ವಿಜಯಪುರ: ಐಸಿಸ್ (ISIS) ಜೊತೆ ನನಗೆ ನಂಟು ಇರುವುದನ್ನು ಸಾಬೀತು ಪಡಿಸಿದರೆ ನಾನು ದೇಶ ತೊರೆಯುತ್ತೇನೆ ಎಂದು ಬಿಜೆಪಿ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್‌ಗೆ (Basanagouda Patil Yatnal) ತನ್ವೀರ್ ಪೀರಾ (Tanveer Peera) ಸವಾಲ್ ಎಸೆದಿದ್ದಾರೆ.
ತನಗೆ ಐಸಿಸ್ ಸಂಬಂಧ ಇದೆ ಎಂದು ಯತ್ನಾಳ್ ಆರೋಪಿಸಿದ್ದಕ್ಕೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಜಮತೆ-ಎ- ಅಲೆ- ಸನ್ನತ್ ಕರ್ನಾಟಕದ ಅಧ್ಯಕ್ಷ ಸೈಯದ್ ಮೊಹಮ್ಮದ್ ತನ್ವೀರ್ ಪೀರಾ ಸ್ಪಷ್ಟನೆ ನೀಡಿದ್ದಾರೆ.
Advertisement
Advertisement
ಮಾಧ್ಯಮ ಹೇಳಿಕೆಯಲ್ಲಿ ಏನಿದೆ?
ವಿಜಯಪುರ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ್ ಇವರ ಹೇಳಿಕೆಯನ್ನು ಗಮನಿಸಿದಾಗ ಅವರು ನನ್ನ ವಿರುದ್ಧ ಹೇಳಿಕೆ ನೀಡಿದ್ದು ಮೇಲ್ನೋಟಕ್ಕೆ ಕಂಡು ಬರುತ್ತದೆ. ಶಾಸಕರ ಈ ಹೇಳಿಕೆಯಲ್ಲಿ ಯಾವುದೇ ಸತ್ಯಾಂಶ ಇರುವುದಿಲ್ಲ ಮತ್ತು ಅವರು ಮುಸ್ಲಿಂ ಸಮಾಜದ (Muslim Community) ಬಗ್ಗೆ ಅವಹೇಳನಕಾರಿ ಹೇಳಿಕೆನ್ನು ಕೊಟ್ಟಿದ್ದಾರೆ. ತಮ್ಮ ರಾಜಕೀಯ ಬೇಳೆಯನ್ನು ಬೇಯಿಸುವುದಕ್ಕೆ ಈ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ವಿಜಯಪುರ ಶೂಟೌಟ್ ಕೇಸ್‌ನಲ್ಲಿ 3ನೇ ಆರೋಪಿ – ಸಿಎಂ ಜೊತೆ ವೇದಿಕೆ ಹಂಚಿಕೊಂಡಿದ್ದ ತನ್ವೀರ್ ಪೀರಾ ಯಾರು?
Advertisement
ನನ್ನ ಮೇಲೆ ಮಾಧ್ಯಮದ ಮೂಲಕ ಐಸಿಸ್ ಭಯೋತ್ಪಾದಕ ಸಂಘಟನೆ ಜೊತೆ ನಂಟಿದೆ ಎಂಬುದರ ಬಗ್ಗೆ ದಾಖಲೆ ಸಮೇತ ಬಿಡುಗಡೆ ಮಾಡುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ. ನಾನು ಅವರಿಗೆ ಮಾಧ್ಯಮದ ಮುಖಾಂತರ ನೇರ ಸವಾಲು ಹಾಕುತ್ತೇನೆ. ಒಂದು ವೇಳೆ ಯತ್ನಾಳ್ ಒಂದು ವಾರದೊಳಗೆ ಐಸಿಸ್ ಜೊತೆಗೆ ನಂಟಿದ್ದ ದಾಖಲೆ ಬಿಡುಗಡೆಗೊಳಿಸಬೇಕು. ಇಲ್ಲದಿದ್ದರೆ ಶಾಸಕರ ಸ್ಥಾನಕ್ಕೆ ರಾಜಿನಾಮೆ ಕೊಟ್ಟು ಪಾಕಿಸ್ತಾನಕ್ಕೆ (Pakistan) ಪಲಾಯನ ಮಾಡಬೇಕು. ನನಗೆ ಐಸಿಸ್ ಜೊತೆ ನಂಟಿದೆ ಎಂದು ಸಾಬೀತು ಪಡಿಸಿದರೆ ನಾನು ದೇಶವನ್ನು ತ್ಯಾಗ ಮಾಡುತ್ತೇನೆ.
Advertisement
ನಾನು ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶವನ್ನು ಪ್ರತಿನಿಧಿಸುತ್ತೇನೆ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಭಯೋತ್ಪಾದನೆ ಖಂಡಿಸುವ ಸಮ್ಮೇಳನದಲ್ಲಿ ದೇಶದ ಪ್ರತಿನಿಧಿಯಾಗಿ ಪಾಲ್ಗೊಂಡುತ್ತೇನೆ. ರಾಷ್ಟ್ರ ಮತ್ತು ರಾಜ್ಯಮಟ್ಟದ ಕೋಮು ಸೌಹಾರ್ದ ಸಮ್ಮೇಳನದಲ್ಲಿ ವಿವಿಧ ಧರ್ಮದ ಗುರುಗಳು, ಪೀಠಾಧಿಪತಿಗಳು, ಮಠಾಧೀಶರ ಜೊತೆಯಲ್ಲಿ ಪಾಲ್ಗೊಳ್ಳುತ್ತೇನೆ. ಇದನ್ನೂ ಓದಿ: ಸಿಎಂ ಐಸಿಸ್ ಉಗ್ರನ ಬೆಂಬಲಿಗನ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ: ಯತ್ನಾಳ್
ಈಗಾಗಲೇ ಮಾಧ್ಯಮದಲ್ಲಿ ಬಿಂಬಿಸುವ ಫೋಟೋಗಳು ಹಾಕಿ ಉಗ್ರರ ಜೊತೆ ನಂಟಿದೆಯಂದು ಸಾರ್ವಜನಿಕರಿಗೆ ತಪ್ಪು ಸಂದೇಶವನ್ನು ನೀಡುತ್ತಿದ್ದಾರೆ. ಮಾಧ್ಯಮದಲ್ಲಿ ಬಿಂಬಿಸುವ ಫೋಟೋಗಳು ನನ್ನ ಅಧಿಕೃತ ಫೇಸ್‌ಬುಕ್ ಖಾತೆ ಖಾದರಿ ಹೀಲಿಂಗ್‌ನಲ್ಲಿ ಸುಮಾರು ಹತ್ತು, ಹನ್ನೆರಡು ವರ್ಷ ಹಿಂದೆ ನಾನು ಇರಾಕ್ ದೇಶದ ಬಾಗ್ದಾದ್‌ಗೆ ನಗರದ ಅಂತರಾಷ್ಟ್ರೀಯ ಪ್ರಸಿದ್ಧ ಮಹಾನ್ ಸೂಫಿ ಮೆಹಬೂಬ ಎ ಸುಭಾನಿ ಗೌಸ ಎ ಆಜಮ ಇವರ ದರ್ಶನಕ್ಕೆ ಹೋದಾಗ ಅಲ್ಲಿನ ದರ್ಗಾದ ಪೀಠಾಧಿಪತಿಯಾದ ಖಾಲೀದ್ ಜಿಲಾನಿ ಅವರ ಆರ್ಶೀವಚನ ಪಡೆಯುವ ಸಂದರ್ಭದಲ್ಲಿ ತೆಗೆದಂತಹ ಫೋಟೋಗಳು. ಮತ್ತೊಂದು ಫೋಟೋದಲ್ಲಿ ಅವರ ಅಂಗ ರಕ್ಷಕ ನನ್ನನ್ನು ಅವರ ಪೀಠಕ್ಕೆ ಕರೆದುಕೊಂಡು ಹೋಗುವ ಸಮಯದಲ್ಲಿ ತೆಗೆದ ಫೋಟೋ ಎಂದು ಸ್ಪಷ್ಟನೆ ನೀಡಿದ್ದಾರೆ.