ಬೆಂಗಳೂರು/ನೆಲಮಂಗಲ: ಬೆಳ್ಳಂಬೆಳಗ್ಗೆ ಟಾಟಾ ಉತ್ಪನ್ನಗಳನ್ನು ಶೇಖರಣೆ ಮಾಡಿದ್ದ ಗೋದಾಮಿಗೆ ಬೆಂಕಿ ಬಿದ್ದು, ಲಕ್ಷಾಂತರ ಮೌಲ್ಯದ ದಿನ ಬಳಕೆಯ ಟಾಟಾ ಉತ್ಪನ್ನಗಳು ಸುಟ್ಟು ಕರಕಲಾಗಿರುವ ಘಟನೆ ಬೆಂಗಳೂರಿನ ಹೊರವಲಯ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ.
Advertisement
ನೆಲಮಂಗಲದ ಹ್ಯಾಡಾಳು ಸಮೀಪವಿರುವ ಕನ್ನಡ ಸೇನೆ ರಾಜ್ಯಾದ್ಯಕ್ಷ ಕೆ.ಆರ್.ಕುಮಾರ್ ಮಾಲೀಕತ್ವದ ಗೋದಾಮಿಗೆ ಬೆಂಕಿ ಆವರಿಸಿದ್ದು, ಧಗಧಗನೆ ಹೊತ್ತಿ ಉರಿದಿದೆ. ಇನ್ನೂ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ನೋಡ ನೊಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿದೆ. ಇದೀಗ ಸ್ಥಳಕ್ಕೆ ನೆಲಮಂಗಲ ಅಗ್ನಿಶಾಮಕ ದಳದ ನಾಲ್ಕು ವಾಹನಗಳಲ್ಲಿ ಆಗಮಿಸಿದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತರಲು ಪ್ರಯತ್ನಿಸಿದ್ದಾರೆ. ಇದನ್ನೂ ಓದಿ:ರಾಯನ್ ರಾಜ್ ಸರ್ಜಾಗೆ ದೇವರು ಪ್ರಪಂಚದ ಪ್ರತಿಯೊಂದು ಸಂತೋಷವನ್ನು ನೀಡಲಿ: ಸುಮಲತಾ
Advertisement
Advertisement
ಬೆಂಕಿ ನಂದಿಸುವ ವೇಳೆ ಗೋದಾಮಿನ ಶೀಟ್ ಬಿದ್ದು ಅಗ್ನಿಶಾಮಕ ದಳದ ಸಿಬ್ಬಂದಿಯೊಬ್ಬರಿಗೆ ಗಾಯವಾಗಿದ್ದು, ಇದೀಗ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನೆಲಮಂಗಲ ಗ್ರಾಮಾಂತರ ಪೊಲೀಸರು ಹಾಗೂ ಸಿಪಿಐ ಹರೀಶ್ ಪಿಎಸ್ ವಸಂತ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಟೋಕಿಯೋ ಪ್ಯಾರಾಲಂಪಿಕ್ಸ್ ಭಾರತೀಯ ಕ್ರೀಡಾ ಇತಿಹಾಸದಲ್ಲಿ ವಿಶೇಷ: ಮೋದಿ
Advertisement
ಈ ಕುರಿತಂತೆ ಕೆ.ಆರ್. ಕುಮಾರ್ ಮಾತನಾಡಿ, ನಾವು ಏಜೆನ್ಸಿಗೆ ಬಾಡಿಗೆ ನೀಡಿದ್ದೇವು. ಈ ಘಟನೆ ವಿದ್ಯುತ್ ಅವಘಡದಿಂದ ಅಗ್ನಿ ಸಂಭವಿಸಿದೆ ಎಂದು ಹೇಳಲಾಗಿದೆ. ಆದರೆ ಈ ಬಗ್ಗೆ ಯಾವುದೇ ನಿಖರವಾದ ಮಾಹಿತಿ ಇಲ್ಲ. ಸದ್ಯ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಾಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.