ನವದೆಹಲಿ: ಟಾಟಾ ಸನ್ಸ್ ಮಂಡಳಿಯಲ್ಲಿ ಮುಂದಿನ 5 ವರ್ಷಗಳ ವರೆಗೆ ನಟರಾಜನ್ ಚಂದ್ರಶೇಖರನ್ ಅವರು ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ.
ಎನ್ ಚಂದ್ರಶೇಖರನ್ 2017ರಲ್ಲಿ ಟಾಟಾ ಸನ್ಸ್ ಮಂಡಳಿಯ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ಅವರ 5 ವರ್ಷಗಳ ಅಧಿಕಾರ ಅವಧಿ ಮುಗಿದಿದ್ದು, ಮತ್ತೆ 5 ವರ್ಷಗಳ ಅಧ್ಯಕ್ಷೀಯ ಅವಧಿಯನ್ನು ನವೀಕರಿಸಲಾಗಿದೆ.
Advertisement
ಚಂದ್ರಶೇಖರನ್ 2016ರ ಅಕ್ಟೋಬರ್‌ನಲ್ಲಿ ಟಾಟಾ ಸನ್ಸ್ ಮಂಡಳಿಗೆ ಸೇರಿದ್ದರು. ಜನವರಿ 2017ರಲ್ಲಿ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ಇವರು 100ಕ್ಕೂ ಅಧಿಕ ಟಾಟಾ ಆಪರೇಟಿಂಗ್ ಕಂಪನಿಗಳ ಪ್ರವರ್ತಕರಾಗಿದ್ದು, 100 ಶತಕೋಟಿ ಡಾಲರ್‌ಗೂ ಹೆಚ್ಚಿನ ಆದಾಯ ಹೊಂದಿದ್ದಾರೆ. ಇದನ್ನೂ ಓದಿ: IPL 2022 Auction: ಲಿವಿಂಗ್‍ಸ್ಟೋನ್ ದುಬಾರಿ ವಿದೇಶಿ ಆಟಗಾರ – ಫಿಂಚ್, ಮಾರ್ಗನ್ ಅನ್‍ಸೋಲ್ಡ್
Advertisement
Advertisement
Advertisement
ಟಾಟಾ ಸ್ಟೀಲ್, ಟಾಟಾ ಮೋಟಾರ್ಸ್, ಟಾಟಾ ಪವರ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಸೇರಿದಂತೆ ಹಲವಾರು ಗ್ರೂಪ್ ಆಪರೇಟಿಂಗ್ ಕಂಪನಿಗಳ ಮಂಡಳಿಗೆ ಅಧ್ಯಕ್ಷರಾಗಿದ್ದಾರೆ. ಇದನ್ನೂ ಓದಿ: ಬಿಗ್ ಬಾಸ್ 15ರ ಸೆಟ್‌ಗೆ ಬೆಂಕಿ!
ಚಂದ್ರಶೇಖರನ್ ತಮ್ಮ ಅಧಿಕಾರಾವಧಿಯಲ್ಲಿ ಏರ್ ಇಂಡಿಯಾವನ್ನು ಮರಳಿ ಪಡೆದಿದ್ದಾರೆ. ಟಾಟಾ ಗ್ರೂಪ್‌ಗೆ ಏರ್ ಇಂಡಿಯಾವನ್ನು ಮರಳಿ ಪಡೆಯಲು ನಾವು ಉತ್ಸುಕರಾಗಿದ್ದೇವೆ. ಇದನ್ನು ವಿಶ್ವದರ್ಜೆಯ ವಿಮಾನಯಾನ ಮಾಡಲು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದರು.