ಚೆನ್ನೈ: ಉಕ್ರೇನ್‍ನಲ್ಲಿ ಸಿಲುಕಿರುವ 5 ಸಾವಿರ ವಿದ್ಯಾರ್ಥಿಗಳ ಪ್ರಯಾಣದ ವೆಚ್ಚ ನಾವೇ ಕೋಡುತ್ತೇವೆ. ವಿದ್ಯಾರ್ಥಿಗಳನ್ನು ಅಲ್ಲಿಂದ ಕರೆದು ತನ್ನಿ ಎಂದು ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
Advertisement
ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿದೆ. ಇದರಿಂದಾಗಿ ಅನೇಕ ಭಾರತೀಯರು ಕೂಡ ಉಕ್ರೇನ್‍ನಲ್ಲಿ ಸಿಲುಕಿಕೊಂಡಿದ್ದಾರೆ. ಇದರಿಂದಾಗಿ ಯುದ್ಧಪೀಡಿತ ಉಕ್ರೇನ್‍ನಲ್ಲಿ ಸಿಲುಕಿರುವ ತಮಿಳುನಾಡಿನ ಸುಮಾರು 5,000 ವಿದ್ಯಾರ್ಥಿಗಳ ವಾಪಸ್ ಕರೆತರುವ ವೆಚ್ಚವನ್ನು ತಮಿಳುನಾಡು ಸರ್ಕಾರ ಭರಿಸಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಘೋಷಿಸಿದ್ದಾರೆ. ಇದನ್ನೂ ಓದಿ: ವೈದ್ಯ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳು ಉಕ್ರೇನ್, ರಷ್ಯಾಗೇ ಹೆಚ್ಚಾಗಿ ಯಾಕೆ ಹೋಗ್ತಾರೆ ಗೊತ್ತಾ?
Advertisement
Advertisement
ಒಂದೇ ಭಾರತ್ ಮಿಷನ್‌ನಂತೆ ವಿಶೇಷ ವಿಮಾನಗಳ ವ್ಯವಸ್ಥೆ ಮಾಡಿ ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಿ. ದೇಶಕ್ಕೆ ಕರೆದು ತನ್ನಿ ಎಂದು ವಿದೇಶಾಂಗ ಸಚಿವ ಎಸ್.ಜಯಶಂಕರ್ ಅವರಿಗೆ ಸ್ಟಾಲಿನ್ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ರಷ್ಯಾ ದಾಳಿಯಿಂದ ರಕ್ಷಿಸಿಕೊಳ್ಳಲು ಭೂಗತ ಹ್ಯಾಕರ್‌ಗೆ ಉಕ್ರೇನ್ ಕರೆ!
Advertisement
Ambassador’s Interaction with Indian Students in Kyiv.@MEAIndia @PIB_India @PIBHindi @DDNewslive @DDNewsHindi @DDNational @PMOIndia @IndianDiplomacy pic.twitter.com/jrfXPlzPKY
— India in Ukraine (@IndiainUkraine) February 24, 2022
ತಮಿಳುನಾಡಿನ ಸುಮಾರು 5,000 ವಿದ್ಯಾರ್ಥಿಗಳು ಉಕ್ರೇನ್‍ನಲ್ಲಿ ವೃತ್ತಿಪರ ಕೋರ್ಸ್‍ಗಳನ್ನು ಮಾಡುತ್ತಿದ್ದಾರೆ. ಇದರಲ್ಲಿ 916 ವಿದ್ಯಾರ್ಥಿಗಳು ಇಂದು ಬೆಳಗ್ಗೆಯ ವೇಳೆಗೆ ತಮಿಳುನಾಡು ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದಾರೆ. ಉಕ್ರೇನ್‍ನಲ್ಲಿ ಸಿಕ್ಕಿಬಿದ್ದವರ ಕುಟುಂಬದ ಸದಸ್ಯರು ಮತ್ತು ಪೋಷಕರಿಂದ ರಾಜ್ಯ ಸರ್ಕಾರಕ್ಕೆ ಸಾಕಷ್ಟು ಕರೆಗಳು ಬರುತ್ತಿದೆ. ತಮಿಳುನಾಡು ಸರ್ಕಾರ ನೋಡಲ್ ಅಧಿಕಾರಿಯನ್ನು ನೇಮಿಸಿದೆ ಎಂದು ಸ್ಟಾಲಿನ್ ಹೇಳಿದ್ದಾರೆ.
ರಷ್ಯಾ ಗುರುವಾರ ಸಂಜೆ ಉಕ್ರೇನ್ ಮೇಲೆ ದಾಳಿ ನಡೆಸಿದ್ದು, ಉಕ್ರೇನ್‍ನ ಹಲವು ನಗರಗಳಲ್ಲಿ ಸ್ಫೋಟದ ಸದ್ದು ಪ್ರತಿಧ್ವನಿಸಿದೆ. ರಷ್ಯಾದ ಸೇನೆಯು ಇದುವರೆಗೆ ಉಕ್ರೇನ್‍ನ 137 ಜನರನ್ನು ಹತ್ಯೆ ಮಾಡಿದೆ. ನೂರಾರು ಜನರು ಗಾಯಗೊಂಡಿದ್ದಾರೆ. ರಷ್ಯಾ ನಿರಂತರವಾಗಿ ಉಕ್ರೇನ್ ಮೇಲೆ ಬಾಂಬ್ ದಾಳಿ ನಡೆಸುತ್ತಿದೆ. ಶುಕ್ರವಾರ ಬೆಳಗ್ಗೆಯಿಂದ ಕೀವ್‍ನಲ್ಲಿ 6 ಸ್ಫೋಟಗಳು ಸಂಭವಿಸಿವೆ. ಈ ಸ್ಫೋಟಗಳನ್ನು ಕ್ರೂಸ್ ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿಗಳಿಂದ ನಡೆಸಲಾಗಿದೆ. ಉಕ್ರೇನ್‍ನಲ್ಲಿ ಸಿಲುಕಿಕೊಂಡಿರುವ ವಿದ್ಯಾರ್ಥಿಗಳ ರಕ್ಷಣೆಗೆ ಭಾರತೀಯ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ.