ನವದೆಹಲಿ: ತೆಲಂಗಾಣ ಮತ್ತು ಪುದುಚೇರಿ (Telangana Puducherry) ರಾಜ್ಯಪಾಲರಾಗಿದ್ದ (Governor) ತಮಿಳಿಸೈ ಸೌಂದರರಾಜನ್ (Dr. Tamilisai Soundararajan) ಅವರು ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರಿಗೆ ರಾಜೀನಾಮೆ ಸಲ್ಲಿಸಿದ ಅವರು ಈ ಬಾರಿಯ ಲೋಕಸಭಾ ಚುನಾವಣೆಯ (Lok Sabha Election) ಸಮಯದಲ್ಲಿ ತಮಿಳುನಾಡಿನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವ ಸಾಧ್ಯತೆಯಿದೆ. ಇದನ್ನೂ ಓದಿ: ಖ್ಯಾತ ಗಾಯಕಿ ಮಂಗ್ಲಿ ಕಾರಿಗೆ ಗುದ್ದಿದ ಟ್ರಕ್: ತಪ್ಪಿದ ಭಾರೀ ಅನಾಹುತ
Advertisement
Advertisement
ತಮಿಳಿಸೈ ಸೌಂದರರಾಜನ್ ಚೆನ್ನೈ ದಕ್ಷಿಣ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದ್ದು ಬಿಜೆಪಿಯ (BJP) ಮೂರನೇ ಪಟ್ಟಿಯಲ್ಲಿ ಅವರ ಹೆಸರು ಪ್ರಕಟವಾಗುವ ಸಾಧ್ಯತೆಯಿದೆ. ಇವರು 2019 ರವರೆಗೆ ತಮಿಳುನಾಡು ಬಿಜೆಪಿ ಮುಖ್ಯಸ್ಥರಾಗಿದ್ದರು.
Advertisement
2019 ರಲ್ಲಿ ಕೇರಳದಿಂದ ಸ್ಪರ್ಧಿಸಲು ಮಿಜೋರಾಂ ರಾಜ್ಯಪಾಲ ಕುಮ್ಮನಂ ರಾಜಶೇಖರನ್ ರಾಜೀನಾಮೆ ನೀಡಿ ಬಿಜೆಪಿಯಿಂದ ಸ್ಪರ್ಧಿಸಿದ್ದರು. ಇದನ್ನೂ ಓದಿ: ಬೆಂಗಳೂರಿನಿಂದ ಮೈಸೂರಿಗೆ – ಕಾಂಗ್ರೆಸ್‌ನಿಂದ ಡಿವಿಎಸ್ ಸ್ಪರ್ಧೆ?