ವಾಷಿಂಗ್ಟನ್: ರಷ್ಯಾದಿಂದ (Russia) ಕಚ್ಚಾ ತೈಲ ಆಮದು ಮಾಡಿ ಉಕ್ರೇನ್ (Ukraine) ವಿರುದ್ಧದ ಯುದ್ಧಕ್ಕೆ ಸಹಕಾರ ನೀಡುತ್ತಿದೆ ಎನ್ನುವ ಹೇಳಿಕೆಗೆ ಭಾರತ ತಿರುಗೇಟು ಕೊಟ್ಟಬೆನ್ನಲ್ಲೇ ಟ್ರಂಪ್ ಮತ್ತಷ್ಟು ಸುಂಕ ವಿಧಿಸುವ ಬೆದರಿಕೆ ಹಾಕಿದ್ದಾರೆ. ಭಾರತದಿಂದ ಖರೀದಿಸುವ ಎಲ್ಲ ಆಮದು ವಸ್ತುಗಳ ಮೇಲೆ ಸುಂಕ ಗಣನೀಯ ಏರಿಕೆ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.
ಹೌದು. ಭಾರತ ರಷ್ಯಾದಿಂದ (India Russia) ದೊಡ್ಡ ಪ್ರಮಾಣದಲ್ಲಿ ಕಚ್ಚಾ ತೈಲ ಆಮದು ಮಾಡಿಕೊಳ್ಳುತ್ತಿದೆ. ಈ ಮೂಲಕ ದೊಡ್ಡ ಪ್ರಮಾಣದಲ್ಲಿ ಲಾಭ ಮಾಡಿಕೊಳ್ಳುತ್ತಿದೆ. ಭಾರತವು ದೊಡ್ಡ ಪ್ರಮಾಣದಲ್ಲಿ ರಷ್ಯಾದ ತೈಲ (Russian Oil) ಮಾತ್ರ ಖರೀದಿಸುತ್ತಿಲ್ಲ, ಖರೀದಿಸಿದ ತೈಲವನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಿ, ದೊಡ್ಡ ಪ್ರಮಾಣದ ಲಾಭ ಮಾಡಿಕೊಳ್ಳುತ್ತಿದೆ ಎಂದು ತಮ್ಮ ಸಾಮಾಜಿಕ ಜಾಲತಾಣ ‘ಟ್ರುಥ್ ಸೋಷಿಯಲ್ʼನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ನೀವು ರಷ್ಯಾದಿಂದ ಆಮದು ಮಾಡಬಹುದು, ನಾವು ಮಾಡಿದ್ರೆ ಯುದ್ಧಕ್ಕೆ ಫಂಡಿಂಗ್ ಹೇಗೆ: ಟ್ರಂಪ್‌ಗೆ ಭಾರತದ ಗುದ್ದು
ಅತ್ತ ರಷ್ಯಾದ ಯುದ್ಧ ಟ್ಯಾಂಕರ್‌ಗಳಿಂದ ಉಕ್ರೇನ್‌ನಲ್ಲಿ ಹಲವು ಜನ ಸಾಯುತ್ತಿದ್ದರೂ ಅವರು ಹೆದರುತ್ತಿಲ್ಲ. ಈ ಕಾರಣದಿಂದಲೇ, ಭಾರತದಿಂದ ಖರೀದಿಸುವ ಎಲ್ಲ ಸರಕುಗಳಿಗೂ ಸುಂಕವನ್ನ ಗಣನೀಯವಾಗಿ ಏರಿಕೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಭಾರತ, ಸುಂಕ ಹೇರುವ ಪರಿಣಾಮಗಳ ಕುರಿತು ಪರಿಶೀಲನೆ ನಡೆಸುತ್ತಿದ್ದು, ದೇಶದ ಹಿತಾಸಕ್ತಿ ಕಾಯಲು ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದೆ. ಇದನ್ನೂ ಓದಿ: ರಷ್ಯಾದ ತೈಲ ಖರೀದಿ ಮೂಲಕ ಉಕ್ರೇನ್ ವಿರುದ್ಧದ ಯುದ್ಧಕ್ಕೆ ಭಾರತ ಫಂಡಿಂಗ್ – ಅಮೆರಿಕ
ಭಾರತಕ್ಕಿಂತ ಪಾಕ್‌ಗೆ ಕಡಿಮೆ ಸುಂಕ
ಈಗಾಗಲೇ ಆಗಸ್ಟ್ 7ರಿಂದ ಅನ್ವಯವಾಗುವಂತೆ `ಭಾರತದಿಂದ ಆಮದು ಮಾಡಿಕೊಳ್ಳುವ ಎಲ್ಲ ಸರಕುಗಳಿಗೂ ಶೇ.25ರಷ್ಟು ಸುಂಕ ವಿಧಿಸುವ ಆದೇಶಕ್ಕೆ ಟ್ರಂಪ್ ಸಹಿ ಹಾಕಿದ್ದಾರೆ. ಆದ್ರೆ ಪಾಕಿಸ್ತಾನಕ್ಕೆ 19% ಸುಂಕ ವಿಧಿಸಿದ್ದಾರೆ. ಬೃಹತ್ ಪ್ರಮಾಣದಲ್ಲಿ ರಷ್ಯಾದ ಸೇನಾ ಉಪಕರಣಗಳು, ಕಚ್ಚಾ ತೈಲ ಖರೀದಿಸುತ್ತಿರುವ ಭಾರತದ ಮೇಲೆ ದಂಡ ವಿಧಿಸಲಾಗುವುದು ಎಂದು ಹೇಳಿದ್ದರು. ಆದ್ರೆ, ಯಾವ ದಿನಾಂಕದಿಂದ ಈ ನಿರ್ಧಾರ ಜಾರಿಗೆ ಬರಲಿದೆ ಎಂದು ತಿಳಿಸಿರಲಿಲ್ಲ.
ಅಲ್ಲದೇ ಒಂದು ದಿನದ ಹಿಂದೆಯಷ್ಟೇ, ಭಾರತ ರಷ್ಯಾದಿಂದ ಕಚ್ಚಾತೈಲ ಖರೀದಿ ಮಾಡುವ ಮೂಲಕ ಉಕ್ರೇನ್ ವಿರುದ್ಧದ ಯುದ್ಧಕ್ಕೆ ಪರೋಕ್ಷವಾಗಿ ಫಂಡಿಂಗ್ ಮಾಡುತ್ತಿದೆ ಎಂದು ಅಮೆರಿಕ ಆರೋಪಿಸಿತ್ತು. ಈ ಬೆನ್ನಲ್ಲೇ ಭಾರತ ಕೌಂಟರ್ ಕೊಟ್ಟಿತ್ತು. ನೀವು ರಷ್ಯಾದಿಂದ ಆಮದು ಮಾಡಬಹುದು, ನಾವು ಮಾಡಿದ್ರೆ ಯುದ್ಧಕ್ಕೆ ಫಂಡಿಂಗ್ ಹೇಗೆ ಆಗುತ್ತೆ? ಎಂದು ಪ್ರಶ್ನಿಸಿತ್ತು. ಈ ಬೆನ್ನಲ್ಲೇ ಸುಂಕ ಸಮರಕ್ಕೆ ಇಳಿದಿದ್ದಾರೆ. ಇದನ್ನೂ ಓದಿ: ಅಮೆರಿಕದಲ್ಲಿ ಕಾರು ಅಪಘಾತ; ನಾಪತ್ತೆಯಾಗಿದ್ದ ಭಾರತೀಯ ಮೂಲದ ನಾಲ್ವರ ಮೃತದೇಹ ಪತ್ತೆ
2ನೇ ಅತೀ ದೊಡ್ಡ ಖರೀದಿದಾರ
ಭಾರತವು ರಷ್ಯಾದಿಂದ ದೇಶದ ಅಗತ್ಯವಿರುವ ಕಚ್ಚಾತೈಲದ ಪೈಕಿ ಶೇ.35ರಿಂದ 40ರಷ್ಟು ಖರೀದಿಸುತ್ತಿದೆ. ಉಕ್ರೇನ್ ಜೊತೆಗಿನ ಯುದ್ಧ ಆರಂಭಕ್ಕೂ ಮುನ್ನ ಹೋಲಿಸಿದ್ರೆ, ಆಮದು ಪ್ರಮಾಣವು ಶೇ.0.2ರಷ್ಟು ಏರಿಕೆಯಾಗಿದೆ. ರಷ್ಯಾದಿಂದ ಗರಿಷ್ಠ ಪ್ರಮಾಣದ ಕಚ್ಚಾತೈಲ ಖರೀದಿಯಲ್ಲಿ ಚೀನಾ ಮೊದಲ ಸ್ಥಾನದಲ್ಲಿದ್ದರೆ, ಭಾರತವು ನಂತರದ ಸ್ಥಾನದಲ್ಲಿದೆ ಎಂದು ವರದಿಗಳು ತಿಳಿಸಿವೆ.