ರಾಯಚೂರು: ಜಗಜ್ಯೋತಿ ಬಸವಣ್ಣನವರ ಜಯಂತಿಯನ್ನ ರಾಯಚೂರಿನಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು. ನಗರದ ಬಸವೇಶ್ವರ ವೃತ್ತದಲ್ಲಿ ಮಾಲಾರ್ಪಣೆ ಮೂಲಕ ಗಣ್ಯರು ಬಸವ ಜಯಂತಿಗೆ ಚಾಲನೆ ನೀಡಿದರು. ಯುವಕರು ನಗರದಲ್ಲಿ ಬೃಹತ್ ಬೈಕ್ ರ್ಯಾಲಿ ನಡೆಸಿದ್ರು. ಬಳಿಕ ಇಲ್ಲಿನ ವೀರಶೈವ ಕಲ್ಯಾಣ ಮಂಟಪದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಬಸವಣ್ಣನವರ ವಿಚಾರಗಳ ಬಗ್ಗೆ ಹಲವಾರು ಗಣ್ಯರು ಬೆಳಕು ಚೆಲ್ಲಿದ್ರು.
Advertisement
ಈ ವೇಳೆ ರಾಯಚೂರು ಗ್ರಾಮೀಣ ಶಾಸಕ ತಿಪ್ಪರಾಜು ಹವಾಲ್ದಾರ್ ಜಿಲ್ಲಾ ಉಸ್ತುವಾರಿ ಸಚಿವ ತನ್ವೀರ್ ಸೇಠ್ ಗೈರಿನ ಬಗ್ಗೆ ಅಸಮಧಾನ ವ್ಯಕ್ತಪಡಿಸಿದರು. ಪೂರ್ವ ನಿಯೋಜಿತ ಕಾರ್ಯಕ್ರಮಕ್ಕೆ ಆಗಮಿಸದೆ ಸಚಿವರು ಬಸವ ಅನುವಾಯಿಗಳ ಮನಸ್ಸಿಗೆ ನೋವುಂಟು ಮಾಡಿದ್ದಾರೆ. ಕೂಡಲೇ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಅಂತ ತಿಪ್ಪರಾಜು ಆಗ್ರಹಿಸಿದರು.
Advertisement
Advertisement
ಕಾರ್ಯಕ್ರಮದಲ್ಲಿ ರಾಯಚೂರು ಸಂಸದ ಬಿ.ವಿ.ನಾಯಕ್, ರಾಯಚೂರು ಗ್ರಾಮೀಣ ಶಾಸಕ ತಿಪ್ಪರಾಜು ಹವಾಲ್ದಾರ್, ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು. ಇನ್ನೂ ಸಂಜೆ ವೇಳೆ ನಗರದ ವೀರಭದ್ರೇಶ್ವರ ದೇವಾಲಯದಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಬಸವಣ್ಣ ಭಾವಚಿತ್ರ ಮೆರವಣಿಗೆ ನಡೆಯಲಿದೆ.
Advertisement