ಲಕ್ನೋ: ಪಂಚರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪಂಜಾಬ್ ಹೊರತುಪಡಿಸಿ ಉಳಿದೆಲ್ಲ ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿ ಜಯ ಸಾಧಿಸಿತು. ಪ್ರತಿಷ್ಠೆಯ ಕಣವಾಗಿದ್ದ ಉತ್ತರ ಪ್ರದೇಶದಲ್ಲಿ 403 ಕ್ಷೇತ್ರಗಳ ಪೈಕಿ 273 ಕ್ಷೇತ್ರಗಳನ್ನು ಬಿಜೆಪಿ ತನ್ನ ತೆಕ್ಕೆಗೆ ತೆಗೆದುಕೊಂಡಿತ್ತು.
ಸಾರ್ವತ್ರಿಕ ಚುನಾವಣೆಯ ಮೂಲಕ ಮೊದಲ ಬಾರಿಗೆ ಗೆದ್ದು ಮತ್ತೆ ಸಿಎಂ ಆಗಿ ಯೋಗಿ ಆದಿತ್ಯನಾಥ್ ಅಧಿಕಾರ ಸ್ವೀಕರಿಸಿದ್ದರು. ಅಧಿಕಾರ ಸ್ವೀಕರಿಸಿದ ಕೆಲವೇ ತಿಂಗಳಲ್ಲಿ ಲೋಕಸಭಾ ಚುನಾವಣೆಯತ್ತ ಗಮನ ಹರಿಸಿದ್ದಾರೆ. ಇದನ್ನೂ ಓದಿ: ಐಪಿಎಲ್ ಫೈನಲ್‍ನಲ್ಲಿ ಕರ್ನಾಟಕದ ಕಲಾ ತಂಡಗಳ ಮೆರಗು
Advertisement
Advertisement
ಕಳೆದ ವಿಧಾನಸಭೆ ಚುನಾವಣೆಗಾಗಿ ಉತ್ತರ ಪ್ರದೇಶದ ಗುಡ್ಡಗಾಡು ಪ್ರದೇಶಗಳಲ್ಲಿ ಪೂರ್ಣ ಪ್ರಮಾಣದಲ್ಲಿ ವಿದ್ಯುತ್ ಪೂರೈಕೆ, ರಸ್ತೆ, ರೈಲು ಸೇರಿದಂತೆ ಮೂಲ ಸೌಕರ್ಯಗಳನ್ನು ಹೆಚ್ಚಳ ಮಾಡಲಾಯಿತು. ಪ್ರತಿ ಬೂತ್ ಮಟ್ಟದಲ್ಲಿ ಹತ್ತು ಸಭೆಗಳನ್ನು ನಡೆಸಿ ತಳ ಹಂತದಲ್ಲಿ ಪಕ್ಷ ಸಂಘಟಿಸಲಾಯಿತು ಇನ್ನಿತರ ಅಂಶಗಳು ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆಲುವಿಗೆ ಕಾರಣವಾಗಿತ್ತು. ಇದನ್ನೂ ಓದಿ: ಮಹಿಳಾ ಶೌಚಾಲಯ ಪ್ರವೇಶಿಸಿ ಬಾಗಿಲು ಲಾಕ್ ಮಾಡಿಕೊಂಡ
Advertisement
ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ ನಂತರ ಲಕ್ನೋದಲ್ಲಿ ನಡೆದ ಮೊದಲ ಬಿಜೆಪಿಯ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಯೋಗಿ ಆದಿತ್ಯನಾಥ್ ಮಾತನಾಡಿದರು. ಈಗಾಗಲೇ 2024ರ ಲೋಕಸಭಾ ಚುನಾವಣೆಯಲ್ಲಿ 80 ಕ್ಷೇತ್ರಗಳ ಪೈಕಿ 75 ಕ್ಷೇತ್ರಗಳನ್ನು ಗೆಲ್ಲಲೇಬೇಕೆಂದು ಕರೆ ನೀಡಿರುವ ಸಿಎಂ ಈಗಿನಿಂದಲೇ ಪೂರ್ವ ತಯಾರಿ ಕೈಗೊಳ್ಳುವಂತೆ ಕಾರ್ಯಕರ್ತರಿಗೆ ಸೂಚನೆ ನೀಡಿದರು.
Advertisement
2019ರ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ 62 ಲೋಕಸಭಾ ಸ್ಥಾನಗಳನ್ನು ಗೆದ್ದಿದ್ದರೆ, ಅದರ ಮಿತ್ರ ಪಕ್ಷವಾದ ಅಪ್ನಾ ದಳ (ಎಸ್) 2 ಸ್ಥಾನಗಳಲ್ಲಿ ಮಾತ್ರ ವಿಜಯ ಸಾಧಿಸಿತ್ತು. ಈ ಬಾರಿ ಅತಿಹೆಚ್ಚು ಸ್ಥಾನಗಳನ್ನು ಗೆಲ್ಲಲೇಬೆಕೆಂದು ಈಗಿನಿಂದಲೇ ವೇದಿಕೆ ಸಿದ್ಧಪಡಿಸುತ್ತಿದೆ ಎಂದು ಹೇಳಿದರು.
ಕೋವಿಡ್ ಸಮಯದಲ್ಲಿ ಜನರ ಸಹಾಯ ಮತ್ತು ನಮ್ಮ ಕಠಿಣ ಪರಿಶ್ರಮದಿಂದ ನಾವು ವಿಧಾನಸಭಾ ಚುನಾವಣೆಯಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆದಿದ್ದೇವೆ. 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಾವು ಗೆಲ್ಲುವ ಗುರಿಯೊಂದಿಗೆ ಮುನ್ನಡೆಯಬೇಕು ಎಂದೂ ಸಲಹೆ ನೀಡಿದರು.