ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್‍ನಲ್ಲಿ ಭಯೋತ್ಪಾದಕರಿಂದ ಕಾಶ್ಮೀರಿ ಪಂಡಿತ್ ರಾಹುಲ್ ಭಟ್ ಹತ್ಯೆ ನಡೆದಿದೆ. ಈ ಹಿನ್ನೆಲೆ ಜಮ್ಮು-ಕಾಶ್ಮೀರದ ಮಾಜಿ ಸಿಎಂ ಮತ್ತು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಖಂಡಿಸಿದ್ದಾರೆ. ಈ ಹಿನ್ನೆಲೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ವಿರೋಧ ವ್ಯಕ್ತಪಡಿಸಿದ್ದಾರೆ.
Advertisement
ಟ್ವೀಟ್‍ನಲ್ಲಿ ಒಮರ್ ಅಬ್ದುಲ್ಲಾ ಅವರು, ರಾಹುಲ್ ಭಟ್ ಮೇಲಿನ ಹಂತಕ ಉಗ್ರಗಾಮಿ ದಾಳಿಯನ್ನು ನಾನು ನಿಸ್ಸಂದಿಗ್ಧವಾಗಿ ಖಂಡಿಸುತ್ತೇನೆ. ತಹಸಿಲ್ ಕಚೇರಿಯಲ್ಲಿ ಸರ್ಕಾರಿ ನೌಕರನಾಗಿದ್ದ ರಾಹುಲ್ ಅವರ ಮೇಲೆ ದಾಳಿ ನಡೆಸಲಾಯಿತು. ಈ ಹತ್ಯೆಯನ್ನು ಉದ್ದೇಶಪೂರ್ವಕವಾಗಿಯೇ ಮಾಡಲಾಗಿದೆ. ಇದು ಮುಂದುವರಿಯುತ್ತೆ. ಇದರಿಂದ ಜಮ್ಮು-ಕಾಶ್ಮೀರದಲ್ಲಿ ಭಯದ ಭಾವನೆ ಬೆಳೆಯುತ್ತ ಹೋಗುತ್ತೆ. ರಾಹುಲ್ ಕುಟುಂಬಕ್ಕೆ ನನ್ನ ಹೃತ್ಪೂರ್ವಕ ಸಂತಾಪ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ನಡು ರಸ್ತೆಯಲ್ಲಿ ಉಪನ್ಯಾಸಕನ ಬರ್ಬರ ಹತ್ಯೆ
Advertisement
I unequivocally condemn the murderous militant attack on Rahul Bhatt. Rahul was a government employee working in the Tehsil office in Chadoora where he was attacked. Targeted killings continue & a sense of fear grows unchecked. My heartfelt condolences to Rahul’s family. RIP.
— Omar Abdullah (@OmarAbdullah) May 12, 2022
Advertisement
ಭಟ್ ಅವರ ಜೀವನವು ಇಂದು ಕ್ರೂರವಾಗಿ ನಶಿಸಿರುವುದು ದುರಂತ. ರಾಹುಲ್ ಭಟ್ ವಿಶ್ರಾಂತಿ ಪಡೆಯಿರಿ ಎಂದು ಬರೆದುಕೊಂಡಿದ್ದಾರೆ.
Advertisement
ಕಾಶ್ಮೀರಿ ಪಂಡಿತ್ ರಾಹುಲ್ ಭಟ್ ಸರ್ಕಾರಿ ನೌಕರಾಗಿದ್ದರು. ಚದೂರ ಪ್ರದೇಶದಲ್ಲಿನ ಅವರ ಕಚೇರಿಯಲ್ಲಿಯೇ ಭಯೋತ್ಪಾದಕರು ನುಗ್ಗಿ ಅವರ ಮೇಲೆ ಗುಂಡು ಹಾರಿಸಿದ್ದಾರೆ. ಈ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಫಲಕಾರಿಯಾಗದೆ ಪ್ರಾಣ ಬಿಟ್ಟರು.
This young man had his entire life ahead of him & to know that his life was so cruelly extinguished today is tragic. Rest in peace Rahul Bhatt. pic.twitter.com/3OiM1UIRO7
— Omar Abdullah (@OmarAbdullah) May 12, 2022
ಪೊಲೀಸರು ಈ ಕುರಿತು ಮಾಹಿತಿ ಕೊಟ್ಟಿದ್ದು, ಭಟ್ ಅವರನ್ನು ತಕ್ಷಣವೇ ಚಿಕಿತ್ಸೆಗಾಗಿ ಶ್ರೀನಗರದ ಎಸ್‍ಎಂಎಚ್‍ಎಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು. ಪ್ರಾಥಮಿಕ ತನಿಖೆಯಿಂದ ಇಬ್ಬರು ಭಯೋತ್ಪಾದಕರು ಈ ಘೋರ ಅಪರಾಧದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಕೃತ್ಯಕ್ಕೆ ಪಿಸ್ತೂಲ್ ಬಳಸಿದ್ದಾರೆ ಎಂದು ವಿವರಿಸಿದರು. ಇದನ್ನೂ ಓದಿ: ಪಾಕ್‍ನಲ್ಲಿ ಹಿಂದೂ ದೇವಾಲಯ ಧ್ವಂಸ ಮಾಡಿದ 22 ಮಂದಿಗೆ 5 ವರ್ಷ ಜೈಲು ಶಿಕ್ಷೆ
ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಕೂಡ ರಾಹುಲ್ ಭಟ್ ಅವರ ಬರ್ಬರ ಹತ್ಯೆಯನ್ನು ಖಂಡಿಸಿದ್ದಾರೆ. ಈ ಹೇಯ ಭಯೋತ್ಪಾದನಾ ದಾಳಿಯ ಹಿಂದಿರುವವರನ್ನು ಶಿಕ್ಷಿಸಲೇ ಬೇಕು. ದುಃಖತಪ್ತ ಕುಟುಂಬದೊಂದಿಗೆ ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಒಗ್ಗಟ್ಟಿನಿಂದ ನಿಂತಿದೆ ಎಂದು ಭರವಸೆ ಕೊಟ್ಟರು.