ಚೆನ್ನೈ: ಕೊರೊನಾ ವೈರಸ್ ತಡೆಗಟ್ಟಲು ಈ ಬಾರಿ ಹೊಸ ವರ್ಷ ಸಂಭ್ರಮಾಚರಣೆಗೆ ಬ್ರೇಕ್ ಹಾಕಲು ತಮಿಳುನಾಡು ಸರ್ಕಾರ ಬೀಚ್‍ಗಳಲ್ಲಿ ಸಾರ್ವಜನಿಕರಿಗೆ ಡಿಸೆಂಬರ್ 31ರಂದು ಮತ್ತು ಜನವರಿ 1ರಂದು ನಿರ್ಬಂಧ ಹೇರಿದೆ.
Advertisement
ಈ ಬಗ್ಗೆ ಮುಖ್ಯಮಂತ್ರಿ ಸ್ಟಾಲಿನ್ ಅವರು, ಪ್ರಸ್ತುತ ಪರಿಸ್ಥಿತಿ ಅನುಗುಣವಾಗಿ 6ರಿಂದ 12ನೇ ತರಗತಿಯವರೆಗೂ ಶಾಲೆಗಳನ್ನು ತೆರೆಯಲಾಗುತ್ತಿಲ್ಲ. ಆದರೆ ಮುಂದಿನ ತಿಂಗಳಿನಿಂದ ಪ್ರಾರಂಭಿಸಲಾಗುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: `ದಿವ್ಯ ಕಾಶಿ, ಭವ್ಯ ಕಾಶಿ’ ಪ್ರಧಾನಿ ಮೋದಿ ಕನಸಿನ ಯೋಜನೆ ಲೋಕಾರ್ಪಣೆ – ವಿಶೇಷತೆ ಏನು?
Advertisement
Advertisement
ನೆರೆಯ ರಾಜ್ಯಗಳಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಸೋಮವಾರ ಸಭೆ ನಡೆಸಿದ ಸ್ಟಾಲಿನ್ ಅವರು, ಈ ವೇಳೆ ಡಿಸೆಂಬರ್ 31 ರವರೆಗಿನ ಕೋವಿಡ್-ಸಂಬಂಧಿತ ನಿರ್ಬಂಧಗಳನ್ನು ವಿಸ್ತರಿಸುವುದಾಗಿ ಘೋಷಿಸಿದರು. ಸಾಮಾಜಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಸಭೆಗಳಲ್ಲಿ ಈ ಹಿಂದೆ ಇದ್ದ ಮಾರ್ಗಸೂಚಿಗಳನ್ನು ಮುಂದುವರಿಸುವಂತೆ ಸೂಚಿಸಿದ್ದಾರೆ. ಇದನ್ನೂ ಓದಿ: ಕಾಶಿಯಿಂದ ಕಾಶ್ಮೀರದವರೆಗೆ ಅಭಿವೃದ್ಧಿ – ಮೋದಿ ಅವಧಿಯಲ್ಲಿ ಯಾವೆಲ್ಲ ದೇವಾಲಯಗಳು ಜೀರ್ಣೋದ್ಧಾರಗೊಂಡಿದೆ?
Advertisement
ಕೊರೊನಾ ವೈರಸ್ ತಡೆಗಟ್ಟುವ ಸಲುವಾಗಿ ಡಿಸೆಂಬರ್ 31ರಿಂದ ಜನವರಿ 1ರವರೆಗೂ ಮರೀನಾ ಬೀಚ್ ಸೇರಿದಂತೆ ರಾಜ್ಯದ ಹಲವು ಬೀಚ್‍ಗಳಿಗೆ ಸಾರ್ವನಿಕರ ಪ್ರವೇಶವನ್ನು ನಿರ್ಬಂಧ ಹೇರಿರುವುದಾಗಿ ಅಧಿಕೃತವಾಗಿ ಪ್ರಕಟಿಸಿದ್ದಾರೆ.