ಹೈದರಾಬಾದ್: ಬಿಜೆಪಿಯು ಮುಸ್ಲಿಂ ಮಹಿಳೆಯರನ್ನ ಗುರಿಯಾಗಿಸಿಕೊಂಡು ಮತದಾನ ಪ್ರಕ್ರಿಯೆಯಲ್ಲಿ ಅಡೆತಡೆ ಸೃಷ್ಟಿಸುತ್ತಿದೆ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಅಧ್ಯಕ್ಷ ಅಸಾದುದ್ದೀನ್ ಓವೈಸಿ (Asaduddin Owaisi) ಕಿಡಿ ಕಾರಿದ್ದಾರೆ.
ಬುಧವಾರ ಸಾರ್ವಜನಿಕ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, ಬಿಜೆಪಿ ಮುಸ್ಲಿಂ ಮಹಿಳೆಯರನ್ನ (Muslim Womens) ಗುರಿಯಾಗಿಸಿಕೊಂಡು ಮತದಾನ ಪ್ರಕ್ರಿಯೆಯಲ್ಲಿ ಅಡೆತಡೆ ಸೃಷ್ಟಿಸುತ್ತಿದೆ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಕಾಂಬೋಡಿಯಾದಲ್ಲಿ ಮೋಸದ ಉದ್ಯೋಗ ಜಾಲಕ್ಕೆ ಸಿಲುಕಿದ್ದ 60 ಮಂದಿ ಭಾರತೀಯರ ರಕ್ಷಣೆ
Advertisement
Advertisement
ಬುರ್ಖಾ (Burqas) ಧರಿಸಿರುವ ಮಹಿಳೆಯರನ್ನು ವಿಶೇಷ ತಪಾಸಣೆಗೆ ಒಳಪಡಿಸಬೇಕು ಎಂದು ಬಿಜೆಪಿಯ ದೆಹಲಿ ಘಟಕ ಚುನಾವಣಾ ಆಯೋಗಕ್ಕೆ ತಿಳಿಸಿದೆ. ಇತ್ತೀಚೆಗೆ ತೆಲಂಗಾಣದ ಅಭ್ಯರ್ಥಿ ಕೂಡ ಮತದಾನದ ವೇಳೆ ಮುಸ್ಲಿಂ ಮಹಿಳೆರನ್ನ ಸಾರ್ವಜನಿಕವಾಗಿ ನಿಂದಿಸಿ ಕಿರುಕುಳ ನೀಡಿದ್ದರು. ಅಷ್ಟೇ ಅಲ್ಲ ಪ್ರತಿ ಚುನಾವಣೆಯಲ್ಲೂ ಬಿಜೆಪಿ ಮುಸ್ಲಿಂ ಮಹಿಳೆರಿಗೆ ಕಿರುಕುಳ ನೀಡಲು ಒಂದೊಂದೇ ದಾರಿಯನ್ನು ಕಂಡುಕೊಳ್ಳುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
Advertisement
ಚುನಾವಣಾ ಆಯೋಗ ಪರಿಶೀಲನೆಯ ನಂತರವೇ ಮತದಾನಕ್ಕೆ ಅವಕಾಶ ಮಾಡಿಕೊಡಲಿದೆ. ಪರಿಶೀಲನೆ ಮಾಡದೇ ಮತದಾನ ಯಾರೂ ಮಾಡುವುದಿಲ್ಲ. ಅದಕ್ಕಾಗಿಯೇ ಚುನಾವಣಾ ಆಯೋಗ ಸ್ಪಷ್ಟ ನಿಬಂಧನೆಗಳನ್ನು ಹೊಂದಿದೆ. ಆದ್ರೆ, ಬಿಜೆಪಿ ವಿಶೇಷ ಬೇಡಿಕೆಯೊಂದಿಗೆ ಮುಸ್ಲಿಂ ಮಹಿಳೆಯರಿಗೆ ಕಿರುಕುಳ ನೀಡುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿಗೆ ಕಸದ ಬುಟ್ಟಿಯ ಬಗ್ಗೆ ಸಾಕಷ್ಟು ಅನುಭವವಿದೆ: ಆಚಾರ್ಯ ಪ್ರಮೋದ್ ಕೃಷ್ಣಂ ಮತ್ತೆ ವಾಗ್ದಾಳಿ
Advertisement
ಮೇ 25ರಂದು 6ನೇ ಹಂತದ ಮತದಾನ:
ಮೇ 25ರಂದು 6ನೇ ಹಂತದ ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದ್ದು, ಒಟ್ಟು 6 ರಾಜ್ಯ ಮತ್ತು 2 ಕೇಂದ್ರಾಡಳಿತ ಪ್ರದೇಶಗಳ 58 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಬುಧವಾರ ಮತದಾನ ನಡೆಯುವ ಮೇಳೆ ಬುರ್ಖಾ ಧರಿಸಿ ಬರುವ ಮಹಿಳಾ ಮತದಾರರನ್ನ ವಿಶೇಷ ತಪಾಸಣೆಗೆ ಒಳಪಡಿಸಬೇಕು ಎಂದು ದೆಹಲಿ ಬಿಜೆಪಿ ನಿಯೋಗವು ಮುಖ್ಯ ಚುನಾವಣಾ ಅಧಿಕಾರಿ (ಸಿಇಒ)ಗಳಿಗೆ ಒತ್ತಾಯಿಸಿತ್ತು.
ಇತ್ತೀಚೆಗೆ ಹೈದ್ರಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರು ಮತಗಟ್ಟೆಯಲ್ಲಿ ಮುಸ್ಲಿಂ ಮಹಿಳೆಯರ ಮತದಾರರ ಗುರುತಿನ ಚೀಟಿಗಳನ್ನು ಖುದ್ದು ಪರಿಶೀಲಿಸಿದ್ದರು. ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡಿದ ಬಳಿಕ ಚುನಾವಣಾಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಇದನ್ನೂ ಓದಿ: 2047 ರವರೆಗೆ 24×7 ಕೆಲಸ ಮಾಡಬೇಕೆಂದು ದೇವರು ನನಗೆ ಆದೇಶಿಸಿದ್ದಾನೆ ಎಂದು ನಂಬಿದ್ದೇನೆ: ಮೋದಿ