ಕಲಬುರಗಿ: ಬೈಕ್ ಮತ್ತು ಕಾರಿಗೆ ಟ್ಯಾಂಕರ್ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಕಲಬುರಗಿ (Kalaburagi) ತಾಲೂಕಿನ ಅವರಾದ್ ಬಳಿ ನಡೆದಿದೆ.
ಬೈಕ್‌ನಲ್ಲಿದ್ದ ಇಬ್ಬರನ್ನು ಸಿರಡೋಣ ಗ್ರಾಮದ ನಾಗೇಂದ್ರ ಅಮೃತಪ್ಪ ಮತ್ತು ಶಿವಾನಂದ ಅಪ್ಪಾರಾವ ಎಂದು ಗುರುತಿಸಲಾಗಿದೆ. ಸಿರಡೋಣ ಗ್ರಾಮದ ಮೂವರು ಕೂಲಿ ಕೆಲಸ ಮುಗಿಸಿಕೊಂಡು ಒಂದೇ ಬೈಕ್‌ನಲ್ಲಿ ತಮ್ಮ ಗ್ರಾಮಕ್ಕೆ ಹಿಂತಿರುಗುತ್ತಿದ್ದರು ಎಂದು ತಿಳಿದುಬಂದಿದೆ. ಇನ್ನೂ ಕಾರಿನಲ್ಲಿದ್ದವರ ಗುರುತು ಪತ್ತೆಯಾಗಿಲ್ಲ.
ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಬೈಕ್ ಹಾಗೂ ಕಾರಿಗೆ ಟ್ಯಾಂಕರ್ ಡಿಕ್ಕಿಯಾಗಿದೆ. ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ಹಾಗೂ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿ: ಯುವತಿ ಸಾವು, ಐವರು ಗಂಭೀರ
ಸದ್ಯ ಘಟನಾ ಸ್ಥಳದಲ್ಲಿ ಕಲಬುರಗಿ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಘಟನೆಯಿಂದಾಗಿ ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.

