ನವದೆಹಲಿ: ಅಹಮದಾಬಾದ್ ಬಳಿ ನಡೆದ ಏರ್ ಇಂಡಿಯಾ (Air India) ವಿಮಾನ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಟಾಟಾ ಗ್ರೂಪ್ (Tata Group) 1 ಕೋಟಿ ರೂಪಾಯಿ ಪರಿಹಾರ ನೀಡಲಿದೆ ಎಂದು ಕಂಪನಿಯ ಅಧ್ಯಕ್ಷ ಎನ್ ಚಂದ್ರಶೇಖರನ್ (N Chandrasekaran) ಘೋಷಿಸಿದ್ದಾರೆ.
ಗಾಯಾಳುಗಳ ವೈದ್ಯಕೀಯ ವೆಚ್ಚವನ್ನು ಟಾಟಾ ಗ್ರೂಪ್ ಭರಿಸಲಿದೆ ಮತ್ತು ಅವರಿಗೆ ಅಗತ್ಯವಿರುವ ಎಲ್ಲಾ ಆರೈಕೆ ಮತ್ತು ಬೆಂಬಲ ದೊರೆಯುವಂತೆ ನೋಡಿಕೊಳ್ಳಲಿದೆ ಎಂದು ಅವರು ಹೇಳಿದರು.
ವಿಮಾನ ಪತನಗೊಂಡು ಬಿದ್ದ ಬಿ ಜೆ ಮೆಡಿಕಲ್ಸ್ ಹಾಸ್ಟೆಲ್ ನಿರ್ಮಾಣಕ್ಕೆ ನಾವು ಸಹಾಯ ಮಾಡುತ್ತೇವೆ ಎಂದು ಅವರು ತಿಳಿಸಿದರು. ಇದನ್ನೂ ಓದಿ: ಟೇಕಾಫ್ ಆದ 30 ಸೆಕೆಂಡ್‌ನಲ್ಲಿ ದೊಡ್ಡ ಶಬ್ಧ ಬಂತು – ಪವಾಡ ಸದೃಶವಾಗಿ ಏಕೈಕ ಪ್ರಯಾಣಿಕ ಪಾರು
ಈ ಕ್ಷಣದಲ್ಲಿ ನಾವು ಅನುಭವಿಸುತ್ತಿರುವ ದುಃಖವನ್ನು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬ ಮತ್ತು ಗಾಯಗೊಂಡವರ ಜೊತೆ ನಾವಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಜಸ್ಟ್ 10 ನಿಮಿಷ, ಟ್ರಾಫಿಕ್‌ನಲ್ಲಿ ಸಿಲುಕಿ ಲಕ್ಕಿ ಲೇಡಿ ಬಚಾವ್!
1932 ರಲ್ಲಿ ಜೆಆರ್‌ಡಿ ಟಾಟಾ ಅವರು ಟಾಟಾ ಏರ್‌ಲೈನ್ಸ್ ಸಂಸ್ಥೆಯನ್ನು ಆರಂಭಿಸಿದರು. ನಂತರ ಅದಕ್ಕೆ 1946ರಲ್ಲಿ ಏರ್ ಇಂಡಿಯಾ ಎಂದು ಮರುನಾಮಕರಣ ಮಾಡಲಾಯಿತು. ಕೇಂದ್ರ ಸರ್ಕಾರವು 1953 ರಲ್ಲಿ ಏರ್‌ಲೈನ್ಸ್‌ನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿತು. ಆದರೆ ಜೆಆರ್‌ಡಿ ಟಾಟಾ 1977ರವರೆಗೆ ಅದರ ಅಧ್ಯಕ್ಷರಾಗಿ ಮುಂದುವರಿದರು. ಸುಮಾರು 67 ವರ್ಷಗಳ ನಂತರ ಏರ್ ಇಂಡಿಯಾವನ್ನು ಟಾಟಾ ಸಂಸ್ಥೆ ಮತ್ತೆ ಪಡೆದುಕೊಂಡಿತ್ತು. ಸಾಲದ ಸುಳಿಯಲ್ಲಿದ್ದ ಏರ್ ಇಂಡಿಯಾವನ್ನು ಕೇಂದ್ರ ಸರ್ಕಾರವು ಅಕ್ಟೋಬರ್ 2021 ರಲ್ಲಿ 18,000 ಕೋಟಿ ರೂ.ಗೆ ಟಾಟಾ ಗ್ರೂಪ್ಸ್‌ಗೆ ಮಾರಾಟ ಮಾಡಿತ್ತು.