ಕಾಲಿವುಡ್‌ನ ಸ್ಟಾರ್ ನಟ ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ (Jana Nayagan) ಸಿನಿಮಾದಲ್ಲಿ ತಮಿಳಿನ ಖ್ಯಾತ ನಿರ್ದೇಶಕರು ಕಾಣಿಸಿಕೊಳ್ಳಲಿದ್ದಾರೆ ಎನ್ನಲಾದ ಸುದ್ದಿಯೊಂದು ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ:ಗೋಲ್ಡನ್ ಸ್ಟಾರ್ ಗಣೇಶ್‌ಗೆ ಜೋಡಿ- ಕನ್ನಡಕ್ಕೆ ಬಂದ ‘ಹನುಮಾನ್’ ಖ್ಯಾತಿಯ ಅಮೃತಾ ಅಯ್ಯರ್
‘ಜನ ನಾಯಗನ್’ ಸಿನಿಮಾದಲ್ಲಿ ಲೋಕೇಶ್ ಕನಕರಾಜ್ (Lokesh Kanagaraj), ನೆಲ್ಸನ್ ದಿಲೀಪ್ ಕುಮಾರ್ (Nelson Dileep Kumar), ‘ಜವಾನ್’ ಡೈರೆಕ್ಟರ್ ಅಟ್ಲಿ (Atlee Kumar) ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ವಿಶೇಷ ಗೀತೆಯೊಂದರಲ್ಲಿ ಈ ಮೂರು ಮಂದಿ ಸ್ಟಾರ್ ನಿರ್ದೇಶಕರು ಜೊತೆಯಾಗಿ ಕಾಣಿಸಿಕೊಳ್ಳಲಿದ್ದಾರೆ.
ವಿಜಯ್ ಆಪ್ತರಾಗಿರುವ ಈ ನಿರ್ದೇಶಕರು ನಟನ ಕೊನೆಯ ಚಿತ್ರಕ್ಕೆ ಸಾಥ್ ನೀಡುತ್ತಿದ್ದಾರೆ. ಕೆವಿಎನ್ ಸಂಸ್ಥೆ ನಿರ್ಮಾಣದ ಈ ಚಿತ್ರಕ್ಕೆ ಹೆಚ್. ವಿನೋದ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಕರಾವಳಿ ಬೆಡಗಿ ಪೂಜಾ ಹೆಗ್ಡೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಮೂಲಕ ವಿಜಯ್‌ಗೆ 2ನೇ ಬಾರಿ ಜೋಡಿಯಾಗಿ ನಟಿಸುತ್ತಿದ್ದಾರೆ. 2026ರಲ್ಲಿ ಚಿತ್ರ ರಿಲೀಸ್ ಆಗಲಿದೆ.