ನವದೆಹಲಿ: ದೇಶಾದ್ಯಂತ ರಾಷ್ಟ್ರೀಯ ತನಿಖಾ ದಳ(NIA) ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಕಚೇರಿ ಮತ್ತು ನಾಯಕರ ನಿವಾಸದ ಮೇಲೆ ದಾಳಿ ನಡೆಸಿದೆ.
ಕರ್ನಾಟಕ, ಉತ್ತರ ಪ್ರದೇಶ, ತೆಲಂಗಾಣ, ಉತ್ತರ ಪ್ರದೇಶ, ಕೇರಳ, ತಮಿಳುನಾಡು ಸೇರಿದಂತೆ 10 ರಾಜ್ಯಗಳಲ್ಲಿ ದಾಳಿ ನಡೆಸಲಾಗಿದೆ. ಎನ್‌ಐಐ ಇತಿಹಾಸದಲ್ಲಿ ಅತಿ ದೊಡ್ಡ ದಾಳಿ ಇದಾಗಿದೆ. ಎಂದು ವರದಿಯಾಗಿದೆ.
Advertisement
ದೇಶದ ಹಲವು ಭಾಗಗಗಳಲ್ಲಿ ಎಸ್‌ಡಿಪಿಐ, ಪಿಎಫ್‌ಐ ರಾಜ್ಯ ಮತ್ತು ಜಿಲ್ಲಾ ಮಟ್ಟದ ನಾಯಕರ ಮನೆ ಮೇಲೆ ದಾಳಿ ನಡೆದಿದೆ. ಇದನ್ನೂ ಓದಿ: ಮಂಗಳೂರಿನ PFI, SDPI ಕಚೇರಿ ಮೇಲೆ NIA ದಾಳಿ
Advertisement
Advertisement
ದಾಳಿ ಯಾಕೆ?
ಭಯೋತ್ಪಾದನೆಗೆ ಧನಸಹಾಯ, ನಿಷೇಧಿತ ಸಂಸ್ಥೆಗಳ ಜೊತೆ ಸಂಪರ್ಕ, ದೇಶದಲ್ಲಿ ಗಲಭೆ ನಡೆಸಲು ಪ್ರಚೋದನೆ, ಮೂಲಭೂತವಾದಿ ವ್ಯಕ್ತಿಗಳಿಗೆ ತಮ್ಮ ಸಂಸ್ಥೆಯಲ್ಲಿ ಆಶ್ರಯ ಇತ್ಯಾದಿ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಎನ್‌ಐಎ ದೇಶಾದ್ಯಂತ ದಾಳಿ ನಡೆಸಿದೆ.
Advertisement
ಎಲ್ಲೆಲ್ಲಿ ದಾಳಿ?
ಕೇರಳದ ಮಲಪ್ಪುರಂ ಜಿಲ್ಲೆಯ ಮಂಜೇರಿಯಲ್ಲಿರುವ ಪಿಎಫ್‌ಐ ಅಧ್ಯಕ್ಷ ಒಎಂಎ ಸಲಾಂ ಮನೆ ಸೇರಿದಂತೆ ಪಿಎಫ್‌ಐ ರಾಜ್ಯ, ಜಿಲ್ಲಾ ಮಟ್ಟದ ನಾಯಕರ ಮನೆ ಮತ್ತು ಪಿಎಫ್‌ಐ ಕಚೇರಿ ಮೇಲೆ ದಾಳಿ ನಡೆದಿದೆ.
ತಮಿಳುನಾಡಿನ ಕೊಯಮತ್ತೂರು, ಕಡಲೂರು, ರಾಮನಾಡ್, ದಿಂಡುಗಲ್, ತೇಣಿ ಮತ್ತು ತೆಂಕಾಸಿ ಸೇರಿದಂತೆ ಹಲವು ಸ್ಥಳಗಳಲ್ಲಿ ಪಿಎಫ್‌ಐ ಪದಾಧಿಕಾರಿಗಳ ಮನೆಗಳನ್ನು ಎನ್‌ಐಎ ಶೋಧಿಸುತ್ತದೆ.