– ಡೀಸೆಲ್ ತುಂಬಿಕೊಳ್ಳಲು ಮುಗಿಬಿದ್ದ ಸ್ಥಳೀಯರು
ತುಮಕೂರು: ಡೀಸೆಲ್ ಟ್ಯಾಂಕರ್ ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದು ಮೂವರು ಗಂಭೀರ ಗಾಯಗೊಂಡಿರುವ ಘಟನೆ ತುಮಕೂರು (Tumakuru) ಜಿಲ್ಲೆಯಲ್ಲಿ ನಡೆದಿದೆ.
Advertisement
ಕುಣಿಗಲ್ (Kunigal) ತಾಲ್ಲೂಕಿನ ಹುಲಿಯೂರುದುರ್ಗ ಬಳಿಯ ರಾಜ್ಯ ಹೆದ್ದಾರಿ 33ರಲ್ಲಿರುವ ದೊಡ್ಡಮಾವತ್ತೂರು ಟೋಲ್ ಬಳಿ ಅಪಘಾತ ಸಂಭವಿಸಿದೆ. ಕುಣಿಗಲ್ ಕಡೆಯಿಂದ ಮದ್ದೂರು ಕಡೆಗೆ ತೆರಳುತ್ತಿದ್ದ ಟೈಲ್ಸ್ ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮದ್ದೂರು ಕಡೆಯಿಂದ ಕುಣಿಗಲ್ ಕಡೆಗೆ ಬರುತ್ತಿದ್ದ ಡೀಸೆಲ್ ತುಂಬಿದ್ದ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ದೊಡ್ಡಮಾವತ್ತೂರು ಟೋಲ್‌ಗೆ ಗುದ್ದಿ ಸಿಬ್ಬಂದಿ ವಿಶ್ರಾಂತಿ ಕೊಠಡಿಗೆ ಲಾರಿ ನುಗ್ಗಿದ್ದು, ಟೋಲ್ ಸಂಪೂರ್ಣ ಜಖಂ ಆಗಿದೆ. ಇದನ್ನೂ ಓದಿ: ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ
Advertisement
Advertisement
ಇಂದು (ಮಂಗಳವಾರ) ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಡಿಸೆಲ್ ತುಂಬಿಕೊಳ್ಳಲು ಸ್ಥಳೀಯರು ಮುಗಿಬಿದ್ದಿದ್ದು, ಬಕೆಟ್, ಬಿಂದಿಗೆಗಳಲ್ಲಿ ಡೀಸೆಲ್ ತುಂಬಿಕೊಂಡು ಹೋಗಿದ್ದಾರೆ. ಇದನ್ನೂ ಓದಿ: ಮೆಟ್ರೋ ಟ್ರ‍್ಯಾಕ್‌ಗೆ ಹಾರಿ ಆತ್ಮಹತ್ಯೆಗೆ ಯತ್ನ – ಪ್ರಾಣಾಪಾಯದಿಂದ ಯುವಕ ಪಾರು
Advertisement
ಡೀಸೆಲ್ ಟ್ಯಾಂಕರ್ ಚಾಲಕ ಹಾಗೂ ಇಬ್ಬರು ಟೋಲ್ ಸಿಬ್ಬಂದಿಗೆ ಗಂಭೀರ ಗಾಯವಾಗಿದೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಮೃತೂರು ಪೊಲೀಸರು, ಹುಲಿಯೂರುದುರ್ಗ ಪೊಲೀಸರು, ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಸಿಬ್ಬಂದಿಗಳು ಧಾವಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಅಪರಾಧಿಗಳ ಮೇಲುಗೈ, ರಾಜ್ಯ ಪೊಲೀಸರಿಗೆ ಸತ್ವ ಇಲ್ಲ: ಶೋಭಾ ಕರಂದ್ಲಾಜೆ
ಡಿಸೇಲ್ ತುಂಬಿದ್ದ ಟ್ಯಾಂಕರ್ ಅನಾಹುತ ಆಗದಂತೆ ನೋಡಿಕೊಂಡಿದ್ದಾರೆ. ಮೂರು ಕ್ರೇನ್‌ಗಳ ಮೂಲಕ ವಾಹನಗಳನ್ನು ಮೇಲೆತ್ತಿದ್ದು, ವಾಹನಗಳ ಓಡಾಟಕ್ಕೆ ಪೊಲೀಸರು ಅವಕಾಶ ಮಾಡಿಕೊಟ್ಟಿದ್ದಾರೆ. ಗಾಯಾಳುಗಳು ಕುಣಿಗಲ್ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಯಾದಗಿರಿ| ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ನಿಧನ