ಚೆನ್ನೈ: ಕಳ್ಳ ಬಟ್ಟಿ ಪ್ಯಾಕೆಟ್ ಸಾರಾಯಿ ಸೇವಿಸಿ 13 ಮಂದಿ ಸಾವನ್ನಪ್ಪಿ, 30ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆ ತಮಿಳುನಾಡಿನ (Tamil Nadu) ಕಲ್ಲಕುರಿಚಿಯಲ್ಲಿ (Kallakurichi) ನಡೆದಿದೆ.
ದುರಂತ (Hooch Tragedy) ವರದಿಯಾದ ನಂತರ ಸಿಎಂ ಎಂಕೆ ಸ್ಟಾಲಿನ್ (CM MK Stalin) ಈ ಪ್ರಕರಣದ ಬಗ್ಗೆ ಸಿಐಡಿ (CID ತನಿಖೆಗೆ ಆದೇಶಿಸಿದ್ದಾರೆ.
Advertisement
ಕ್ಷಿಪ್ರ ಕ್ರಮ ಕೈಗೊಂಡಿರುವ ತಮಿಳುನಾಡು ಸರ್ಕಾರ ಜಿಲ್ಲಾಧಿಕಾರಿ ಶ್ರವಣಕುಮಾರ್ ಜಾತಾವತ್ ಅವರನ್ನು ವರ್ಗಾವಣೆ ಮಾಡಿದೆ. ಕಲ್ಕುರಿಚಿ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಎಂ.ಎಸ್.ಪ್ರಶಾಂತ್ ನೇಮಕಗೊಂಡಿದ್ದಾರೆ.
Advertisement
ಕಲ್ಲಕುರಿಚಿ ಎಸ್‌ಪಿ ಸಮಯಸಿಂಗ್ ಮೀನಾ ಅವರನ್ನು ಅಮಾನತುಗೊಳಿಸಲಾಗಿದೆ. ಅವರ ಜಾಗಕ್ಕೆ ಸರ್ಕಾರ ರಜತ್ ಚತುರ್ವೇದಿ ಅವರನ್ನು ನೂತನ ಎಸ್ಪಿಯನ್ನಾಗಿ ನೇಮಿಸಿದೆ. ಅಷ್ಟೇ ಅಲ್ಲದೇ 9 ಮಂದಿ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
Advertisement
ಪೊಲೀಸರು ಕಳ್ಳ ಬಟ್ಟಿದಂಧೆಕೋರನನ್ನು ಬಂಧಿಸಿದ್ದಾರೆ. ಮೆಥೆನಾಲ್ ಮಿಶ್ರಣ ಹೊಂದಿದ್ದ 200 ಲೀಟರ್ ಕಳ್ಳಬಟ್ಟಿಯನ್ನು ವಶಕ್ಕೆ ಪಡೆಯಲಾಗಿದೆ.
Advertisement