ಗುರು ದೇಶಪಾಂಡೆ ಸಾರಥ್ಯದಲ್ಲಿ ಮೂಡಿ ಬಂದಿರುವ ಪೆಂಟಗನ್ ಸಿನಿಮಾದ ಒಂದು ಕಥೆಯಲ್ಲಿ ನಟಿ ತನಿಷಾ ಕುಪ್ಪಂಡ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ನಾಯಕನ ಜೊತೆ ಲಿಪ್ ಲಾಕ್ ಮತ್ತು ಬ್ಯಾಕ್ ಲೆಸ್ ಕಾರಣದಿಂದಾಗಿಯೂ ಸುದ್ದಿಯಾಗಿದ್ದಾರೆ. ಈ ಕುರಿತು ಅವರು ಮಾತನಾಡಿದ್ದು, ಈ ರೀತಿಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದು ನನಗೆ ಯಾವುದೇ ಮುಜಗರವಿಲ್ಲ. ಅಲ್ಲದೇ, ನೆಗೆಟಿವ್ ಕಾಮೆಂಟ್ ಗಳಿಗೆ ನಾನು ಕೇರ್ ಮಾಡುವುದಿಲ್ಲ ಎಂದಿದ್ದಾರೆ.
`ಮಂಗಳಗೌರಿ ಮದುವೆ’ (Mangala Gowri Maduve) ಸೀರಿಯಲ್ನಲ್ಲಿ ಖಡಕ್ ವಿಲನ್ ಆಗಿ ಮನಗೆದ್ದ ತನಿಷಾ ಕುಪ್ಪಂಡ (Tanisha Kuppanda) ಅವರು Pentagon ಸಿನಿಮಾದಲ್ಲಿ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಿರುವ ನಟಿ ತನಿಷಾ ಮುಜುಗರದ ಸನ್ನಿವೇಶವೊಂದು ಎದುರಾಗಿದೆ. ಸಂದರ್ಶನವೊಂದರಲ್ಲಿ ಯೂಟ್ಯೂಬರ್ ಅಸಭ್ಯ ಪ್ರಶ್ನೆಗೆ ತನಿಷಾ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ:ಮಗ ಸತ್ತಾಗ ಆತ್ಮಸ್ಥೈರ್ಯ ತುಂಬಿ ಜೊತೆಯಾಗಿದ್ದು, ಪ್ರಭುದೇವ: ಪ್ರಕಾಶ್ ರಾಜ್
ನೀವು ನೀಲಿ ಚಿತ್ರದಲ್ಲಿ ನಟಿಸಲು ಸಿದ್ಧವಿದ್ದೀರಾ? ಎಂದು ಓರ್ವ ಯೂಟ್ಯೂಬರ್ ಪ್ರಶ್ನೆ ಮಾಡಿದ್ದಾರೆ. ಆಗ ಸಿಟ್ಟಾದ ತನಿಷಾ ಕುಪ್ಪಂಡ ಹಾಗಿದ್ರೆ ನಾನು ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಇರಬಾರದಿತ್ತು. ನೀಲಿ ಸಿನಿಮಾ ಇಂಡಸ್ಟ್ರಿಯಲ್ಲೇ ಇರಬೇಕಿತ್ತು. ಬೋಲ್ಡ್ ಆಗಿ ನಟಿಸಿದ್ದೀವಿ ಅಂದ ಮಾತ್ರಕ್ಕೆ. ಈ ತರಹ ಪ್ರಶ್ನೆ ಕೇಳೋದ್ರಲ್ಲಿ ಅರ್ಥವೇ ಇಲ್ಲ. ನೀಲಿ ಚಿತ್ರದ ತಾರೆಯರು ಬೆತ್ತಲಾಗುತ್ತಾರೆ. ನಾನು ನೀಲಿ ಚಿತ್ರದ ತಾರೆಯಲ್ಲ. ಯಾಕೆ ಈ ರೀತಿ ಪ್ರಶ್ನೆ ಮಾಡ್ತಿದ್ದೀರಾ.? ಪ್ರಶ್ನೆ ಮಾಡೋಕೂ ಮುನ್ನ ನಿಮಗೆ ಕಾಮನ್ ಸೆನ್ಸ್ ಇರಬೇಕು. ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಯಾರು ಬೆತ್ತಲೆ ಸಿನಿಮಾ ಮಾಡ್ತಿದ್ದಾರೆ? ಯಾಕೆ ಈ ರೀತಿ ಅಸಭ್ಯವಾಗಿ ಪ್ರಶ್ನೆಯನ್ನ ಕೇಳುತ್ತಿದ್ದೀರಾ? ಎಂದು ಹೇಳಿ ಸಂದರ್ಶನವನ್ನ ಮೊಟಕುಗೊಳಿಸುತ್ತಾರೆ.
ಇದೇ ವೇಳೆ ಯೂಟ್ಯೂಬರ್ನ `ಪೆಂಟಗನ್’ ಚಿತ್ರತಂಡ ತರಾಟೆಗೆ ತೆಗೆದುಕೊಂಡಿದೆ. ಯೂಟ್ಯೂಬರ್ ವಿರುದ್ಧ ನಟಿ ತನಿಷ ಕುಪ್ಪಂಡ ಮತ್ತು ಚಿತ್ರತಂಡ ಕಿಡಿಕಾರಿದೆ. ತಮ್ಮ ಆಕ್ರೋಶವನ್ನ ತನಿಷಾ ಕುಪ್ಪಂಡ ಹೊರಹಾಕಿದ್ದಾರೆ.