ನವದೆಹಲಿ: ಮೇಕೆದಾಟು ಅಣೆಕಟ್ಟು ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟ ಮುಂದುವರಿದಿದ್ದು ಇಂದು ಪ್ರತ್ಯೇಕ ಪ್ರಕರಣವೊಂದಕ್ಕೆ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್‍ಗೆ ಅಫಿಡೆವಿಟ್ ಸಲ್ಲಿಸಿದೆ.
Advertisement
ಸುಪ್ರೀಂಕೋರ್ಟ್ ನೋಟಿಸ್ ಹಿನ್ನೆಲೆ ಅಫಿಡೆವಿಟ್ ಸಲ್ಲಿಸಿರುವ ಸರ್ಕಾರ, ತಮಿಳುನಾಡಿನ ಮೇಲೆ ತೀವ್ರ ಪರಿಣಾಮ ಬೀರಬಹುದಾದ ಮೇಕೆದಾಟು ಯೋಜನೆಗೆ ನಮ್ಮ ಒಪ್ಪಿಗೆ ಇಲ್ಲ, ಯೋಜನೆಗೆ ತಮಿಳುನಾಡು ಮತ್ತು ಕೇಂದ್ರ ಸರ್ಕಾರದ ಅನುಮತಿ ಮುಖ್ಯ ಆದರೆ ಕರ್ನಾಟಕ ಇದನ್ನು ಪರಿಗಣಿಸುತ್ತಿಲ್ಲ ಎಂದು ಆರೋಪಿಸಿದೆ. ಅಲ್ಲದೇ, ರಾಸಿಮನಾಳ್ ಪ್ರದೇಶದಲ್ಲಿ ಅಣೆಕಟ್ಟು ನಿರ್ಮಾಣಕ್ಕೆ ಸಂಬಂಧಿಸಿದಂತೆ ಸರ್ಕಾರ ಯಾವುದೇ ನೋಂದಣಿ ಮಾಡಿಲ್ಲ ಎಂದು ಕೋರ್ಟ್‍ಗೆ ಮಾಹಿತಿ ನೀಡಿದೆ. ಇದನ್ನೂ ಓದಿ: ನಾಳೆಯಿಂದ ಪಿಯುಸಿ ತರಗತಿಗಳು ಪ್ರಾರಂಭ- ಹಿಜಬ್ ನಿಷೇಧ
Advertisement
Advertisement
ಮೇಕೆದಾಟು ಆಣೆಕಟ್ಟು ನಿರ್ಮಾಣ ಯೋಜನೆಗೆ ಮುಂದಾದ ಕರ್ನಾಟಕ ರಾಜ್ಯ ಸರ್ಕಾರದ ನಿರ್ಧಾರ ವಿರುದ್ಧ ತಮಿಳುನಾಡು ಮೂಲದ ವಕೀಲ ಯಾಣೈ ರಾಜೇಂದ್ರನ್ ಎನ್ನುವವರು ಸುಪ್ರೀಂಕೋರ್ಟ್ ಅರ್ಜಿ ಸಲ್ಲಿಸಿದ್ದರು. ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಅನ್ಯಾಯವಾಗಲಿದೆ, ದೊಡ್ದ ಪ್ರಮಾಣದಲ್ಲಿ ಪರಿಸರಕ್ಕೂ ಹಾನಿಯಾಗಲಿದೆ. ಈ ಹಿನ್ನೆಲೆ ಮೇಕೆದಾಟು ಬದಲು ತಮಿಳುನಾಡಿನ ರಾಸಿಮನಾಳ ಪ್ರದೇಶದಲ್ಲಿ ಅಣೆಕಟ್ಟು ನಿರ್ಮಿಸಲು ಅನುಮತಿ ನೀಡಬೇಕು ಎಂದು ಕೋರಿದ್ದರು. ಇದನ್ನೂ ಓದಿ: ಇಡಿ ಸಮನ್ಸ್ – ವಿಚಾರಣೆಯಿಂದ ವಿನಾಯಿತಿ ಕೋರಿದ ಸೋನಿಯಾ
Advertisement
ಪ್ರಕರಣ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಪ್ರತಿಕ್ರಿಯೆಗಾಗಿ ಕರ್ನಾಟಕ, ತಮಿಳುನಾಡು ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತ್ತು. ನೋಟಿಸ್ ಹಿನ್ನೆಲೆ ಇಂದು ಸುಪ್ರೀಂಕೋರ್ಟ್ ಅಫಿಡೆವಿಟ್ ಸಲ್ಲಿಸಲು ಮೂಲಕ ತಮಿಳುನಾಡು ಕೋರ್ಟ್‍ಗೆ ಮಾಹಿತಿ ನೀಡಿದೆ.