ಚೆನ್ನೈ: ತಮಿಳುನಾಡಿನಲ್ಲಿ ಶಾಲಾ-ಕಾಲೇಜ್ ವಿದ್ಯಾರ್ಥಿನಿಯರ ಸರಣಿ ಆತ್ಮಹತ್ಯೆ ಮುಂದುವರಿದಿದೆ. ನಿನ್ನೆ 11ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
Advertisement
11ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಶಿವಕಾಶಿಯಲ್ಲಿರುವ ತನ್ನ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಯಾವುದೇ ಡೆತ್‍ನೋಟ್ ಕೂಡ ಪತ್ತೆಯಾಗಿಲ್ಲ. ಈ ಬಗ್ಗೆ ತಮಿಳುನಾಡು ಪೊಲೀಸರು ತನಿಖೆ ಆರಂಭಿಸಿದ್ದು ವಿದ್ಯಾರ್ಥಿನಿ ಹೊಟ್ಟೆ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಳು ಎಂದು ಹಿರಿಯ ಪೊಲೀಸ್ ಅಧಿಕಾರಿ ಸ್ಥಳೀಯ ಮಧ್ಯಮಗಳಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: 6 ವರ್ಷ ತುಂಬಿದರಷ್ಟೇ 1ನೇ ಕ್ಲಾಸ್‌ಗೆ ಪ್ರವೇಶ – ಗೊಂದಲಕ್ಕೆ ಕಾರಣವಾದ ಆದೇಶ
Advertisement
Advertisement
ಈ ಪ್ರಕರಣ ಸೇರಿದಂತೆ ಈಗಾಗಲೇ ಕಳೆದ ಎರಡು ವಾರಗಳ ಅಂತರದಲ್ಲಿ ನಾಲ್ಕು ವಿದ್ಯಾರ್ಥಿನಿಯರ ಆತ್ಮಹತ್ಯೆ ಪ್ರಕರಣ ತಮಿಳುನಾಡಿನಲ್ಲಿ ದಾಖಲಾಗಿದೆ. ಕೆಲ ದಿನಗಳ ಹಿಂದೆ ಚಿನ್ನ ಸೇಲಂ ಸಮೀಪದ ಕಣಿಯಮೂರ್‌ನಲ್ಲಿ ವಸತಿ ಶಾಲೆಯ ಹಾಸ್ಟೆಲ್‍ನಲ್ಲಿ 12ನೇ ತರಗತಿ ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿದ್ದಳು. ನಂತರ ಡೆತ್‍ನೋಟ್ ಸಿಕ್ಕಿತ್ತು. ಶಾಲೆಯ ಶಿಕ್ಷಕರು ತನಗೆ ಚಿತ್ರಹಿಂಸೆ ನೀಡಿದ್ದಾರೆ ಎಂದು ಸೂಸೈಡ್ ನೋಟ್‍ನಲ್ಲಿ ಉಲ್ಲೇಖಿಸಲಾಗಿತ್ತು. ಇದರಿಂದ ರೊಚ್ಚಿಗೆದ್ದ ಜನ ಶಾಲೆಯ ಬಸ್ ಸೇರಿದಂತೆ ವಾಹನಗಳನ್ನು ಸುಟ್ಟು ಹಿಂಸಾತ್ಮಕ ಪ್ರತಿಭಟನೆ ನಡೆಸಿದ್ದರು. ಇದನ್ನೂ ಓದಿ: ತಮಿಳುನಾಡು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ – ಪ್ರಾಂಶುಪಾಲರು, ಶಿಕ್ಷಕರು ಸೇರಿ ಐವರು ಅರೆಸ್ಟ್
Advertisement
ಆ ಬಳಿಕ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಾಂಶುಪಾಲರು, ಇಬ್ಬರು ಶಿಕ್ಷಕರು ಸೇರಿ ಐವರನ್ನು ಪೊಲೀಸರು ಬಂಧಿಸಿದ್ದರು. ಇದಾದ ಬಳಿಕ ರಾಜ್ಯದಲ್ಲಿ ಮತ್ತೆ ವಿದ್ಯಾರ್ಥಿನಿಯರ ಆತ್ಮಹತ್ಯೆ ಪ್ರಕರಣ ಮುಂದುವರಿದಿದೆ.
ತಮಿಳುನಾಡಿನಲ್ಲಿ ಹದಿಹರೆಯದ ವಿದ್ಯಾರ್ಥಿನಿಯರ ಸಾವಿನ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸ್ಟಾಲಿನ್, ಆತ್ಮಹತ್ಯೆ ಒಂದೇ ಪರಿಹಾರವಲ್ಲ. ಆತ್ಮಹತ್ಯೆ ಯೋಚನೆಯನ್ನು ಕೈಬಿಡಿ ಎಂದು ಯುವಜನತೆಗೆ ಮನವಿ ಮಾಡಿಕೊಂಡಿದ್ದಾರೆ.