ಬೆಂಗಳೂರು: ನಗರದಲ್ಲಿ (Bengaluru) ರಸ್ತೆ ಗುಂಡಿ ಅವಾಂತರ ಮುಗಿಯದ ಕಥೆ ರೀತಿ ಆಗಿದೆ. ವರ್ತೂರಿನ ಗುಂಜೂರಿನಲ್ಲಿ ರಸ್ತೆ ಗುಂಡಿ ತಪ್ಪಿಸಲು ಬೈಕ್ (Bike) ಸವಾರ ಪರದಾಡುತ್ತಿದ್ದಾಗ ಆತನ ಬೈಕ್‌ಗೆ ಹಿಂಬದಿಯಿಂದ ಟ್ಯಾಂಕರ್ (Accident) ಡಿಕ್ಕಿಯಾಗಿದೆ.
ಟ್ಯಾಂಕರ್ ಡಿಕ್ಕಿಯಾಗುತ್ತಿದ್ದಂತೆ ಸವಾರ ಬೈಕ್ ಬಿಟ್ಟು ಜಿಗಿದಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ರಸ್ತೆ ಗುಂಡಿ ಇದ್ರೂ ವೇಗದಲ್ಲಿ ಬಂದು ನಿಯಂತ್ರಣ ತಪ್ಪಿ ಬೈಕ್‌ಗೆ ಗುದ್ದಿದ ನಂಬರ್ ಪ್ಲೇಟ್ ಇಲ್ಲದ ಟ್ಯಾಂಕರ್‌ನ್ನು ಇತರ ವಾಹನ ಸವಾರರು ಬೆನ್ನಟ್ಟಿ ಹಿಡಿದಿದ್ದಾರೆ. ಈ ವೇಳೆ ಡಿಎಲ್ ಕೂಡ ಇಲ್ಲದೇ ವಾಹನ ಓಡಿಸ್ತಾ ಇರೋದು ಗೊತ್ತಾಗಿದೆ. ಇದನ್ನೂ ಓದಿ: ಅಡಿಕೆ ತೋಟಕ್ಕೆ ನುಗ್ಗಿದ ಬಸ್ – ಓರ್ವ ಸಾವು, 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ರಸ್ತೆ ಗುಂಡಿಯಿಂದ ಅನೇಕರು ಸಾವನ್ನಪ್ಪಿದ್ದಾರೆ. ಆದರೂ ಜಿಬಿಎ (GBA) ಯಾವುದೇ ಕ್ರಮಕೈಗೊಂಡಿಲ್ಲ. ರಸ್ತೆ ಗುಂಡಿ ಮುಚ್ಚಲು ಬಿಡುಗಡೆಯಾಗುವ ಕೋಟಿ ಕೋಟಿ ಹಣ ಎಲ್ಲಿ ಹೋಯಿತು ಎಂದು ಸಾರ್ವಜನಿಕರು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಪ್ರೀತಿಸಿ ಮದುವೆಯಾಗಿದ್ದಕ್ಕೆ ಪತಿ ಕುಟುಂಬಸ್ಥರಿಂದ ಕಿರುಕುಳ – ಮಗುವನ್ನು ಕೊಂದು ನೇಣಿಗೆ ಶರಣಾದ ಮಹಿಳೆ

