Saturday, 21st July 2018

Recent News

ಲಾರಿ ಹಿಂಬದಿಗೆ ಟ್ಯಾಂಕರ್ ಡಿಕ್ಕಿ – ಚಾಲಕನನ್ನು ಹೊರ ತೆಗೆಯಲು ಹರಸಾಹಸ ಪಟ್ಟು ಸ್ಥಳೀಯರು

ಉಡುಪಿ: ಲಾರಿಯ ಹಿಂಬದಿಗೆ ಡಿಕ್ಕಿಯಾದ ಹೊಡೆದ ಪರಿಣಾಮ ಟ್ಯಾಂಕರ್ ಚಾಲಕ ಟ್ಯಾಂಕರ್ ಒಳಗಡೆ ಸಿಕ್ಕಿಹಾಕಿಕೊಂಡ ಘಟನೆ ಜಿಲ್ಲೆಯ ಕಾಪು ತಾಲೂಕಿನ ಪಾಂಗಳದಲ್ಲಿ ನಡೆದಿದೆ.

ತಮಿಳುನಾಡು ಮೂಲದ ಟ್ಯಾಂಕರ್ ಚಾಲಕ ಗಂಭೀರ ಗಾಯಗೊಂಡಿದ್ದು ಸ್ಥಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಡೆದಿದ್ದು ಏನು?
ಲಾರಿಯನ್ನು ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಟ್ಯಾಂಕರ್ ಬಲಕ್ಕೆ ತಿರುಗಿದ ವೇಳೆ ಅಪಘಾತ ನಡೆದಿದೆ. ಅಪಘಾತದ ರಭಸಕ್ಕೆ ಟ್ಯಾಂಕರ್ ಚಾಲಕ ಒಳಗಡೆ ಸಿಲುಕಿಕೊಂಡಿದ್ದರು. ಈ ವೇಳೆ ಸ್ಥಳೀಯರು ಹರಸಾಹಸ ಪಟ್ಟು ಚಾಲಕನ್ನು ವಾಹನದಿಂದ ಹೊರತಂದು ರಕ್ಷಣೆ ಮಾಡಿದ್ದಾರೆ. ಸದ್ಯ ಸ್ಥಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಳೆಯ ನಡುವೆಯೇ ಕ್ರೇನ್ ಸಹಾಯದಿಂದ ವಾಹನಗಳನ್ನು ತೆರವುಗೊಳಿಸುವ ಕಾರ್ಯ ಮಾಡಿದರು. ತೆರವು ಕಾರ್ಯಚಾರಣೆ ವಿಳಂಬವಾದ್ದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.

Leave a Reply

Your email address will not be published. Required fields are marked *