ಪೊಲೀಸ್ ಕಸ್ಟಡಿಯಲ್ಲಿ ಮಹಿಳೆಗೆ ಚಿತ್ರಹಿಂಸೆ – 4 ಪೊಲೀಸ್ ಅಧಿಕಾರಿಗಳು ಅಮಾನತು

Public TV
1 Min Read
arrested new

ಚೆನ್ನೈ: ಕಳ್ಳತನದ ಆರೋಪದ ಮೇಲೆ ಮಹಿಳೆಯೊಬ್ಬಳಿಗೆ ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ್ದಕ್ಕೆ 4 ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ತಮಿಳುನಾಡಿನಲ್ಲಿ ಮತ್ತೊಂದು ಕಸ್ಟಡಿ ಚಿತ್ರಹಿಂಸೆ ಪ್ರಕರಣ ಬೆಳಕಿಗೆ ಬಂದಿದ್ದು, ಈ ಬಾರಿ ತೂತುಕುಡಿ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ತನ್ನ ನೆರೆಹೊರೆಯವರ ಚಿನ್ನಾಭರಣಗಳನ್ನು ಕದ್ದಿದ್ದಾಳೆ ಎಂಬ ಶಂಕೆಯ ಮೇಲೆ ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಲಾಗಿದೆ ಎಂಬ ಆರೋಪ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಮೂವರು ಮಹಿಳಾ ಪೊಲೀಸ್ ಅಧಿಕಾರಿಗಳು ಮತ್ತು ಸಬ್ಇನ್ಸ್‌ಪೆಕ್ಟರ್ ಮುತ್ತುಮಲೈ ಅವರನ್ನು ಅಮಾನತುಗೊಳಿಸಲಾಗಿದೆ. ಇದನ್ನೂ ಓದಿ: ನವಜೋತ್‌ ಸಿಂಗ್‌ ಸಿಧುಗೆ 1 ವರ್ಷ ಜೈಲು ಶಿಕ್ಷೆ

marriage

ಸುಮತಿ (42) ಕಸ್ಟಡಿಯೊಳಗೆ ಚಿತ್ರಹಿಂಸೆಗೊಳಗಾದ ಮಹಿಳೆ. ತೂತುಕುಡಿ ಜಿಲ್ಲೆಯ ಮುತ್ತಯ್ಯಪುರಂ ಗ್ರಾಮದಲ್ಲಿ ಘಟನೆ ವರದಿಯಾಗಿದೆ. ಈ ಹಿಂದೆ ಪ್ರಭಾಕರನ್ (45) ತಮಗೆ ಸೇರಿದ ಚಿನ್ನಾಭರಣಗಳನ್ನು ಕಳ್ಳತನ ಮಾಡಲಾಗಿದೆ ಎಂದು ದೂರು ನೀಡಿದ್ದರು. ಈ ಹಿನ್ನೆಲೆ ಮಹಿಳೆಯನ್ನು ಪೊಲೀಸ್ ಅಧಿಕಾರಿಗಳು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡಿದ್ದರು.

RR NAGAR HOSPITAL 4

ಮೇ 4ರಂದು ಮದುವೆ ಮಂಟಪದಲ್ಲಿರುವ ವಧುವಿನ ಕೊಠಡಿಯಲ್ಲಿದ್ದ 4ರಿಂದ 5 ಕೆಜಿ ಮೌಲ್ಯದ ಚಿನ್ನಾಭರಣಗಳು ನಾಪತ್ತೆಯಾಗಿದ್ದವು. ಮೇ 7ರಂದು ಸುಮತಿ ಅವರನ್ನು ವಿಚಾರಣೆಗೆ ಕರೆದೊಯ್ದಾಗ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಲಾಗಿತ್ತು. ಇದನ್ನೂ ಓದಿ: ಶಿವಲಿಂಗದ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ AIMIM ನಾಯಕ ಅರೆಸ್ಟ್

ಮಹಿಳೆಯನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಮುತ್ತಯ್ಯಪುರಂ ಪೊಲೀಸ್ ಅಧಿಕಾರಿಗಳು, ಪೊಲೀಸ್ ಠಾಣೆಯಲ್ಲಿ ಮಹಿಳೆಗೆ ಚಿತ್ರಹಿಂಸೆ ನೀಡಿದ್ದಾರೆ. ನಂತರ ಸುಮತಿ ತೂತುಕುಡಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು.

Police Jeep

ಘಟನೆಯ ನಂತರ ಸುಮತಿ ತೂತುಕುಡಿ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ), ಬಾಲಾಜಿ ಸರವಣನ್ ಅವರಿಗೆ ಅಧಿಕೃತ ದೂರು ದಾಖಲಿಸಿದ್ದಾರೆ. ವಿಚಾರಣೆಯ ನಂತರ, ಸಂತ್ರಸ್ತೆ ಸುಮತಿಯನ್ನು ಎಫ್‍ಐಆರ್ ಅಥವಾ ಔಪಚಾರಿಕ ದೂರು ಇಲ್ಲದೆ ಠಾಣೆಯಲ್ಲಿ ಇರಿಸಲಾಗಿದೆ ಎಂದು ತಿಳಿದು ಬಂದಿದೆ.

ದೂರಿನ ಮೇರೆಗೆ ಎಸ್‍ಪಿ ತಕ್ಷಣ ಕ್ರಮ ಕೈಗೊಂಡು ಮೂವರು ಮಹಿಳಾ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಾರೆ. ಮರ್ಸಿನಾ, ಕಲ್ಪನಾ ಮತ್ತು ಉಮಾ ಮಹೇಶ್ವರಿ. ಮತ್ತೊಬ್ಬ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದ್ದು, (ಎಸ್ಪಿ) ಮುತ್ತುಮಲೈ ಅವರನ್ನು ಅಮಾನತುಗೊಳಿಸಿದ್ದಾರೆ.

Share This Article