ಚೆನ್ನೈ: ವ್ಯಕ್ತಿಯೊಬ್ಬ ಪತ್ನಿ ಮಾತನಾಡಿಸಿಲ್ಲ ಎಂದು ಕೋಪಗೊಂಡು ಕಟ್ಟಡ, ಕಾರ್ ಮತ್ತು ಬೈಕಿಗೆ ಬೆಂಕಿ ಹಚ್ಚಿರುವ ಘಟನೆ ತಮಿಳುನಾಡಿನ ತಿರುಚನಾಪಳ್ಳಿಯಲ್ಲಿ ನಡೆದಿದೆ.
ಈ ಘಟನೆ ಶುಕ್ರವಾರ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ 30 ವರ್ಷದ ಆರೋಪಿಯನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗೆ ಕೆಲವು ದಿನಗಳಿಂದ ಉದ್ಯೋಗವಿರಲಿಲ್ಲ. ಆದ್ರೆ ಈತ ಉದ್ಯೋಗ ಹುಡುಕುವ ಪ್ರಯತ್ನವನ್ನು ಕೂಡ ಮಾಡುತ್ತಿರಲಿಲ್ಲ ಎಂದು ತಿಳಿದು ಬಂದಿದೆ. ಈತನ ಪತ್ನಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಪತಿ ಕೆಲಸಕ್ಕೆ ಹೋಗುತ್ತಿಲ್ಲ ಎಂಬ ಕಾರಣಕ್ಕೆ ಪತ್ನಿ ಕೆಲವು ದಿನಗಳಿಂದ ಮಾತು ಬಿಟ್ಟಿದ್ದರು. ಪತ್ನಿ ಮಾತನಾಡಿಸುತ್ತಿಲ್ಲ ಎಂದು ಕೋಪಗೊಂಡ ಪತಿ ಆಕ್ರೋಶದಿಂದ ಕುಡಿದ ಮತ್ತಿನಲ್ಲಿ ಕಾರು, ಬೈಕ್ ಮತ್ತು ಕಟ್ಟಡಕ್ಕೆ ಬೆಂಕಿ ಇಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಸದ್ಯಕ್ಕೆ ಆರೋಪಿಯನ್ನು ಬಂಧಿಸಿದ್ದು, ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಲಾಗುತ್ತಿದೆ. ಆತನ ವಿರುದ್ಧ ಪ್ರಕರಣ ಕೂಡ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv