ ದೂರದಲ್ಲಿದ್ದರೆ ಕರ್ನಾಟಕ ಗಡಿಯಲ್ಲಿರುವ ಅತ್ತಿಬೆಲೆಯಿಂದ 19 ಕಿ.ಮೀ ದೂರದಲ್ಲಿದೆ. ಮುಂದಿನ ಎರಡು ವಾರಗಳಲ್ಲಿ ತಮಿಳುನಾಡು ಸರ್ಕಾರ ಅನುಮೋದನೆಗಾಗಿ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯವನ್ನು ಸಂಪರ್ಕಿಸಲಿದೆ ಎಂದು ವರದಿಯಾಗಿದೆ.

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಅಭಿವೃದ್ಧಿಪಡಿಸುತ್ತಿರುವ ಬೆಂಗಳೂರು ಸ್ಯಾಟಲೈಟ್ ಟೌನ್ ರಿಂಗ್ ರಸ್ತೆ (STRR) ಬಳಿಯೇ ಈ ಜಾಗ ಇರುವುದು ವಿಶೇಷ.

ಈ ವಿಮಾನ ನಿಲ್ದಾಣ ಯೋಜನೆಗೆ ಸುಮಾರು 2,300 ಎಕರೆ ಭೂಮಿಯ ಅಗತ್ಯವಿದೆ. ಹೀಗಾಗಿ ಆರು ವಾರಗಳಲ್ಲಿ ಭೂ ಸ್ವಾಧೀನ ಯೋಜನೆಯನ್ನು ಸಿದ್ಧಪಡಿಸುವಂತೆ ಕೃಷ್ಣಗಿರಿ ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ. ಹೊಸೂರು ವಿಮಾನ ನಿಲ್ದಾಣ ಯೋಜನೆಯು ಪೂರ್ಣಗೊಳ್ಳಲು ಸುಮಾರು ಎಂಟು ವರ್ಷಗಳು ಬೇಕಾಗಬಹುದು ಎಂದು ಅಂದಾಜಿಸಲಾಗಿದೆ.

ಬೆಂಗಳೂರು ವಿಮಾನ ನಿಲ್ದಾಣ
ಬೆಂಗಳೂರು ವಿಮಾನ ನಿಲ್ದಾಣ

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕಳೆದ ವರ್ಷ ಘೋಷಿಸಿದ ಪ್ರಸ್ತಾವಿತ ವಿಮಾನ ನಿಲ್ದಾಣವನ್ನು ವಾರ್ಷಿಕ 3 ಕೋಟಿ ಪ್ರಯಾಣಿಕರ ನಿರ್ವಹಣಾ ಸಾಮರ್ಥ್ಯದೊಂದಿಗೆ ವಿನ್ಯಾಸಗೊಳಿಸಲಾಗಿದೆ. ಅಭಿವೃದ್ಧಿ ಹೊಂದುತ್ತಿರುವ ಉತ್ಪಾದನಾ ಕೇಂದ್ರವೆಂದು ಕರೆಯಲ್ಪಡುವ ಹೊಸೂರಿನಲ್ಲಿ 500 ಕ್ಕೂ ಹೆಚ್ಚು ದೊಡ್ಡ ಕೈಗಾರಿಕೆಗಳು ಸ್ಥಾಪನೆಯಾಗಿದೆ. ಆಟೋಮೊಬೈಲ್ ಮತ್ತು ಎಲೆಕ್ಟ್ರಾನಿಕ್ಸ್‌ನಂತಹ ವಲಯಗಳಿಗೆ ಸಂಬಂಧಿಸಿದಂತೆ 3,000 MSME ಗಳನ್ನು ಹೊಸೂರು ಹೊಂದಿದೆ. ಇದನ್ನೂ ಓದಿ: ಕೊನೇ ಹಾರಾಟ ನಡೆಸಿದ MIG-21 – ʻಹಾರುವ ಶವಪೆಟ್ಟಿಗೆʼಗೆ ಸೆ.19ರಂದು ಬೀಳ್ಕೊಡುಗೆ!

ಈ ಯೋಜನೆಯು ಒಮ್ಮೆ ಕಾರ್ಯರೂಪಕ್ಕೆ ಬಂದರೆ, ಚೆನ್ನೈ ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳ ಜನದಟ್ಟಣೆಯನ್ನು ಕಡಿಮೆ ಮಾಡಲಿದೆ. ಕೃಷ್ಣಗಿರಿ ಜಿಲ್ಲೆ ಮತ್ತು ಉತ್ತರ ತಮಿಳುನಾಡಿನ ಕೈಗಾರಿಕಾ ಬೆಳವಣಿಗೆಯನ್ನು ಗಮನಾರ್ಹವಾಗಿ ಹೆಚ್ಚಿಸಲಿದೆ.

ತಮಿಳುನಾಡು ಸರ್ಕಾರವು 2024ರ ಅಕ್ಟೋಬರ್‌ನಲ್ಲಿ ಅಧ್ಯಯನಕ್ಕಾಗಿ ಐದು ಸ್ಥಳಗಳನ್ನು ಆಯ್ಕೆ ಮಾಡಿತ್ತು. ಹೊಸೂರು ಇತ್ತೀಚಿನ ವರ್ಷಗಳಲ್ಲಿ ಹೂಡಿಕೆದಾರರನ್ನು ಆಕರ್ಷಿಸುತ್ತಿದೆ. ಈ ಭಾಗದಲ್ಲಿ ಆಧುನಿಕ ಮೂಲಸೌಕರ್ಯಗಳ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಈ ಮೂಲಕ ಪ್ರಮುಖ ಆರ್ಥಿಕ ಕೇಂದ್ರವನ್ನಾಗಿ ಮಾಡುವ ಗುರಿಯನ್ನು ಸರ್ಕಾರ ಹೊಂದಿದೆ. ಹೊಸೂರು, ಕೃಷ್ಣಗಿರಿ ಮತ್ತು ಧರ್ಮಪುರಿ ಅಭಿವೃದ್ಧಿಗೆ ಹೊಸೂರಿನಲ್ಲಿ ವಿಮಾನ ನಿಲ್ದಾಣ ಸ್ಥಾಪಿಸುವುದು ಅಗತ್ಯವಾಗಿದೆ ತಮಿಳುನಾಡು ಸಿಎಂ ಸ್ಟಾಲಿನ್‌ ಹೇಳಿದ್ದರು.

ಬೆಂಗಳೂರು ಕಂಪೇಗೌಡ ವಿಮಾನ ನಿಲ್ದಾಣದಿಂದ 150 ಕಿಲೋಮೀಟರ್ ವೈಮಾನಿಕ ಅಂತರದಲ್ಲಿ 25 ವರ್ಷಗಳವರೆಗೆ ಯಾವುದೇ ಹೊಸ ಅಥವಾ ಅಸ್ತಿತ್ವದಲ್ಲಿರುವ ದೇಶೀಯ ವಿಮಾನ ನಿಲ್ದಾಣಗಳನ್ನು ತೆರೆಯಬಾರದು ಎಂಬ ಷರತ್ತು ಇದೆ. ಈ ಷರತ್ತು 2033ಕ್ಕೆ ಕೊನೆಯಾಗಲಿರುವ ಹಿನ್ನೆಲೆಯಲ್ಲಿ ಕರ್ನಾಟಕ ಮತ್ತು ತಮಿಳುನಾಡು ಸರ್ಕಾರ ಬೆಂಗಳೂರಿಗೆ ಹೊಂದಿಕೊಂಡಂತೆ ಎರಡನೇ ವಿಮಾನ ನಿಲ್ದಾಣ ನಿರ್ಮಿಸಲು ಮುಂದಾಗುತ್ತಿದೆ.

TAGGED:airportbengaluruHosurutamil naduತಮಿಳುನಾಡುಬೆಂಗಳೂರುವಿಮಾನ ನಿಲ್ದಾಣಹೊಸೂರು
Share This Article
Facebook Whatsapp Whatsapp Telegram

Cinema news

Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories
ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood

You Might Also Like

Stunt and Crash Reels Hubballi BJP leader Veeresh Sangaladas son dies
Dharwad

ಸ್ಟಂಟ್ & ಕ್ರ್ಯಾಶ್ ರೀಲ್ಸ್‌ ಹುಚ್ಚಾಟ – ಹುಬ್ಬಳ್ಳಿ ಬಿಜೆಪಿ ಮುಖಂಡ ವೀರೇಶ್ ಸಂಗಳದ ಪುತ್ರ ಬಲಿ

Public TV
By Public TV
4 hours ago
Bengaluru Fire
Districts

ನಡುರಸ್ತೆಯಲ್ಲೇ ಧಗಧಗನೇ ಹೊತ್ತಿಯುರಿದ ಕಾರು

Public TV
By Public TV
4 hours ago
manish tewari
Latest

ಇರಾನ್‌ ಯುದ್ಧ| ಕಾಂಗ್ರೆಸ್‌ನಲ್ಲಿ ಬಿರುಕು – ತರೂರ್‌ ಬಳಿಕ ಕೇಂದ್ರದ ನಡೆಯನ್ನು ಬೆಂಬಲಿಸಿದ ಮನೀಶ್‌ ತಿವಾರಿ

Public TV
By Public TV
4 hours ago
Drone hits Saudi Arabias Samref refinery
Latest

ಯುದ್ಧ ಆರಂಭವಾದ ಬಳಿಕವೂ ತೈಲ ರಫ್ತು ಮಾಡುತ್ತಿದ್ದ ಸೌದಿಯ ರಿಫೈನರಿ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

Public TV
By Public TV
4 hours ago
bjp flag
Bagalkot

ಕಾಂಗ್ರೆಸ್‌ನಲ್ಲಿ ಟಿಕೆಟ್‌ಗೆ ಫೈಟ್‌ – ದಾವಣಗೆರೆ, ಬಾಗಲಕೋಟೆಯಲ್ಲಿ ಬಿಜೆಪಿಗೆ ಸಿಗುತ್ತಾ ಗೆಲುವು?

Public TV
By Public TV
5 hours ago
Chitradurga Acid Attack
Chitradurga

ವಿಚ್ಛೇದಿತ ಪತ್ನಿ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ – ಬಳಿಕ ಮಚ್ಚಿನಿಂದ ಹಲ್ಲೆ ನಡೆಸಿ ಪತಿ ಎಸ್ಕೇಪ್‌

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?