ಕಮಲ್ ಹಾಸನ್ (Kamal Haasan) ನಟನೆಯ ‘ಇಂಡಿಯನ್ 2’ (Indian 2) ನಟನೆಯ ಇದೇ ಜುಲೈ 12ಕ್ಕೆ ರಿಲೀಸ್‌ಗೆ ಸಿದ್ಧವಾಗಿದೆ. ಇದೀಗ ಬಜೆಟ್ ಮಿತಿ ಮೀರಲು ಕಾರಣವೇನು ಎಂಬುದನ್ನು ಸಂದರ್ಶನವೊಂದರಲ್ಲಿ ಕಮಲ್ ಹಾಸನ್ ತಿಳಿಸಿದ್ದಾರೆ. ಇದನ್ನೂ ಓದಿ:ತಮಿಳು ನಟ ಜಯಂ ರವಿ ಬಾಳಲ್ಲಿ ಡಿವೋರ್ಸ್ ಬಿರುಗಾಳಿ?
ಕೊವಿಡ್ ಮತ್ತು ಸಿನಿಮಾ ಸೆಟ್‌ನಲ್ಲಿ ಆದ ಅವಘಡಗಳಿಂದ ಚಿತ್ರದ ಬಜೆಟ್ ಮೀರಿತು ಎಂದು ಕಮಲ್ ಹಾಸ್ ಮಾತನಾಡಿದ್ದಾರೆ. ಕಥೆ ಮತ್ತು ನಿರ್ದೇಶಕರು ನಮ್ಮ ಬಜೆಟ್ ನಿರ್ಧರಿಸಲಿಲ್ಲ. ಕೊವಿಡ್ ನಮ್ಮ ಬಜೆಟ್ ನಿರ್ಧರಿಸಿತು. ಸೆಟ್ ನಡೆದ ಅವಘಡದಿಂದ ಚಿತ್ರತಂಡಕ್ಕೆ ನಷ್ಟವಾಯಿತು. ಆದರೆ ಸಿನಿಮಾವನ್ನು ಕೈಬಿಡದೇ ಸಿನಿಮಾ ಪೂರ್ಣಗೊಳಿಸಿದರು ಎಂದು ಕಮಲ್ ಹಾಸನ್ ಮಾತನಾಡಿದ್ದಾರೆ.
1996ರಲ್ಲಿ ‘ಇಂಡಿಯನ್’ ಸಿನಿಮಾ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿತ್ತು. ಸೇನಾಪತಿ ಎಂಬ ಪಾತ್ರದಲ್ಲಿ ಕಮಲ್ ಹಾಸನ್ ಅವರು ಮಿಂಚಿದ್ದರು. ಅದರ ಮುಂದುವರಿದ ಭಾಗವಾಗಿ ‘ಇಂಡಿಯನ್ 2’ ಸಿನಿಮಾ ಮೂಡಿಬರುತ್ತಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ. ಕಮಲ್ ಹಾಸನ್ ಹಿರಿಯ ಸ್ವಾತಂತ್ರ‍್ಯ ಹೋರಾಟಗಾರನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದ್ದು, ಕಮಲ್ ಹಾಸನ್ ಮತ್ತದೇ ಅವತಾರದಲ್ಲಿ ನೋಡಬಹುದಾಗಿದೆ.
ಕಮಲ್ ಹಾಸನ್ ಜೊತೆಯಲ್ಲಿ ಸಿದ್ದಾರ್ಥ್, ಎಸ್ ಜೆ ಸೂರ್ಯ, ಕಾಜಲ್ ಅಗರ್ವಾಲ್, ರಾಕುಲ್ ಪ್ರೀತ್ ಸಿಂಗ್, ಪ್ರಿಯಾ ಭವಾನಿ ಶಂಕರ್, ಕಾಳಿದಾಸ್ ಜಯರಾಂ, ಗುಲ್ಶನ್ ಗ್ರೋವರ್, ನೆಡುಮುಡಿ ವೇಣು, ವಿವೇಕ್, ಸಮುದ್ರಕಣಿ, ಬಾಬಿ ಸಿಂಹ, ಗುರು ಸೋಮಸುಂದರಂ, ದೆಹಲಿ ಗಣೇಶ್, ಜಯಪ್ರಕಾಶ್, ಮನೋಬಾಲಾ, ವೆನ್ನೆಲಾ ಕಿಶೋರ್, ಮತ್ತು ದೀಪಾ ಶಂಕರ್ ತಾರಾಬಳಗದಲ್ಲಿದ್ದಾರೆ.
ಎಸ್. ಶಂಕರ್ ನಿರ್ದೇಶನದಲ್ಲಿ ‘ಇಂಡಿಯನ್ 2’ (Indian 2) ಸಿನಿಮಾ ಮೂಡಿ ಬರುತ್ತಿದ್ದು, ಲೈಕಾ ಪ್ರೊಡಕ್ಷನ್ಸ್ ಮತ್ತು ಉದಯನಿಧಿ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್ ಜಂಟಿಯಾಗಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅನಿರುದ್ಧ್ ರವಿಚಂದರ್ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ರವಿವರ್ಮನ್ ಹಾಗೂ ರತ್ನವೇಲು ಅವರು ಛಾಯಾಗ್ರಹಣ ಮಾಡಿದ್ದಾರೆ. ಎ. ಶ್ರೀಕರ್ ಪ್ರಸಾದ್ ಅವರು ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.