XE ರೂಪಾಂತರಿಯನ್ನು ಎದುರಿಸಲು ಸರ್ಕಾರ ಸಿದ್ಧವಾಗಿದೆ: ಮಾ ಸುಬ್ರಮಣಿಯನ್

Public TV
1 Min Read
Ma Subramanian

ಚೆನ್ನೈ: ಕೊರೊನಾ ಸೋಂಕಿನ ಹೊಸ ರೂಪಾಂತರಿಯಾಗಿರುವ XE ತಳಿ ರಾಜ್ಯದಲ್ಲಿ ಹೊರಹೊಮ್ಮಿದರೆ ಅದನ್ನು ನಿಭಾಯಿಸಲು ರಾಜ್ಯ ಸರ್ಕಾರವು ಸಿದ್ಧವಾಗಿದೆ ಎಂದು ತಮಿಳುನಾಡು ಆರೋಗ್ಯ ಸಚಿವ ಮಾ ಸುಬ್ರಮಣಿಯನ್ ಭರವಸೆ ನೀಡಿದ್ದಾರೆ.

ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ಎಐಎಡಿಎಂಕೆ ಶಾಸಕ ಸಿ ವಿಜಯಭಾಸ್ಕರ್ ಅವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಮಾ ಸುಬ್ರಮಣಿಯನ್ ಅವರು, ಮಹಾರಾಷ್ಟ್ರ ಮತ್ತು ಗುಜರಾತ್‍ನಲ್ಲಿ XE ರೂಪಾಂತರಿ ವೈರಸ್ ಪತ್ತೆಯಾದ ಬಳಿಕ ಕೇಂದ್ರ ಸರ್ಕಾರ ಕೊರೊನಾ ಹೊಸ ರೂಪಾಂತರಿಯಾಗಿರುವ XE ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಅಂತ ತಿಳಿಸಿದೆ ಎಂದಿದ್ದಾರೆ. ಇದನ್ನೂ ಓದಿ:  XE ರೂಪಾಂತರಿ ಮಾರಣಾಂತಿಕವಲ್ಲ: ಮಹಾರಾಷ್ಟ್ರ ಸಚಿವ

corona

ರಾಜ್ಯದಲ್ಲಿ ಹೊಸ ರೂಪಾಂತರಿ ವೈರಸ್ XE ಹರಡುವಿಕೆಯನ್ನು ತಡೆಗಟ್ಟಲು ತಮಿಳುನಾಡು ಸರ್ಕಾರ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಅಲ್ಲದೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಇತರ ದೇಶಗಳಿಂದ ಆಗಮಿಸುವ ಪ್ರಯಾಣಿಕರ ಮೇಲೆ ತೀವ್ರ ನಿಗಾವಹಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ಪ್ರಧಾನಿ ಮೋದಿ ತವರಿಗೇ ಲಗ್ಗೆಯಿಟ್ಟ XE ಕೊರೊನಾ ರೂಪಾಂತರಿ

coronavirus

ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಷ್ಟ್ರೀಯ ತಾಂತ್ರಿಕ ಸಲಹಾ ಗ್ರೂಪ್ ಆನ್ ಇಮ್ಯುನೈಸೇಶನ್ (ಎನ್‍ಟಿಎಜಿಐ) ಮುಖ್ಯಸ್ಥ ಎನ್‍ಕೆ ಅರೋರಾ ಅವರು, ಈ ಸೋಂಕು ಮಾರಣಾಂತಿಕವಲ್ಲ ಹಾಗೂ ಲಕ್ಷಣರಹಿತವಾಗಿದೆ. ಅಲ್ಲದೇ ವೇಗವಾಗಿ ಹರಡುವುದಿಲ್ಲ ಎಂದು ಹೇಳಿದ್ದಾರೆ.

Share This Article